ಯಡಿಯೂರಪ್ಪ 79 ನೇ ಜನ್ಮ ದಿನಾಚರಣೆ:ವಿಶೇಷ ಪೂಜೆ, ರೈತ ಪರ ಕಾಳಜಿ
ಹಾರ , ತುರಾಯಿ ಬೇಡ, ಸಂಭ್ರಮಿಸುವುದಿಲ್ಲ ಎಂದ ಮಾಜಿ ಸಿಎಂ
Team Udayavani, Feb 27, 2022, 10:41 AM IST
ಬೆಂಗಳೂರು : ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಭಾನುವಾರ 79 ನೇ ಹುಟ್ಟುಹಬ್ಬವನ್ನು ಆಚರಣೆ ಮಾಡಿಕೊಳ್ಳುತ್ತಿದ್ದು, ಬಿಜೆಪಿ ಮತ್ತು ಅವರ ಅಭಿಮಾಜಿಗಳು ಹಲವೆಡೆ ಸಾಮಾಜಿಕ ಕಾರ್ಯಗಳನ್ನು ಹಮ್ಮಿಕೊಂಡಿದ್ದಾರೆ.
ಬಿಎಸ್ ವೈ ಅವರು ಬೆಳಗ್ಗೆ ಸಂಜಯನಗರದ ರಾಧಾಕೃಷ್ಣ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ನಿವಾಸದಲ್ಲಿ, ಕುಟುಂಬ ಸದಸ್ಯರು ಮತ್ತು ಅಭಿಮಾನಿಗಳ ಸಮ್ಮುಖದಲ್ಲಿ ಬೃಹತ್ ಕೇಕ್ ಕತ್ತರಿಸಿ ಜನ್ಮದಿನ ಸಂಭ್ರಮದಲ್ಲಿ ಭಾಗಿಯಾದರು.
ಉಚಿತ ಆರೋಗ್ಯ ತಪಾಸಣಾ ಶಿಬಿರ
ಯಡಿಯೂರಪ್ಪ ಅವರ ಹುಟ್ಟು ಹಬ್ಬದ ಅಂಗವಾಗಿ ಮಹಾಲಕ್ಷ್ಮಿ ಲೇ ಔಟ್ ವಿಧಾನಸಭಾ ಕ್ಷೇತ್ರದ ನಂದಿನಿ ಬಡಾವಣೆಯಲ್ಲಿರುವ ಎಸ್.ಜಿ.ಇಂಟರ್ ನ್ಯಾಷನಲ್ ಸ್ಕೂಲ್ ಮುಂಭಾಗದ ಆಟದ ಮೈದಾನದಲ್ಲಿ ಹಮ್ಮಿಕೊಂಡಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ಹಾಗೂ ಅಂಗವಿಕಲರಿಗೆ ಚಕ್ರವಾಹನ ಗಳನ್ನು ಸ್ಥಳೀಯ ಶಾಸಕರೂ ಆದ ಅಬಕಾರಿ ಸಚಿವ ಕೆ.ಗೋಪಾಲಯ್ಯ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕೇಂದ್ರ ಮಾಜಿ ಸಚಿವ ಡಿ.ವಿ.ಸದಾನಂದ ಗೌಡ, ಎಸ್.ಹರೀಶ್, ರಾಘವೇಂದ್ರ ಶೆಟ್ಟಿ, ಸ್ಥಳೀಯ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.
ಹಾರ ತುರಾಯಿ ಬೇಡ
ಆತ್ಮೀಯರೇ, ಹಿತೈಷಿಗಳೇ, ಕೊರೋನಾ ಸಂಕಷ್ಟಗಳ ಹಿನ್ನಲೆಯಲ್ಲಿ, ನಾಳೆ ನನ್ನ ಹುಟ್ಟಿದ ದಿನವನ್ನು ಯಾವುದೇ ವಿಶೇಷ ರೀತಿಯಲ್ಲಿ ನಾನು ಆಚರಿಸಿಕೊಳ್ಳುತ್ತಿಲ್ಲ. ಆದ್ದರಿಂದ ಯಾರೂ ಕೂಡ ಹಾರ, ತುರಾಯಿ, ಉಡುಗೊರೆ ಇತ್ಯಾದಿ ತರಬೇಡಿ ಎಂದು ಕೋರುತ್ತೇನೆ. ನೀವು ಇದ್ದಲ್ಲಿಂದಲೇ ಹಾರೈಸಿ. ನಿಮ್ಮೆಲ್ಲರ ಪ್ರೀತಿ, ಅಭಿಮಾನ, ಆಶೀರ್ವಾದಗಳೇ ನನಗೆ ಶ್ರೀರಕ್ಷೆ. ಎಂದು ಕೇಳಿಕೊಂಡಿದ್ದರು.
ದೇವರು ಶಕ್ತಿ ಕೊಡಬೇಕು
ರೈತ ನಾಯಕ, ಸಂಘಟನೆಗೆ ಶಕ್ತಿ ತುಂಬಿದ ನಾಯಕರಿಗೆ 79 ನೇ ಜನ್ಮ ದಿನಾಚರಣೆ ಆಚರಿಸುತ್ತಿದ್ದು, ಆರೋಗ್ಯ ಹಾಗೂ ನಾಡನ್ನು ನಡೆಸುವ ಶಕ್ತಿ ದೇವರು ಕೊಡ್ಬೇಕು ಎಂದು ಪುತ್ರ, ಸಂಸದ ರಾಘವೇಂದ್ರ ಹೇಳಿಕೆ ನೀಡಿದ್ದಾರೆ.
ಹೋರಾಟ, ರೈತರ ಏಳಿಗೆಗೆ ಕೆಲಸ ಮಾಡಿದವರು ಹೀಗಾಗಿ ಜನರು ಬಂದು ಹರಸುತ್ತಿದ್ದಾರೆ . ಶಿಕಾರಿಪುರದಲ್ಲಿ ಮಾರ್ಚ್ 5 ರಂದು ಸನ್ಮಾನ ಸಮಾರಂಭ ಇಟ್ಟುಕೊಂಡಿದ್ದೇವೆ. ಶಿವಮೊಗ್ಗ ಕ್ಷೇತ್ರಕ್ಕೆ ನೀರಾವರಿ ಯೋಜನೆಗಳನ್ನ ಸಾಕಷ್ಟು ನೀಡಿದ್ದಾರೆ. ಹೀಗಾಗಿ ಅಭಿನಂದನಾ ಸಮಾರಂಭ ಇಟ್ಟುಕೊಂಡಿದ್ದೇವೆ. ಈ ಕಾರ್ಯಕ್ರಮಕ್ಕೆ ಸಿಎಂ ಹಾಗೂ ಸಚಿವರುಗಳು ಭಾಗಿಯಾಗುತ್ತಾರೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Congress Government: ಮೇಲ್ಮನೆ ನಾಮನಿರ್ದೇಶನ: ಕಾಂಗ್ರೆಸ್‌ನಲ್ಲಿ ಲಾಬಿ ಆರಂಭ
Congress; ನಾನು ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ: ಯತೀಂದ್ರ ಸಿದ್ದರಾಮಯ್ಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Bengaluru: ಮನೆಯ ಮುಂದೆ ಕುಳಿತು ಮೊಬೈಲ್ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!
Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು
Fraud: ಸೈಟ್ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ
Bengaluru: ಹೋಟೆಲ್‌ನ ಬಾತ್‌ರೂಮ್‌ನಲ್ಲಿ ಕಾರ್ಪೆಂಟರ್ ನೇಣಿಗೆ ಶರಣು
Arrested: ಉಸಿರುಗಟ್ಟಿಸಿ ಪತ್ನಿಯ ಕೊಂದು ಮಗುವಿನ ಜೊತೆಗೆ ಪತಿ ಪರಾರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.