ನನಗೆ ನೀವು ಶಕ್ತಿ ತುಂಬಿ: ಕನಕಪುರದಲ್ಲಿ ಡಿ.ಕೆ. ಶಿವಕುಮಾರ್ ಮತ ಯಾಚನೆ
Team Udayavani, May 9, 2023, 7:33 AM IST
ಕನಕಪುರ: “ತಾಲೂಕಿನ ನಿಮ್ಮ ಮನೆಯ ಒಬ್ಬ ಮಗನಿಗೆ ಮುಖ್ಯಮಂತ್ರಿಯಾಗುವ ಎಲ್ಲ ಅರ್ಹತೆ ಇದೆ. ಆತನಿಗೆ ನೀವು ಶಕ್ತಿ ಕೊಡಬೇಕು” ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮನವಿ ಮಾಡಿದರು.
ತಾಲೂಕು ಕ್ರೀಡಾಂಗಣದಲ್ಲಿ ಮಾತಯಾಚನೆ ಮಾಡಿ ಮಾತನಾಡಿದ ಅವರು, ಮೇ 10ರಂದು ನಡೆಯುವ ಮತದಾನ ಕೇವಲ ನನಗೆ ಮತ ಕೊಡುವ ದಿನ ಮಾತ್ರ ಅಲ್ಲ. ರಾಜ್ಯದ ಭವಿಷ್ಯವನ್ನು ಬದಲಾವಣೆ ಮಾಡುವ ದಿನ. ಭ್ರಷ್ಟ ಸರಕಾರವನ್ನು ಬಡಿದೋಡಿಸುವ ದಿನ. ಅದನ್ನು ಸರಿಯಾದ ರೀತಿಯಲ್ಲಿ ಉಪಯೋಗಿಸಿಕೊಳ್ಳಬೇಕು. ಇಡೀ ರಾಜ್ಯದ ಜನರು ನಿಮ್ಮ ತೀರ್ಪನ್ನು ಎದುರು ನೋಡುತ್ತಿದ್ದಾರೆ” ಎಂದು ಹೇಳಿದರು.
ನಮ್ಮದು ಅಭಿವೃದ್ಧಿಶೀಲ ರಾಜ್ಯ ಆಗಬೇಕು. ರೈತರ ಕೃಷಿ ಚಟುವಟಿಕೆಗೆ ಸರಿಯಾದ ನೀರಿನ ಸೌಲಭ್ಯವಿಲ್ಲ. ಬೆಳೆಗಳಿಗೆ ಸರಿಯಾದ ಬೆಲೆ ಇಲ್ಲ. ಹೀಗಾಗಿ ರೈತರ ಜೀವನ ಮಟ್ಟ ಸುಧಾರಣೆಗೆ ಕಾರ್ಯಕ್ರಮ ರೂಪಿಸಿದ್ದೇವೆ. ಮೇಕದಾಟು ಯೋಜನೆಗೆ ಮೀಸಲಿಟ್ಟ ಹಣವನ್ನು ಸರಕಾರ ನಯಾ ಪೈಸೆ ಖರ್ಚು ಮಾಡಿಲ್ಲ. ಡಬಲ್ ಎಂಜಿನ್ ಸರಕಾರ ಆ ಯೋಜನೆ ಜಾರಿಗೆ ತರುವ ಕೆಲಸ ಮಾಡಿಲ್ಲ. ನಿಮ್ಮ ಆಶೀರ್ವಾದದಿಂದ ನನಗೆ ಸಿಗುವ ಅವಕಾಶದಲ್ಲಿ ಮೇಕೆದಾಟು ಯೋಜನೆಗೆ ಅಡಿಗಲ್ಲು ಹಾಕುತ್ತೇನೆ ಎಂದು ಶಪಥ ಮಾಡಿದರು.
ರಾಜ್ಯದಲ್ಲಿ ಬದಲಾವಣೆ ಸರಕಾರ ತರಬೇಕು ಎಂದು ಜನ ಪ್ರಯತ್ನ ಮಾಡುತ್ತಿದ್ದಾರೆ. ದೇಶದ ಉದ್ದಗಲಕ್ಕೂ ಪ್ರವಾಸ ಮಾಡಿದ ಸಂದರ್ಭದಲ್ಲಿ ಜನ ತಮ್ಮ ನೋವನ್ನು ಹೇಳಿಕೊಂಡಿದ್ದಾರೆ. ಕಾಂಗ್ರೆಸ್ ಅಧ್ಯಕ್ಷನಾಗಿ ಇತಿಹಾಸ ಪುಟಕ್ಕೆ ಸೇರಬೇಕು ಎಂದು 5 ಗ್ಯಾರಂಟಿ ತೆಗೆದುಕೊಂಡು ಬಂದಿದ್ದೇನೆ. ನಮ್ಮ ಪಕ್ಷದ ಪ್ರಣಾಳಿಕೆ ಇಡೀ ದೇಶಕ್ಕೆ ಮಾದರಿ ಆಗಿದೆ. ನನ್ನ ಗೆಲುವೆಲ್ಲ ನಿಮ್ಮ ಗೆಲುವು, ನಿಮ್ಮ ಸ್ವಾಭಿಮಾನದ ಗೆಲುವು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!
CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್
ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!
ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ
ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್ ಕಾರಣವೇ?
MUST WATCH
ಹೊಸ ಸೇರ್ಪಡೆ
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.