ಜಿಲ್ಲಾಧಿಕಾರಿಗಳೇ ಕೋವಿಡ್ ವಿರುದ್ಧ ಹೋರಾಟದ ಯುದ್ಧ ಕಮಾಂಡರ್ ಗಳು: ಪ್ರಧಾನಿ ಮೋದಿ
ತಮ್ಮ ಅಗತ್ಯಗಳಿಗೆ ತಕ್ಕಂತೆ ಮಾರ್ಪಡಿಸಿಕೊಳ್ಳುತ್ತಾರೆ. ಇದು ನಮ್ಮ ಹಳ್ಳಿಗಳ ಶಕ್ತಿಯಾಗಿದೆ ಎಂದು ಪ್ರಧಾನಿ ಮೋದಿ ತಿಳಿಸಿದರು.
Team Udayavani, May 18, 2021, 3:52 PM IST
ನವದೆಹಲಿ: ಕೋವಿಡ್ ವಿರುದ್ಧ ನೀವು ಯುದ್ಧ ಕಮಾಂಡರ್ ಗಳ ರೀತಿ ಹೋರಾಟ ನಡೆಸಬೇಕಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ(ಮೇ 18) ವಿಡಿಯೋ ಕಾನ್ಫರೆನ್ಸ್ ಮೂಲಕ ದೇಶದ ವಿವಿಧ ರಾಜ್ಯಗಳ ಜಿಲ್ಲಾಧಿಕಾರಿಗಳ ಜತೆ ಸಭೆ ನಡೆಸಿ ಸಲಹೆ ನೀಡಿದರು.
ಇದನ್ನೂ ಓದಿ:ಭಾರತ ಮಹಿಳಾ ಕ್ರಿಕೆಟ್ ತಂಡಕ್ಕೆ ಬ್ಯಾಟಿಂಗ್ ಕೋಚ್ ಆಗಿ ಶಿವಸುಂದರ್ ದಾಸ್ ಆಯ್ಕೆ
ಭಾರತಕ್ಕೆ ಕೋವಿಡ್ ಎರಡನೇ ಅಲೆ ಹರಡುತ್ತಿದ್ದು, ಈ ಸಂದರ್ಭದಲ್ಲಿ ಕೋವಿಡ್ ವಿರುದ್ಧ ಹೋರಾಟ ನಡೆಸಲು ನಿಮ್ಮೆಲ್ಲರ ಪಾತ್ರ ತುಂಬಾ ಮಹತ್ವದ್ದಾಗಿದೆ. ಈ ಹಿನ್ನೆಲೆಯಲ್ಲಿ ಈ ಹೋರಾಟದಲ್ಲಿ ನೀವು(ಜಿಲ್ಲಾಧಿಕಾರಿಗಳು) ಯುದ್ಧ ಕಮಾಂಡರ್ ಗಳಾಗಬೇಕು ಎಂದು ಪ್ರಧಾನಿ ಹೇಳಿದರು.
ಕೋವಿಡ್ ಮೊದಲ ಅಲೆಯ ಸಂದರ್ಭದಲ್ಲಿ ದೇಶದಲ್ಲಿ ಕೃಷಿ ಕ್ಷೇತ್ರವನ್ನು ಬಂದ್ ಮಾಡಿರಲಿಲ್ಲವಾಗಿತ್ತು. ಈ ವೇಳೆ ಗ್ರಾಮಸ್ಥರು ಸಾಮಾಜಿಕ ಅಂತರವನ್ನು ಕಾಪಾಡಿಕೊಂಡು ಕಾರ್ಯನಿರ್ವಹಿಸುವುದನ್ನು ಕಂಡು ಅಚ್ಚರಿಗೊಳಗಾಗಿರುವುದಾಗಿ ಪ್ರಧಾನಿ ತಿಳಿಸಿದರು.
ಗ್ರಾಮಸ್ಥರು ಮಾಹಿತಿಯನ್ನು ಗ್ರಹಿಸುತ್ತಾರೆ ಮತ್ತು ಅದನ್ನು ತಮ್ಮ ಅಗತ್ಯಗಳಿಗೆ ತಕ್ಕಂತೆ ಮಾರ್ಪಡಿಸಿಕೊಳ್ಳುತ್ತಾರೆ. ಇದು ನಮ್ಮ ಹಳ್ಳಿಗಳ ಶಕ್ತಿಯಾಗಿದೆ ಎಂದು ಪ್ರಧಾನಿ ಮೋದಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
BBK11: ಕ್ಯಾಪ್ಟನ್ ಹನುಮಂತುಗೆ ನಿಯತ್ತಿನ ಪ್ರಶ್ನೆ ಹಾಕಿ, ರೇಗಾಡಿದ ಚೈತ್ರಾ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.