Toxic: ಯಶ್ ಬರ್ತ್ ಡೇಗೆ ʼಟಾಕ್ಸಿಕ್ʼನಿಂದ ಸಿಗಲಿದೆ ಬಿಗ್ ಅಪ್ಡೇಟ್; ಫ್ಯಾನ್ಸ್ ಥ್ರಿಲ್
Team Udayavani, Jan 6, 2025, 11:22 AM IST
ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ (Actor Yash) ʼಕೆಜಿಎಫ್ -2ʼ ಬಳಿಕ ಬಿಗ್ ಸ್ಕ್ರೀನ್ನಲ್ಲಿ ಕಾಣಿಸಿಕೊಳ್ಳುತ್ತಿರುವ ಬಿಗ್ ಬಜೆಟ್ ʼಟಾಕ್ಸಿಕ್ʼ (Toxic Movie) ಕುರಿತು ಪ್ಯಾನ್ ಇಂಡಿಯಾದಲ್ಲಿ ಬಹು ನಿರೀಕ್ಷೆಯನ್ನು ಇಟ್ಟುಕೊಳ್ಳಲಾಗಿದೆ.
ಜನವರಿ 8 ರಂದು ಯಶ್ ಅವರ ಹುಟ್ಟುಹಬ್ಬವಿದೆ. ಈ ಬಾರಿ ಯಶ್ ಅವರು ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುವುದಿಲ್ಲವೆಂದು ಹೇಳಿದ್ದಾರೆ. ಆದರೆ ಅಭಿಮಾನಿಗಳಿಗೆ ಯಶ್ ನಿರಾಸೆ ಮಾಡುತ್ತಿಲ್ಲ. ಫ್ಯಾನ್ಸ್ಗಳು ಅಂದುಕೊಂಡಂತೆ ಯಶ್ ʼಟಾಕ್ಸಿಕ್ʼ ಕುರಿತು ಬಿಗ್ ಅಪ್ಡೇಟ್ವೊಂದು ಅವರ ಬರ್ತ್ ಡೇ ದಿನವೇ ಸಿಗಲಿದೆ. ಆ ಮೂಲಕ ಅಭಿಮಾನಿಗಳಿಗೆ ದೊಡ್ಡ ಗಿಫ್ಟ್ ಸಿಗಲಿದೆ.
ಜನವರಿ 8ರ ಬೆಳಿಗ್ಗೆ 10.25ಕ್ಕೆ ಸಿನಿಮಾದ ಕುರಿತ ತುಣುಕವೊಂದನ್ನು ರಿಲೀಸ್ ಮಾಡುವ ಯೋಜನೆಯನ್ನು ʼಟಾಕ್ಸಿಕ್ʼ ಚಿತ್ರತಂಡ ಹಾಕಿಕೊಂಡಿದೆ. ಇದನ್ನು ನಿರ್ಮಾಣ ಸಂಸ್ಥೆ ‘ಕೆವಿಎನ್ ಪ್ರೊಡಕ್ಷನ್ಸ್’ ಪೋಸ್ಟರ್ ವೊಂದರ ಮೂಲಕ ಹೇಳಿದೆ.
ಕಾರೊಂದರ ಮುಂದೆ ಯಶ್ ಸಿಗರೇಟ್ ಎಳೆಯುತ್ತ, ತಲೆಗೊಂದು ಟೋಪಿ ಹಾಕಿಕೊಂಡು ರೆಟ್ರೋ ಲುಕ್ನಲ್ಲಿ ಕಾಣಿಸಿಕೊಂಡಿದ್ದಾರೆ. ಅವರ ಲುಕ್ ನೋಡಿ ಫ್ಯಾನ್ಸ್ಗಳು ಥ್ರಿಲ್ ಆಗಿದ್ದಾರೆ.
View this post on Instagram
ಈಗಾಗಲೇ ಮುಂಬೈ ಸೇರಿದಂತೆ ಹಲವು ಕಡೆ ಚಿತ್ರೀಕರಣ ನಡೆಯುತ್ತಿದೆ. ಚಿತ್ರೀಕರಣದ ಹಂತದಲ್ಲೇ ಚಿತ್ರದ ಬಗ್ಗೆ ಕುತೂಹಲ ಹೆಚ್ಚಾಗಿದೆ.
ಮಾಲಿವುಡ್ನ ಗೀತು ಮೋಹನ್ದಾಸ್ ನಿರ್ದೇಶನದ ಈ ಸಿನಿಮಾದಲ್ಲಿ ಬಾಲಿವುಡ್ನ ಕಿಯಾರಾ ಅಡ್ವಾಣಿ, ಬಹುಭಾಷಾ ನಟಿ ನಯನತಾರಾ , ಅಕ್ಷಯ್ ಓಬೆರಾಯ್, ಹುಮಾ ಖುರೇಷಿ ಸೇರಿದಂತೆ ಹಾಲಿವುಡ್ನ ಕಲಾವಿದರು ಕಾಣಿಸಿಕೊಳ್ಳಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pushpa 2: ಕಾಲ್ತುಳಿತದ ಗಾಯಾಳು ಬಾಲಕನ ಭೇಟಿಯಾದ ಅಲ್ಲು ಅರ್ಜುನ್
Car Crash: ಕಾರು ರೇಸ್ ತರಬೇತಿ ವೇಳೆ ನಟ ಅಜಿತ್ ಕುಮಾರ್ ಕಾರು ಅಪಘಾತ!
ಕೌಟುಂಬಿಕ ದೌರ್ಜನ್ಯ ಆರೋಪ: ʼಬಿಂದಾಸ್ʼ ನಟಿ ಹನ್ಸಿಕಾ, ಸಹೋದರ, ತಾಯಿ ವಿರುದ್ಧ FIR ದಾಖಲು
Oscars 2025: ಹೀನಾಯವಾಗಿ ಸೋತರೂ ʼಆಸ್ಕರ್ʼ ಅರ್ಹತಾ ಸುತ್ತಿನಲ್ಲಿ ಕಾಣಿಸಿಕೊಂಡ ʼಕಂಗುವʼ
Tamil actor ವಿಶಾಲ್ಗೆ ಅನಾರೋಗ್ಯ?: ಅಭಿಮಾನಿಗಳಿಗೆ ಆತಂಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.