ಹೊಂಬಾಳೆ ಫಿಲ್ಮ್ಸ್ ಹೊಸ ಸಿನಿಮಾ ಘೋಷಣೆ: ಯುವ ರಾಜ್ ಕುಮಾರ್ ನಾಯಕ ನಟ
ಹೊಂಬಾಳೆ ತಂಡದಿಂದ ಪ್ರಭಾಸ್ ಅಭಿನಯದ ಸಲಾರ್ ಸಿನಿಮಾ 2023ರಲ್ಲಿ ತೆರೆ ಕಾಣಲಿದೆ.
Team Udayavani, Apr 27, 2022, 4:45 PM IST
ಉಡುಪಿ:ಕೆಜಿಎಫ್ ಚಾಪ್ಟರ್ 2 ಸಿನಿಮಾ ಭರ್ಜರಿ ಯಶಸ್ಸು ಕಾಣುತ್ತಿರುವ ನಡುವೆಯೇ ಹೊಂಬಾಳೆ ಫಿಲ್ಮ್ಸ್ ಇದೀಗ ಕನ್ನಡ ಚಿತ್ರರಂಗದ ವರನಟ ಡಾ.ರಾಜ್ ಕುಮಾರ್ ಅವರ ಮೊಮ್ಮಗ, ನಟ ರಾಘವೇಂದ್ರ ರಾಜ್ ಕುಮಾರ್ ಪುತ್ರ ಯುವ ರಾಜ್ ಕುಮಾರ್ ಅವರನ್ನು ನಾಯಕ ನಟನನ್ನಾಗಿ ಮಾಡಲು ವೇದಿಕೆ ಸಿದ್ದಪಡಿಸಿಕೊಂಡಿದೆ.
ಇದನ್ನೂ ಓದಿ:ಟ್ವೀಟರ್ ಖರೀದಿ ಎಫೆಕ್ಟ್: ಅಬ್ಬಾ… ಮಸ್ಕ್ ಒಡೆತನದ ಟೆಸ್ಲಾ ಕಂಪನಿಗಾದ ನಷ್ಟ ಎಷ್ಟು ಗೊತ್ತಾ?
ಸಂತೋಷ್ ಆನಂದ್ ರಾಮ್ ನಿರ್ದೇಶಿಸಲಿರುವ ಹೊಸ ಸಿನಿಮಾದಲ್ಲಿ ಯುವ ರಾಜ್ ಕುಮಾರ್ ಹೀರೋ ಆಗಿ ಮಿಂಚಲಿದ್ದಾರೆ ಎಂದು ಹೊಂಬಾಳೆ ಫಿಲ್ಮ್ಷ್ ತಂಡ ಬುಧವಾರ (ಏಪ್ರಿಲ್ 27) ಅಧಿಕೃತವಾಗಿ ಘೋಷಿಸಿದೆ.
ಇತ್ತೀಚೆಗಷ್ಟೇ ಸೂರರೈ ಪೋಟ್ರು ಸಿನಿಮಾ ಖ್ಯಾತಿಯ ನಿರ್ದೇಶಕಿ ಸುಧಾ ಕೊಂಗರ ನಿರ್ದೇಶನದ ಹೊಸ ಚಿತ್ರವನ್ನು ನಿರ್ಮಾಣ ಮಾಡುವುದಾಗಿ ಹೊಂಬಾಳೆ ಫಿಲ್ಮ್ಸ್ ಘೋಷಿಸಿತ್ತು. ಹೊಂಬಾಳೆ ತಂಡದಿಂದ ಪ್ರಭಾಸ್ ಅಭಿನಯದ ಸಲಾರ್ ಸಿನಿಮಾ 2023ರಲ್ಲಿ ತೆರೆ ಕಾಣಲಿದೆ.
ಹೊಂಬಾಳೆ ಸಂಸ್ಥೆಗೂ ಸಿನಿಮಾ ದಂತಕಥೆ ಡಾ.ರಾಜ್ ಕುಮಾರ್ ಕುಟುಂಬದ ನಡುವೆ ಇರುವ ಸಂಬಂಧವನ್ನು ಮುಂದುವರಿಸುವ ನಿಟ್ಟಿನಲ್ಲಿ ನಾವು ದೊಡ್ಮನೆಯ ಮೂರನೇ ತಲೆಮಾರಿನ ಕುಡಿಯಾದ ಯುವ ರಾಜ್ ಕುಮಾರ್ ಅವರನ್ನು ನಾಯಕ ನಟರನ್ನಾಗಿ ಮಾಡಲು ಹೆಮ್ಮೆ ಪಡುತ್ತೇವೆ . ಈ ಸಿನಿಮಾವನ್ನು ಹಲವಾರು ಯಶಸ್ವಿ ಚಿತ್ರಗಳನ್ನು ನಿರ್ದೇಶನ ಮಾಡಿರುವ ಸಂತೋಷ್ ಆನಂದ್ ರಾಮ್ ಅವರು ನಿರ್ದೇಶಿಸಲಿದ್ದಾರೆ. ಎಂದಿನಂತೆ ನಿಮ್ಮ ಅಭೂತಪೂರ್ವವಾದ ಬೆಂಬಲ ನಮ್ಮ ಮೇಲಿರಲಿ ಎಂದು ಹೊಂಬಾಳೆ ಫಿಲ್ಮ್ಸ್ ಮನವಿ ಮಾಡಿಕೊಂಡಿದೆ.
Wishing you all success that you richly deserve.
The legacy continues..@yuva_rajkumar @SanthoshAnand15 @VKiragandur @hombalefilms#IntroducingYuvaRajKumar #YuvaRajKumar pic.twitter.com/7X1KEp8jwO
— Ashwini Puneeth Rajkumar (@ashwinipuneet) April 27, 2022
ಸಿನಿಮಾದ ಹೆಸರು, ಕಥೆಯ ಬಗ್ಗೆ ಹೊಂಬಾಳೆ ಫಿಲ್ಮ್ಸ್ ಯಾವುದೇ ಮಾಹಿತಿ ಹಂಚಿಕೊಂಡಿಲ್ಲ. ಅಭಿಮಾನದಿಂದ ಅಭಿಮಾನಕ್ಕಾಗಿ ಈ ನಮ್ಮ ಪಯಣ..ಇರಲಿ ನಿಮ್ಮ ಅಪ್ಪುಗೆ..ಈ ಅಭಿಮಾನ ಹೀಗೆಯೇ ಮುಂದುವರಿಯಲಿ ಎಂದು ಹೊಂಬಾಳೆ ಫಿಲ್ಮ್ಸ್ ಟ್ವೀಟ್ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Nodidavaru Enanthare Movie: ನವೀನ್ ಶಂಕರ್ ಚಿತ್ರದ ಟೀಸರ್ ಬಂತು
BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.