ನಾಯಕತ್ವ ಬದಲಾವಣೆ ಊಹಾಪೋಹ: ಪ್ರಧಾನಿ ಮೋದಿ, ಶಾ ಭೇಟಿಗೆ ದೌಡಾಯಿಸಿದ ಸಿಎಂ ಯೋಗಿ
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿಯಾಗಲಿದ್ದಾರೆ ಎಂದು ಮೂಲಗಳು ಹೇಳಿವೆ.
Team Udayavani, Jun 10, 2021, 2:37 PM IST
ನವದೆಹಲಿ: ಉತ್ತರಪ್ರದೇಶದಲ್ಲಿ ನಾಯಕತ್ವ ಬದಲಾವಣೆಗೆ ಸಂಬಂಧಿಸಿದಂತೆ ದಟ್ಟವಾಗಿ ಊಹಾಪೋಹ ಹರಿದಾಡುತ್ತಿರುವ ಬೆನ್ನಲ್ಲೇ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಗುರುವಾರ(ಜೂನ್ 10) ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಚರ್ಚೆ ನಡೆಸಲಿದ್ದಾರೆ ಎಂದು ವರದಿ ತಿಳಿಸಿದೆ.
ಇದನ್ನೂ ಓದಿ:ಕೋವಿಡ್ ಹೆಚ್ಚಳ : ದಕ್ಷಿಣ ಕನ್ನಡ ಜಿಲ್ಲೆ ಮತ್ತೊಂದು ವಾರ ಲಾಕ್ : ಕೋಟ ಶ್ರೀನಿವಾಸ ಪೂಜಾರಿ
ಇಂದು 3ಗಂಟೆಗೆ ಸಿಎಂ ಯೋಗಿ ದೆಹಲಿಗೆ ಆಗಮಿಸುವ ನಿರೀಕ್ಷೆ ಇದ್ದು, ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ಹಾಗೂ ಶಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ ನಂತರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿಯಾಗಲಿದ್ದಾರೆ ಎಂದು ಮೂಲಗಳು ಹೇಳಿವೆ.
ಮುಂಬರುವ ಉತ್ತರಪ್ರದೇಶ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ನಾಯಕತ್ವ ಬದಲಾವಣೆ ಮಾಡಬೇಕೆಂಬ ರಾಜಕೀಯದ ಬಿಕ್ಕಟ್ಟಿನ ಊಹಾಪೋಹದ ಹಿನ್ನೆಲೆಯಲ್ಲಿ ಸಿಎಂ ಯೋಗಿ ಆದಿತ್ಯನಾಥ್ ಬಿಜೆಪಿ ಹೈಕಮಾಂಡ್ ವರಿಷ್ಠರನ್ನು ಭೇಟಿಯಾಗಿ ಮಾತುಕತೆ ನಡೆಸಲು ಆಗಮಿಸಲಿದ್ದಾರೆ ಎಂದು ವರದಿ ವಿವರಿಸಿದೆ.
ಉತ್ತರಪ್ರದೇಶ ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ತಿಂಗಳು ಬಾಕಿ ಇದ್ದು, ಏತನ್ಮಧ್ಯೆ ಕೋವಿಡ್ ಸೋಂಕು ಸಂದರ್ಭದಲ್ಲಿ ಯೋಗಿ ಆದಿತ್ಯನಾಥ್ ನೇತೃತ್ವದ ರಾಜ್ಯ ಸರ್ಕಾರ ಆಡಳಿತವನ್ನು ಸಮರ್ಪಕವಾಗಿ ನಿರ್ವಹಿಸುವಲ್ಲಿ ವಿಫಲವಾಗಿದೆ ಎಂದು ವಿಪಕ್ಷಗಳು ಆರೋಪಿಸಿದ್ದು, ಈ ಬಗ್ಗೆ ಬಿಜೆಪಿ ಹೈಕಮಾಂಡ್ ಕೂಡಾ ಪರಿಶೀಲನೆ ನಡೆಸುತ್ತಿರುವುದಾಗಿ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra polls: ಗೋಪಾಲ್ ಶೆಟ್ಟಿ ನಾಮಪತ್ರ ಹಿಂಪಡೆಯುವಲ್ಲಿ ಯಶಸ್ವಿಯಾದ ಬಿಜೆಪಿ
Maharashtra polls; ಫಲಿತಾಂಶದ ಬಳಿಕವೇ ಸಿಎಂ ಯಾರೆಂದು ನಿರ್ಧಾರ: ಕಾಂಗ್ರೆಸ್
Andhra; ಮಿತ್ರ ಪಕ್ಷ ಟಿಡಿಪಿಯ ಗೃಹ ಸಚಿವೆಗೇ ವಾರ್ನಿಂಗ್ ನೀಡಿದ ಡಿಸಿಎಂ ಪವನ್ ಕಲ್ಯಾಣ್!
Agra: ಭಾರತೀಯ ವಾಯುಪಡೆ ಮಿಗ್ 29 ಯುದ್ಧ ವಿಮಾನ ಪತನ, ಪೈಲಟ್ ಪಾರು
Jammu Kashmir: ಕಲಂ-370- ವಿಧಾನಸಭೆ ಮೊದಲ ಕಲಾಪದಲ್ಲೇ ಪಿಡಿಪಿ-ಬಿಜೆಪಿ ಕೋಲಾಹಲ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.