ಪೊಲೀಸ್ ಗುಂಡಿಗೆ ಯುವಕ ಬಲಿ: ಫ್ರಾನ್ಸ್‌ನಲ್ಲಿ ಪ್ರತಿಭಟನೆ
Team Udayavani, Jun 30, 2023, 7:12 AM IST
ಪ್ಯಾರಿಸ್: ಸಂಚಾರ ಪೊಲೀಸರ ತಪಾಸಣೆ ವೇಳೆ 17 ವರ್ಷದ ಯುವಕನನ್ನು ಪೊಲೀ ಸರು ಗುಂಡಿಟ್ಟು ಹತ್ಯೆ ಮಾಡಿರುವುದನ್ನು ಖಂಡಿಸಿ ಫ್ರಾನ್ಸ್‌ನಲ್ಲಿ ನಾಗರಿಕರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಎರಡು ದಿನಗಳಿಂದ ಅನೇಕ ಸಾರ್ವಜನಿಕ ಕಟ್ಟಡಗಳು ಮತ್ತು ವಾಹನಗಳಿಗೆ ಹಾನಿ ಯಾಗಿದೆ. ಹಿಂಸಾಚಾರವನ್ನು ಹತ್ತಿಕ್ಕಲು 40,000 ಪೊಲೀಸರನ್ನು ನಿಯೋಜಿಸಲಾ ಗಿದೆ. ಶಾಂತ ರೀತಿಯಿಂದ ವರ್ತಿಸುವಂತೆ ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯಲ್ ಮ್ಯಾಕ್ರನ್ ಸೇರಿದಂತೆ ಸಚಿವರು ಮನವಿ ಮಾಡಿದ್ದಾರೆ.
ಬುಧವಾರದಿಂದ ಇಲ್ಲಿಯವರೆಗೆ ಸುಮಾರು 100 ಸಾರ್ವಜನಿಕ ಕಟ್ಟಡಗಳನ್ನು ಹಾನಿಗೊಳಿಸಲಾಗಿದೆ. ಹಲವು ವಾಹನಗಳು ಬೆಂಕಿಗೆ ಆಹುತಿಯಾಗಿದೆ. ಪ್ರತಿ ಭಟನೆ ನಿಯಂತ್ರಿಸಲು ಪೊಲೀಸರು ಹರ ಸಾಹಸ ಪಡುತ್ತಿದ್ದಾರೆ. ಇದೇ ವೇಳೆ ಅನೇಕ ನಾಗರಿಕರು ಗಾಯಗೊಂಡಿದ್ದಾರೆ.
ಮಂಗಳವಾರ 17 ವರ್ಷದ ನಹೇಲ್ ಎಂಬ ಯುವಕ ಬಸ್ ಲೇನ್‌ನಲ್ಲಿ ಕಾರು ಓಡಿಸುತ್ತಿದ್ದ. ಯುವಕ ಚಿಕ್ಕ ವಯಸ್ಸಿನವ ನಾದ ಕಾರಣ, ಚಾಲನಾ ಪರವಾನಗಿ ಹೊಂದಿದ್ದಾ ನೆಯೇ ಎಂಬುದನ್ನು ತಪಾಸಣೆ ಮಾಡಲು ಸಂಚಾರ ಪೊಲೀಸರು ಕಾರನ್ನು ತಡೆದಿದ್ದಾರೆ. ಆದರೆ ಆತ ಕಾರನ್ನು ಮುಂದಕ್ಕೆ ಚಲಿಸಿದ್ದಾನೆ. ಕಾರನ್ನು ಹಿಂಬಾಲಿಸಿದ ಪೊಲೀಸರು, ಅನಾಮತ್ತಾಗಿ ಯುವಕನ ಮೇಲೆ ಗುಂಡು ಹಾರಿಸಿದ್ದಾರೆ. ಇದರಿಂದ ಆತ ಮೃತಪಟ್ಟಿದ್ದಾನೆ. ಘಟನೆ ಹಿನ್ನೆಲೆಯಲ್ಲಿ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ
Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ
Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ
Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.