![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, Jun 21, 2023, 7:43 AM IST
ಬೆಂಗಳೂರು: ಅಡ್ಜಸ್ಟ್‌ಮೆಂಟ್ ರಾಜಕಾರಣ ಆರೋಪದ ಬಿಸಿ ಬಿಜೆಪಿಯಲ್ಲಿ ಇನ್ನೂ ತಳಮಳ ಸೃಷ್ಟಿಸುತ್ತಲೇ ಇದ್ದು, ವಿಪಕ್ಷ ನಾಯಕ ಸ್ಥಾನ ಹಾಗೂ ರಾಜ್ಯಾಧ್ಯಕ್ಷ ಹುದ್ದೆಗೆ ಹೊಸಬರ ನೇಮಕ ಸಾಧ್ಯತೆಗೆ ದಾರಿ ಮಾಡಿಕೊಟ್ಟಿದೆ.
ವಿಪಕ್ಷ ನಾಯಕ ಸ್ಥಾನಕ್ಕೆ ಬಸನಗೌಡ ಪಾಟೀಲ್ ಯತ್ನಾಳ್ ನೇಮಕ ಬಹುತೇಕ ಅಂತಿಮವಾಗಿದೆ. ಅದೇ ರೀತಿ ರಾಜ್ಯಾಧ್ಯಕ್ಷ ಹುದ್ದೆಗೆ ಮಾಜಿ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೆಸರು ಬಲವಾಗಿ ಕೇಳಿ ಬರುತ್ತಿದೆ. ಜತೆಗೆ ಶಾಸಕ ಬಿ.ವೈ.ವಿಜಯೇಂದ್ರ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಳ್ಳುವ ಸಾಧ್ಯತೆಯೂ ದಟ್ಟವಾಗಿದೆ. ಈ ಕಾಂಬಿನೇಷನ್‌ನಲ್ಲಿ ಲೋಕಸಭಾ ಚುನಾವಣೆ ಎದುರಿಸುವ ಬಗ್ಗೆ ಬಿಜೆಪಿಯಲ್ಲಿ ಚರ್ಚೆ ಬಲವಾಗಿ ನಡೆಯುತ್ತಿದೆ.
ಈ ಬೆಳವಣಿಗೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಕಂದಾಯ ಸಚಿವ ಆರ್.ಅಶೋಕ ಜೋಡಿ ಕಳವಳಗೊಳ್ಳುವಂತೆ ಮಾಡಿದೆ. ಯತ್ನಾಳ್, ಅಶ್ವತ್ಥನಾರಾಯಣ್ ಪಕ್ಷದ ಎರಡು ಆಯಕಟ್ಟಿನ ಹುದ್ದೆಗಳಲ್ಲಿ ಪ್ರತಿಷ್ಠಾಪನೆಗೊಂಡರೆ ಹಳೆ ತಲೆಮಾರಿನ ನಾಯಕರೆಲ್ಲರೂ ಬಹುತೇಕವಾಗಿ ತೆರೆಗೆ ಸರಿಯಬೇಕಾಗುತ್ತದೆ. ಈ ಹಿನ್ನೆಲೆಯಲ್ಲಿ ನಾವಿನ್ನು ಸಕ್ರಿಯ ರಾಜಕಾರಣದಲ್ಲಿ ಪ್ರಸ್ತುತ ಎಂಬುದನ್ನು ಬಿಂಬಿಸಿಕೊಳ್ಳುವುದಕ್ಕೆ ಬೊಮ್ಮಾಯಿ- ಅಶೋಕ್ ಜೋಡಿ ಪ್ರಯತ್ನಿಸುತ್ತಿದೆ. ಹೀಗಾಗಿಯೇ ರಾಜ್ಯ ಸರ್ಕಾರದ ವಿರುದ್ಧ ಆಕ್ರಮಣಕಾರಿ ನಡೆಯನ್ನು ಇವರಿಬ್ಬರು ಪ್ರದರ್ಶಿಸುತ್ತಿದ್ದಾರೆ ಎಂಬ ವ್ಯಾಖ್ಯಾನ ಈಗ ಬಿಜೆಪಿ ವಲಯದಲ್ಲೇ ಕೇಳಿ ಬಂದಿದೆ.
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್.ಡಿ.ದೇವೇಗೌಡ
Congress Siddu Team: ಸಿದ್ದರಾಮಯ್ಯ ಆಪ್ತರಿಂದ ಈಗ ʼಮಾಸ್ ಲೀಡರ್ʼ ಅಸ್ತ್ರ
You seem to have an Ad Blocker on.
To continue reading, please turn it off or whitelist Udayavani.