ಯುವತಿಯ ಸ್ನಾನದ ದೃಶ್ಯ ಸೆರೆ: ಆರೋಪಿ ಬಂಧನ
ಅಪಾರ್ಟ್ಮೆಂಟ್ ನ ಬಾತ್ ರೂಂ ಕಿಟಕಿ ಬಳಿ ಮೊಬೈಲ್ ಇರಿಸಿದ್ದ ಯುವಕ
Team Udayavani, Jan 26, 2023, 7:25 AM IST
ಬೆಂಗಳೂರು: ಖಾಸಗಿ ಕಂಪೆನಿಯ ಮಹಿಳಾ ಉದ್ಯೋಗಿಯೊಬ್ಬರು ಅಪಾರ್ಟ್ಮೆಂಟ್ನಲ್ಲಿ ಸ್ನಾನ ಮಾಡುತ್ತಿದ್ದಾಗ ಆಕೆಯ ನಗ್ನ ಫೋಟೋ, ವೀಡಿಯೋಗಳನ್ನು ಮೊಬೈಲ್ನಲ್ಲಿ ಸೆರೆಹಿಡಿದ ಆರೋಪದಲ್ಲಿ ಓರ್ವನನ್ನು ಪುಟ್ಟೇನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಈ ಬಗ್ಗೆ ನಗರದ ಪ್ರತಿಷ್ಠಿತ ಖಾಸಗಿ ಕಂಪೆನಿಯಲ್ಲಿ ಉದ್ಯೋಗದಲ್ಲಿರುವ, ರಾಜಸ್ಥಾನ ಮೂಲದ ಪುಟ್ಟೇನಹಳ್ಳಿಯ ನಿವಾಸಿ 25 ವರ್ಷದ ಯುವತಿ ನೀಡಿದ ದೂರಿನಂತೆ ಚೇತನ್ ಪ್ರಕಾಶ್ ಎಂಬಾತನನ್ನು ಬಂಧಿಸಲಾಗಿದೆ.
ಯುವತಿಯು ಅಪಾರ್ಟ್ಮೆಂಟ್ನಲ್ಲಿ ವಾಸಿಸುತ್ತಿದ್ದು, ಜ.21ರಂದು ಬೆಳಗ್ಗೆ 5.20ಕ್ಕೆ ಮನೆಯ ಬಾತ್ ರೂಂನಲ್ಲಿ ಸ್ನಾನ ಮಾಡುತ್ತಿದ್ದಳು. ಆ ಸಂದರ್ಭದಲ್ಲಿ ಬಾತ್ ರೂಂ ಕಿಟಕಿಯ ಬಳಿ ಆರೋಪಿಯು ಮೊಬೈಲ್ ಇಟ್ಟು ದೂರುದಾರ ಮಹಿಳೆ ಸ್ನಾನ ಮಾಡುವ ದೃಶ್ಯವನ್ನು ಸೆರೆಹಿಡಿಯುತ್ತಿದ್ದ. ಇದನ್ನು ಗಮನಿಸಿದ ಆಕೆ ಹೊರ ಬಂದು ನೋಡಿದಾಗ ಅದೇ ಅಪಾರ್ಟ್ಮೆಂಟ್ನಲ್ಲಿ ವಾಸಿಸುತ್ತಿದ್ದ ಚೇತನ್ ಪ್ರಕಾಶ್ ಕೃತ್ಯ ಎಸಗಿರುವುದು ಕಂಡು ಬಂದಿತ್ತು. ಆತನ ಬಳಿ ಈ ಬಗ್ಗೆ ಪ್ರಶ್ನಿಸಿದ ಮಹಿಳೆಯು ಮೊಬೈಲ್ ಕಸಿದುಕೊಳ್ಳಲು ಪ್ರಯತ್ನಿಸಿದಾಗ ಆತ ಅಲ್ಲಿಂದ ಓಡಿ ಹೋಗಿದ್ದ. ಬಳಿಕ ಯುವತಿಯು ಪೊಲೀಸರಿಗೆ ದೂರು ನೀಡಿದ್ದಳು.
ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿ ಠಾಣೆಗೆ ಕರೆತಂದು ಆತನ ಮೊಬೈಲ್ ಅನ್ನು ಪರಿಶೀಲಿಸಿದಾಗ ದೂರುದಾರ ಮಹಿಳೆಯು ಸ್ನಾನ ಮಾಡುವ ದೃಶ್ಯದ ವೀಡಿಯೋ ಹಾಗೂ ಫೋಟೋಗಳು ಇರುವುದು ಪತ್ತೆಯಾಗಿದೆ.
ಮೊಬೈಲ್ ಎಫ್ಎಸ್ಎಲ್ಗೆ
ಆರೋಪಿಯ ಮೊಬೈಲ್ ಜಪ್ತಿ ಮಾಡಿ ಎಫ್ಎಸ್ಎಲ್ಗೆ ಕಳುಹಿಸಲಾಗಿದ್ದು, ಎಫ್ಎಸ್ಎಲ್ ವರದಿಯ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುವುದು. ಸದ್ಯ ಆರೋಪಿಯು ನ್ಯಾಯಾಂಗ ಬಂಧನದಲ್ಲಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ
Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ
Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್
Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ
Tragedy: ಭೀಕರ ಬೈಕ್ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.