ಆರಗ ರಾಜೀನಾಮೆಗೆ ಆಗ್ರಹಿಸಿ ನಲಪಾಡ್ ನೇತೃತ್ವದಲ್ಲಿ ಕಾಂಗ್ರೆಸ್ ಪ್ರತಿಭಟನೆ
Team Udayavani, Apr 7, 2022, 1:07 PM IST
ಬೆಂಗಳೂರು : ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದರು.
ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ನೇತೃತ್ವದಲ್ಲಿ ರೇಸ್ ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನದ ಮುಂಭಾಗ ಪ್ರತಿಭಟನೆ ನಡೆಸಲಾಯಿತು.
ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ ಖಂಡನಾರ್ಹ.ಚಂದ್ರು ಕೊಲೆ ಸಂಬಂಧ ಕೋಮು ಸೌಹಾರ್ದ ಕದಡುವ ಹೇಳಿಕೆ ನೀಡಿದ್ದಾರೆಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಇದನ್ನೂ ಓದಿ : ರಾಜೀನಾಮೆ ಕೊಟ್ಟು ತೀರ್ಥಹಳ್ಳಿ ಗೌರವ ಉಳಿಸಿ: ಆರಗ ಜ್ಞಾನೇಂದ್ರಗೆ ಕಿಮ್ಮನೆ ರತ್ನಾಕರ್ ಆಗ್ರಹ
ಆರಗ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದ ಪ್ರತಿಭಟನಾಕಾರರು, ಬಳಿಕ ಕಾಂಗ್ರೆಸ್ ಭವನದಿಂದ ಪ್ರತಿಭಟನಾ ರ್ಯಾಲಿ ನಡೆಸಲು ಮುಂದಾದ ಕಾರ್ಯಕರ್ತರನ್ನು ಕಾಂಗ್ರೆಸ್ ಭವನದ ಗೇಟ್ ಬಂದ್ ಮಾಡಿ ಪೊಲೀಸರು ತಡೆದರು. ಆಗ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆಯಿತು.
ಯುವ ಕಾಂಗ್ರೆಸ್ ವತಿಯಿಂದ ರಾಜ್ಯದ ಗೃಹಮಂತ್ರಿಯಾದ @JnanendraAraga ರವರ ಜಾತಿ ಧರ್ಮಗಳ ನಡುವೆ ಕೋಮು ಗಲಭೆ ಸೃಷ್ಟಿಸುವ ಪ್ರಚೋದನಕಾರಿ ಹೇಳಿಕೆ ವಿರುದ್ಧ ಇಂದು ಪ್ರತಿಭಟನೆ ಮಾಡಲಾಯಿತು.
ಈ ಸಂದರ್ಭದಲ್ಲಿ ರಾಜ್ಯ ಪದಾಧಿಕಾರಿಗಳು ಹಾಗೂ ಜಿಲ್ಲಾಧ್ಯಕ್ಷರು ಉಪಸ್ಥಿತರಿದ್ದರು. pic.twitter.com/f6wCyTpYNl
— Mohammed Haris Nalapad (@nalapad) April 7, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.