ಕಾಲಮಿತಿ ಇಲ್ಲದ ಮೀಸಲು ಅಧ್ಯಯನ ಸಮಿತಿ ರಚನೆ ಕಣ್ಣೊರೆಸುವ ತಂತ್ರ : ಯತ್ನಾಳ
ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ
Team Udayavani, Mar 12, 2021, 2:09 PM IST
ವಿಜಯಪುರ : ವರದಿ ನೀಡಲು ಗಡುವು ನೀಡದೇ ಪಂಚಮಸಾಲಿ ಸೇರಿದಂತೆ ಇತರೆ ಸಮುದಾಯಗಳ ಮೀಸಲು ನೀಡುವ ವಿಷಯವಾಗಿ ನಿವೃತ್ತ ನ್ಯಾಯಾಧೀಶರ ನೇತೃತ್ವದ ಸಮಿತಿ ರಚಿಸಿರುವುದು ಕಣ್ಣೊರೆಸುವ ತಂತ್ರ. ಇದಕ್ಕೆ ನಮ್ಮ ಸಹಮತವಿಲ್ಲ ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಪಂಚಮಸಾಲಿ ಸಮಾಜಕ್ಕೆ 2ಎ ಸೇರಿದಂತೆ ವಿವಿಧ ಸಮುದಾಯಕ್ಕೆ ಮೀಸಲಾತಿ ಅಧ್ಯಯನಕ್ಕೆ ಸರ್ಕಾರ ನಿವೃತ್ತ ನ್ಯಾಯಾಧೀಶರ ಸಮಿತಿ ರಚಿಸಿದ್ದು, ಕಾಲಮಿತಿ ನೀಡಬೇಕು. ಕಾಲಮಿತಿ ಇಲ್ಲದ ಸಮಿತಿ ಕಾಟಾಚಾರದ, ಟಿ.ಎ-ಡಿ.ಎ. ನೀಡಲು ಮಾತ್ರ ಸಮಿತಿ ಸೀಮಿತವಾದ ನೇಮಕ ಎನ್ನುವಂತಾಗುತ್ತದೆ.
ಗಡುವು ನೀಡದೇ ಸಮಿತಿ ರಚಿಸಿರುವುದು ಕೇವಲ ರಾಜಕೀಯ ಸ್ಟಂಟ್. ಬ್ರಾಹ್ಮಣರಿಗೆ ಕೇಂದ್ರ ಸರ್ಕಾರ ಶೇ10 ರಷ್ಟು ಮೀಸಲಾತಿ ಘೋಷಣೆ ಮಾಡಿದೆ. ಕರ್ನಾಟಕದಲ್ಲಿ ಅದು ಜಾರಿಯಾಗಿಲ್ಲ ಎಂದು ಹರಿಹಾಯ್ದರು. ಸಿಎಂ ಅವರ ಅಧಿಕಾರ ವ್ಯಾಪ್ತಿಯಲ್ಲಿ ಬರುವ ಜಾತಿಗಳಿಗೆ ಮೀಸಲಾತಿ ನೀಡಬೇಕು. ಎಸ್ಸಿ-ಎಸ್ಟಿ ಸಮುದಾಯಗಳ ಮೀಸಲ ಪ್ರಮಾಣ ಹೆಚ್ಚಳ ಕುರಿತು ರಾಜ್ಯ ಸರ್ಕಾರ ಕೇಂದ್ರಕ್ಕೆ ಶಿಫಾರಸು ಮಾಡಬೇಕು. ಈ ವಿಚಾರವಾಗಿ ಸ್ಪಷ್ಟನೆ ನೀಡುವುದಾಗಿ ಸಿ.ಎಂ. ಹೇಳಿದ್ದರು.
ಆದರೆ ಸದನದಲ್ಲಿ ಸಿ.ಎಂ. ಬದಲಾಗಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದರು. ಈ ಕುರಿತು ಸೋಮವಾರ ಸದನದಲ್ಲಿ ಸಿಎಂ ಎದುರೇ ಮತ್ತೆ ಪ್ರಸ್ತಾಪ ಮಾಡುತ್ತೇನೆ. ಮೀಸಲಾತಿ ನೀಡಲು ಎಷ್ಟು ಸಮಯ ಬೇಕು ಎಂದು ಸಿಎಂ ಯಡಿಯೂರಪ್ಪ ಹೇಳಲಿ. ಒಂದು ವರ್ಷದಲ್ಲಿ ಆಗುತ್ತೋ ಎರಡು ವರ್ಷದ ಆಗತ್ತೋ ಅಥವಾ ಒಂದು ಶತಮಾನ ಬೇಕಾಗಬಹುದು ಎಂಬುದನ್ನು ಸ್ಪಷ್ಟಪಡಿಸಲಿ ಎಂದ ಯತ್ನಾಳ ವ್ಯಂಗ್ಯವಾಡಿದರು.
ಸರ್ಕಾರದ ಸ್ಪಷ್ಟ ನಿರ್ಧಾರ ಬಹಿರಂಗವಾಗಲಿ. ಈ ವಿಚಾರವಾಗಿ ಸಿಎಂ ಅವರು ಸ್ಪಷ್ಟ ಉತ್ತರ ನೀಡದಿದ್ದರೆ ಸೋಮವಾರ ಅಧಿವೇಶನದಲ್ಲಿ ಪ್ರತಿಭಟನೆ ಮಾಡುವುದಾಗಿ ಎಚ್ಚರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.