Yadagiri: ಸಿಡಿಲು ಬಡಿದು ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಮೃತ್ಯು!
ಗಾಯಗೊಂಡ ಮೂವರು ಜಿಲ್ಲಾಸ್ಪತ್ರೆಗೆ ದಾಖಲು, ಜಿನಕೇರ ತಾಂಡಾದಲ್ಲಿ ಜರುಗಿದ ಘಟನೆ
Team Udayavani, Sep 23, 2024, 8:05 PM IST
ಯಾದಗಿರಿ: ಜಿಲ್ಲೆಯಲ್ಲಿ ಸೋಮವಾರ ಸಂಜೆ ಸುರಿದ ಗುಡುಗು ಸಹಿತ ಭಾರಿ ಮಳೆ ವೇಳೆ ಸಿಡಿಲು ಬಡಿದು ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟ ದಾರುಣ ಘಟನೆ ಯಾದಗಿರಿ ತಾಲೂಕಿನ ಜಿನಕೇರ ತಾಂಡಾದಲ್ಲಿ ನಡೆದಿದೆ.
ಯಾದಗಿರಿ ತಾಲೂಕಿನ ಜೀನಕೇರಾ ತಾಂಡಾದ ಕೀಶನ್ ಜಾಧವ್ (25), ಚನ್ನಪ್ಪ ಜಾಧವ್ (18), ಸುನೀಬಾಯಿ ರಾಠೋಡ (27), ನೇನು ಜಾಧವ್ (15) ನಾಲ್ವರು ಸಿಡಿಲು ಬಡಿದು ಮೃತಪಟ್ಟಿದ್ದಾರೆ. ಯಾದಗಿರಿ ಗ್ರಾಮೀಣ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಗ್ರಾಮೀಣ ಪೊಲೀಸ್ ಠಾಣೆ ಅಧಿಕಾರಿಗಳು ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ತಾಲೂಕಿನ ಜಿನಕೇರ ತಾಂಡಾದಲ್ಲಿ ಸೋಮವಾರ ಸಂಜೆ ಮಳೆ ಆರಂಭವಾಗುತ್ತಿದ್ದಂತೆಯೇ ಆಶ್ರಯಕ್ಕಾಗಿ ತಾಂಡಾದಲ್ಲಿನ ಚಿಕ್ಕದಾದ ಮುರಗಮ್ಮ ದೇವಿ ದೇವಸ್ಥಾನದಲ್ಲಿ ಜನರು ಆಶ್ರಯಕ್ಕಾಗಿ ನಿಂತಿದ್ದಾರೆ. ಮಳೆ ಜೋರಾಗಿ ಗುಡುಗು, ಮಿಂಚಿನ ಸದ್ದು ಹೆಚ್ಚಾದ ನಂತರ ಸ್ವಲ್ಪ ಹೊತ್ತಿನಲ್ಲಿಯೇ ಭಾರಿ ಸದ್ದಿನೊಂದಿಗೆ ಸಿಡಿಲು ನೇರವಾಗಿ ಗುಡಿಗೆ ಅಪ್ಪಳಿಸಿದ ಪರಿಣಾಮ ಒಳಗಿದ್ದವರ ಪೈಕಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಘಟನೆಯಲ್ಲಿ ಗಾಯಗೊಂಡ ಗಣೇಶ, ದರ್ಶನ್ ಹಾಗೂ ಮೌನೇಶ್ ಮೂವರನ್ನು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಗ್ರಾಮೀಣ ಠಾಣೆ ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunasagi: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಾಷ್ಟ ಶಿಲ್ಪಿ ಕಂಚಗಾರ ಇನ್ನಿಲ್ಲ
Yadgiri: ಯಾವುದೇ ರೈತರ ಭೂಮಿ ವಕ್ಫ್ ಗೆ ವರ್ಗಾವಣೆಯಾಗಿಲ್ಲ: ಸಚಿವ ದರ್ಶನಾಪುರ
JDS: ದೇವೇಗೌಡರ ಕುಟುಂಬ ಬಲಿ ಪಡೆಯೋದಾದ್ರೆ ಶಿವರಾಮೇಗೌಡ್ರು ಸಂಸದರಾಗ್ತಿದ್ರಾ?: ಕಂದಕೂರ
Hunasagi: ಕೃಷ್ಣಾನದಿಯಲ್ಲಿ ಕಾಲು ಜಾರಿ ಬಿದ್ದು ಇಬ್ಬರು ಸಾವು
Yadagiri: ಕೃಷ್ಣಾ ನದಿಯಲ್ಲಿ ಈಜಲು ಹೋಗಿ ಯುವಕರಿಬ್ಬರು ಸಾವು
MUST WATCH
ಹೊಸ ಸೇರ್ಪಡೆ
Viral: ಸೆ**ಕ್ಸ್ ಗಾಗಿ 65ರ ಮುದುಕನನ್ನು ವಿವಾಹವಾದ್ರಾ ಈ ನಟಿ? ನೆಟ್ಟಿಗರಿಂದ ಭಾರೀ ಟ್ರೋಲ್
INDvsNZ; ಗಿಲ್, ಪಂತ್, ವಾಷಿಂಗ್ಟನ್ ಬ್ಯಾಟಿಂಗ್ ನೆರವು; ಅಲ್ಪ ಮುನ್ನಡೆ ಸಾಧಿಸಿದ ಭಾರತ
Deepawali: ಬಾಂಬಿನ ಸದ್ದು ಮತ್ತು ಅಪ್ಪನ ಗುದ್ದು!
IPL ಚಾಂಪಿಯನ್ ಕ್ಯಾಪ್ಟನ್ ಅಯ್ಯರ್ ನನ್ನು ಕೆಕೆಆರ್ ಕೈಬಿಟ್ಟಿದ್ಯಾಕೆ?: ಉತ್ತರಿಸಿದ ಸಿಇಒ
Katapady: ಹಟ್ಟಿಗೊಬ್ಬರ ಖರೀದಿ ಹೆಸರಲ್ಲಿ ಮೋಸ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.