ಹಿಜಾಬ್ ವಿವಾದ ಕೆಲವರಿಗೆ ತಿರುಗುಬಾಣ ಆಗುವುದು ಖಚಿತ: ಹೆಚ್ ಡಿಕೆ

ಮಕ್ಕಳಿಗೆ ಬುದ್ದಿ ಹೇಳಿ. ಚಿಕ್ಕ ಮಕ್ಕಳಲ್ಲಿ ದ್ವೇಷದ ಮನೋಭಾವನೆ ಬೆಳೆಸುವಂಥ ಕೆಲಸ ಬೇಡ

Team Udayavani, Feb 14, 2022, 1:01 PM IST

hdk

ಹಾಸನ: ಹಿಜಾಬ್ ವಿಚಾರದಲ್ಲಿ ನ್ಯಾಯಾಲಯದ ತೀರ್ಪು ಏನು ಬರುತ್ತದೋ ನೋಡೋಣ. ಆದರೆ, ವಿದ್ಯಾಭ್ಯಾಸ ಮಾಡುತ್ತಿರುವ ಮಕ್ಕಳ ಹೃದಯದಲ್ಲಿ ವಿಷ ತುಂಬುವ ಕೆಲಸವನ್ನು ಕೆಲವರು ವ್ಯವಸ್ಥಿತವಾಗಿ ಮಾಡುತ್ತಿದ್ದಾರೆ. ಇದರಲ್ಲಿ ಎರಡೂ ರಾಷ್ಟ್ರೀಯ ಪಕ್ಷಗಳ ಕುತಂತ್ರವೂ ಅಡಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ,ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿ, ಸಣ್ಣ ಪ್ರಮಾಣದಲ್ಲಿದ್ದ ಹಿಜಾಬ್ ವಿವಾದವನ್ನು ದೊಡ್ಡದು ಮಾಡಿದ್ದಾರೆ. ಇದರಲ್ಲಿ ಎಲ್ಲಾ ಸಮಾಜದ ಸಂಘಟನೆಗಳ ಪಾತ್ರವೂ ಇದೆ. ಇದು ವ್ಯವಸ್ಥಿತವಾಗಿ ಶುರುವಾಗಿದ್ದು, ಇದರ ಹಿಂದೆ ರಾಷ್ಟ್ರೀಯ ಪಕ್ಷಗಳ ಕುತಂತ್ರವೂ ಇದೆ. ಅದಕ್ಕೆ ಈ ವಿಷಯವನ್ನು ದೇಶವ್ಯಾಪಿ ಹರಡುವಂತೆ ಮಾಡಲಾಗುತ್ತಿದೆ. ಹಾಗಾಗಿ ಜನ ಇಂಥ ಭಾವನಾತ್ಮಕ ವಿಷಯಗಳಿಗೆ ಬಲಿಯಾಗಬಾರದು” ಎಂದರು.

ನಮಗೆಲ್ಲರಿಗೂ ಬೇಕಿರುವುದು ಬದುಕು ಮಾತ್ರ. ಬದುಕು ಕಟ್ಟುವ ನಿಟ್ಟಿನಲ್ಲಿ ಸರಕಾರ ಕೆಲಸ ಮಾಡಬೇಕು. ಸಮಾಜದಲ್ಲಿ ಅಶಾಂತಿ ಉಂಟು ಮಾಡುವ, ಸಮಾಜವನ್ನು ಹಾಳು ಮಾಡುವ ಕೆಲಸ ಆಗಬಾರದು ಎಂದರು.

ರಾಜ್ಯದಲ್ಲಿ ಹಿಜಾಬ್ ವಿವಾದ ಯಾಕೆ ಪ್ರಾರಂಭವಾಯಿತು? ಇದರ ಹಿಂದಿನ ದುರುದ್ದೇಶವೇನು? ಶಿಕ್ಷಣ ಕ್ಷೇತ್ರಕ್ಕೂ ಇದನ್ನು ಯಾಕೆ ತಂದರು? ಮಕ್ಕಳ ಹೃದಯ ಹಾಳು ಮಾಡಲು ಈ ರೀತಿ ಮಾಡಬೇಕಿತ್ತಾ? ಯಾವುದೋ ಒಂದು ಶಾಲೆಯಲ್ಲಿ ಆರಂಭವಾದ ವಿವಾದವನ್ನು ಅಲ್ಲಿಯೇ ಮುಗಿಸಬೇಕಿತ್ತು. ಆದರೆ ಅದನ್ನು ಅಲ್ಲಿಗೇ ಬಿಡುವುದು ಕೆಲವರಿಗೆ ಬೇಕಿರಲಿಲ್ಲ ಎಂದರು.

ಹಿಜಾಬ್ ವಿವಾದ ದೊಡ್ಡ ಮಟ್ಟದಲ್ಲಿ ಹರಡಿದರೆ ಇದರ ಮೆಲೆ ಭಾವನಾತ್ಮಕ ವಿಚಾರ ಇಟ್ಟು ಮತಗಳನ್ನಾಗಿ ಪರಿವರ್ತನೆ ಮಾಡಬಹುದು ಎನ್ನುವ ದುರಾಲೋಚನೆ ಇದರ ಹಿಂದೆ ಅಡಗಿದೆ. ಅದಕ್ಕಾಗಿ ಎಲ್ಲಾ ದುಷ್ಟ ಪ್ರಯತ್ನಗಳು ನಡೆಯುತ್ತಿವೆ. ಆದರೆ ಯಾವ ಕ್ಷಣದಲ್ಲಿ ಇದು ಯಾರಿಗೆ ತಿರಗುಬಾಣ ಆಗುತ್ತದೆ ಎನ್ನುವುದನ್ನು ನೋಡೊಣ ಎಂದು ಮಾರ್ಮಿಕವಾಗಿ ಹೇಳಿದರು.

ಪೋಷಕರು ಎಚ್ಚರ ವಹಿಸಬೇಕು. ನಿಮ್ಮ ಮಕ್ಕಳನ್ನು ದುರುಪಯೋಗ ಮಾಡಿಕೊಳ್ಳುವ ಯಾವುದೇ ಸಂಘಟನೆ ಇರಲಿ, ಅಂಥವರಿಗೆ ಅವಕಾಶ ಕೊಡಬೇಡಿ. ನಿಮ್ಮ ಮಕ್ಕಳನ್ನು ಅಂತಿಮವಾಗಿ ದಾರಿ ತಪ್ಪಿಸುತ್ತಿದ್ದಾರೆ. ಆ ಮಕ್ಕಳ ಭವಿಷ್ಯ ಹಾಳು ಮಾಡುತ್ತಿದ್ದಾರೆ. ನೈಜ ವಾತಾವರಣ ಏನಿದೆ ಎಂಬ ಬಗ್ಗೆ ಮಕ್ಕಳಿಗೆ ಬುದ್ದಿ ಹೇಳಿ. ಚಿಕ್ಕ ಮಕ್ಕಳಲ್ಲಿ ದ್ವೇಷದ ಮನೋಭಾವನೆ ಬೆಳೆಸುವಂಥ ಕೆಲಸ ಬೇಡ. ಸಮಾಜವನ್ನು ದಾರಿ ತಪ್ಪಿಸುವಂತಹ ಸಂಘಟನೆಗಳಿಗೆ ಯಾರೂ ಬಲಿಯಾಗುವುದು ಬೇಡ ಎಂದು ಅವರು ಕಿವಿಮಾತು ಹೇಳಿದರು.

ಒಂದೂವರೆ ತಿಂಗಳಲ್ಲಿ ಜೆಡಿಎಸ್‌ ಅಭ್ಯರ್ಥಿಗಳ ಪಟ್ಟಿ

ಹಾಸನ ಜಿಲ್ಲೆ ರಾಜಕಾರಣಕ್ಕೆ ಸಂಬಂಧಿಸಿ ನೇರವಾಗಿ ನನ್ನ ಪಾತ್ರವೇನೂ ಇಲ್ಲ ಎಂದ ಮಾಜಿ ಮುಖ್ಯಮಂತ್ರಿಗಳು; ಈ ಜಿಲ್ಲೆಯ ರಾಜಕಾರಣದಲ್ಲಿ ಇದುವರೆಗೂ ನಾನು ಮೂಗು ತೂರಿಸಿಲ್ಲ. ಆದರೆ, ಈ ಸಲ ಹಾಸನ ವಿಧಾನಸಭಾ ಕ್ಷೇತ್ರ ಒಂದನ್ನು ಮಾತ್ರ ಸೂಕ್ಷ್ಮವಾಗಿ ತೆಗೆದುಕೊಳ್ಳುತ್ತೇನೆ. ನಾನು ಸಿಎಂ ಆಗಿದ್ದ ವೇಳೆ ಹಾಸನ ಜಿಲ್ಲೆಗೆ ದೊಡ್ಡಮಟ್ಟದಲ್ಲಿ ಕೆಲಸ ಮಾಡಿದ್ದೇನೆ. ಹೀಗಾಗಿ ಹಾಸನ ವಿಧಾನಸಭೆ ಕ್ಷೇತ್ರದ ಬಗ್ಗೆ ನಾನೇ ಸಲಹೆ ನೀಡುತ್ತೇನೆ ಎಂದು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

ಒಂದೂವರೆ ತಿಂಗಳಿನಲ್ಲಿ ಜೆಡಿಎಸ್ ಪಕ್ಷದ ಮೊದಲ ಹಂತದ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡುತ್ತೇನೆ. ಅದರಲ್ಲಿ ಹಾಸನ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯನ್ನು ಘೋಷಿಸುತ್ತೇನೆ. ಈ ಕ್ಷೇತ್ರದಲ್ಲಿ ನಮ್ಮ ಕುಟುಂಬದವರು ಸ್ಪರ್ಧಿಸುತ್ತಾರೆ ಎನ್ನುವುದು ಊಹಾಪೋಹ. ಹಾಸನ ಕ್ಷೇತ್ರದಲ್ಲಿ ಅನೇಕ ನಿಷ್ಠಾವಂತ ಮುಖಂಡರಿದ್ದಾರೆ. ಅವರೊಟ್ಟಿಗೆ ಚರ್ಚಿಸಿ ತೀರ್ಮಾನ ಮಾಡುತ್ತೇನೆ.

ಹಾಸನದಲ್ಲಿ ಯಾವ ರೀತಿ ವ್ಯವಸ್ಥೆ ಇದೆ ಎಲ್ಲರಿಗೂ ತಿಳಿದಿದೆ. ಎಚ್.ಎಸ್.ಪ್ರಕಾಶ್ ಇದ್ದ ಕಾಲದಲ್ಲಿ ಈ ರೀತಿ ವ್ಯವಸ್ಥೆ ಇರಲಿಲ್ಲ. ಅದನೆಲ್ಲದನ್ನು ಗಮನದಲ್ಲಿಟ್ಟುಕೊಂಡು ಕಾರ್ಯಕರ್ತರ ಜತೆ ಚರ್ಚಿಸಿ ಟಿಕೆಟ್ ನೀಡುತ್ತೇನೆ.

ಕಲಾಪದಲ್ಲಿ ಅರ್ಥಪೂರ್ಣ ಚರ್ಚೆ ಆಗುತ್ತಿಲ್ಲ

ವಿಧಾನಮಂಡಲ ಕಲಾಪದಲ್ಲಿ ಅರ್ಥಪೂರ್ಣ ಚರ್ಚೆ ನಡೆಯಬೇಕು ಎಂದು ಹೇಳಿದ ಅವರು, ಪ್ರತಿ ಬಾರಿಯೂ ಅನಗತ್ಯ ವಿಷಯಗಳ ಮೂಲಕ ಕಲಾಪದ ಅಮೂಲ್ಯ ಸಮಯವನ್ನು ವ್ಯರ್ಥ ಮಾಡಲಾಗುತ್ತಿದೆ . ಕಲಾಪಗಳಲ್ಲಿ ನಾಡಿನ ಜನರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ನಿಟ್ಟಿನ ಚರ್ಚೆ ನಡೆಯುತ್ತಿಲ್ಲ. ಪ್ರತಿ ಬಾರಿಯೂ ಸದನದ ಸಮಯ ಬೇಡದ ವಿಚಾರಗಳಿಗೆ ಬಲಿಯಾಗುತ್ತಿದೆ. ನಾನು ಈ ಬಾರಿ ಕಲಾಪದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುತ್ತೇನೆ ಎಂದರು.

ಕಾಂಗ್ರೆಸ್ ತೊರೆದಿರುವ ಸಿಎಂ ಇಬ್ರಾಹಿಂ ಅವರಿಗೆ ಜೆಡಿಎಸ್ ಪಕ್ಷ ಸೇರುವಂತೆ ಮುಕ್ತ ಆಹ್ವಾನ ನೀಡಿದ್ದೇನೆ. ಆದರೆ, ಅವರು ತಮ್ಮ ಹಿತೈಷಿಗಳ ಜತೆ ಚರ್ಚೆ ನಡೆಸುತ್ತಿದ್ದಾರೆ. ಅವರು ಯಾವ ನಿರ್ಧಾರ ಕೈಗೊಳ್ಳುತ್ತಾರೋ ಕಾದು ನೋಡುತ್ತೇವೆ ಎಂದರು.

ಟಾಪ್ ನ್ಯೂಸ್

bsf

2024; ಜಮ್ಮು ಮತ್ತು ಕಾಶ್ಮೀರದಲ್ಲಿ 75 ಉಗ್ರರ ನಿರ್ಮೂಲನೆ: 60% ಪಾಕ್ ಮೂಲದವರು

Basavarj-horatti

ಸಿ.ಟಿ.ರವಿ-ಸಚಿವೆ ಲಕ್ಷ್ಮೀ ದೂರು ಪ್ರಕರಣ: ಪೊಲೀಸರ ವರದಿ ಬಳಿಕ ನಿಯಮಾನುಸಾರ ಕ್ರಮ: ಹೊರಟ್ಟಿ

1-adads

Udupi: ಗೀತೋತ್ಸವದ ಮಂಗಳೋತ್ಸವ ; ಉಪೇಂದ್ರ ಸೇರಿ ಗಣ್ಯರು ಭಾಗಿ

1-viju

Ambedkar ಅವರ ಸಂವಿಧಾನ ಖರ್ಗೆ ಕುಟುಂಬಕ್ಕೆ ಅನ್ವಯಿಸುವುದಿಲ್ಲವೇ?: ಬಿಜೆಪಿ

PM Mod

PM Modi; ಮಹಾಕುಂಭದ ಸಂದೇಶ ಏಕತೆ, ಸಮಾಜದಿಂದ ದ್ವೇಷವನ್ನು ಹೊರಹಾಕುವುದು

Shri-Guru-Kottureshwara-Temple

ಬರೀ ಹುಂಡಿ ಪೆಟ್ಟಿಗೆಗಳಿಂದ ತುಂಬಿದ ಕೊಟ್ಟೂರೇಶ್ವರ ದೇವಸ್ಥಾನ: ಭಕ್ತರಿಂದ ತೀವ್ರ ಆಕ್ರೋಶ

ಮಾನಸಿಕ ಅಸ್ವಸ್ಥ ಬಾಲಕಿ ಮೇಲೆ ಲೈಂಗಿಕದೌರ್ಜನ್ಯ: ಆರೋಪಿ ವಿಚಾರಣೆ ರದ್ದತಿಗೆ ಹೈಕೋರ್ಟ್‌ ನಕಾರ

ಮಾನಸಿಕ ಅಸ್ವಸ್ಥ ಬಾಲಕಿ ಮೇಲೆ ಲೈಂಗಿಕದೌರ್ಜನ್ಯ: ಆರೋಪಿ ವಿಚಾರಣೆ ರದ್ದತಿಗೆ ಹೈಕೋರ್ಟ್‌ ನಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Basavarj-horatti

ಸಿ.ಟಿ.ರವಿ-ಸಚಿವೆ ಲಕ್ಷ್ಮೀ ದೂರು ಪ್ರಕರಣ: ಪೊಲೀಸರ ವರದಿ ಬಳಿಕ ನಿಯಮಾನುಸಾರ ಕ್ರಮ: ಹೊರಟ್ಟಿ

1-viju

Ambedkar ಅವರ ಸಂವಿಧಾನ ಖರ್ಗೆ ಕುಟುಂಬಕ್ಕೆ ಅನ್ವಯಿಸುವುದಿಲ್ಲವೇ?: ಬಿಜೆಪಿ

ಮಾನಸಿಕ ಅಸ್ವಸ್ಥ ಬಾಲಕಿ ಮೇಲೆ ಲೈಂಗಿಕದೌರ್ಜನ್ಯ: ಆರೋಪಿ ವಿಚಾರಣೆ ರದ್ದತಿಗೆ ಹೈಕೋರ್ಟ್‌ ನಕಾರ

ಮಾನಸಿಕ ಅಸ್ವಸ್ಥ ಬಾಲಕಿ ಮೇಲೆ ಲೈಂಗಿಕದೌರ್ಜನ್ಯ: ಆರೋಪಿ ವಿಚಾರಣೆ ರದ್ದತಿಗೆ ಹೈಕೋರ್ಟ್‌ ನಕಾರ

bellad

Dharwad; ನಾಲಿಗೆ ಹರಿಬಿಡುವ ನಾಯಕರ ಮೇಲೆ ಕ್ರಮ ಆಗಬೇಕು: ಶಾಸಕ ಬೆಲ್ಲದ್

Hubli; Pig farmer assault case; Four arrested including sister’s husband

Hubli; ಹಂದಿ ಸಾಕಾಣಿಕೆದಾರ ಕೊಲೆ ಪ್ರಕರಣ; ಮೃತನ ಅಕ್ಕನ ಗಂಡ ಸೇರಿ ನಾಲ್ವರ ಬಂಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

bsf

2024; ಜಮ್ಮು ಮತ್ತು ಕಾಶ್ಮೀರದಲ್ಲಿ 75 ಉಗ್ರರ ನಿರ್ಮೂಲನೆ: 60% ಪಾಕ್ ಮೂಲದವರು

Basavarj-horatti

ಸಿ.ಟಿ.ರವಿ-ಸಚಿವೆ ಲಕ್ಷ್ಮೀ ದೂರು ಪ್ರಕರಣ: ಪೊಲೀಸರ ವರದಿ ಬಳಿಕ ನಿಯಮಾನುಸಾರ ಕ್ರಮ: ಹೊರಟ್ಟಿ

1-adads

Udupi: ಗೀತೋತ್ಸವದ ಮಂಗಳೋತ್ಸವ ; ಉಪೇಂದ್ರ ಸೇರಿ ಗಣ್ಯರು ಭಾಗಿ

1-viju

Ambedkar ಅವರ ಸಂವಿಧಾನ ಖರ್ಗೆ ಕುಟುಂಬಕ್ಕೆ ಅನ್ವಯಿಸುವುದಿಲ್ಲವೇ?: ಬಿಜೆಪಿ

PM Mod

PM Modi; ಮಹಾಕುಂಭದ ಸಂದೇಶ ಏಕತೆ, ಸಮಾಜದಿಂದ ದ್ವೇಷವನ್ನು ಹೊರಹಾಕುವುದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.