ಜಿ.ಪಂ., ತಾ.ಪಂ. ಚುನಾವಣೆ ಮುಂದೂಡುವುದಿಲ್ಲ: ಸರಕಾರ ಸ್ಪಷ್ಟನೆ
Team Udayavani, Mar 23, 2021, 6:30 AM IST
ಬೆಂಗಳೂರು: ಜಿ.ಪಂ., ತಾ.ಪಂ. ಕ್ಷೇತ್ರ ಪುನರ್‌ವಿಂಗಡಣೆ ಮಾರ್ಗಸೂಚಿಗಳ ಬಗ್ಗೆ ವಿಧಾನಸಭೆಯಲ್ಲಿ ಪಕ್ಷಾತೀತವಾಗಿ ಸದಸ್ಯರಿಂದ ಆಕ್ಷೇಪ ವ್ಯಕ್ತವಾದ ಹಿನ್ನೆಲೆಯಲ್ಲಿ ಗುರುವಾರ ಸಭೆ ನಡೆಸಿ ಪರಿಷ್ಕೃತ ಮಾರ್ಗಸೂಚಿಗಳನ್ನು ರಾಜ್ಯ ಚುನಾವಣ ಆಯೋಗಕ್ಕೆ ಸಲ್ಲಿಸಲಾಗುವುದು ಎಂದು ಸರಕಾರ ಪ್ರಕಟಿಸಿದೆ. ಈ ನಡುವೆ, ಯಾವುದೇ ಕಾರಣಕ್ಕೂ ಜಿ.ಪಂ., ತಾ.ಪಂ. ಚುನಾವಣೆ ಮುಂದೂಡುವುದಿಲ್ಲ ಎಂದು ಸ್ಪಷ್ಟಪಡಿಸಿದೆ.
ಸೋಮವಾರ ಶೂನ್ಯವೇಳೆಯಲ್ಲಿ ಬಿಜೆಪಿಯ ವಿ. ಸುನಿಲ್ ಕುಮಾರ್ ಪ್ರಸ್ತಾವಿಸಿದ ವಿಷಯದ ಬಗ್ಗೆ ವಿಸ್ತೃತ ಚರ್ಚೆ ನಡೆಯಿತು. ಜಿ.ಪಂ., ತಾ.ಪಂ. ಕ್ಷೇತ್ರಗಳ ಪುನರ್‌ವಿಂಗಡಣೆ ಪ್ರಕ್ರಿಯೆ ಆರಂಭವಾಗಿದೆ.
ಹೊಸ ತಾಲೂಕು ರಚನೆಯಾಗಿದ್ದರೆ ಜನಸಂಖ್ಯೆ ಆಧಾರದಲ್ಲಿ ವರ್ಗೀಕರಣ ಮಾರ್ಗಸೂಚಿಯಿಂದ ಸಮಸ್ಯೆಯಾಗುತ್ತಿದೆ. ಆಡಳಿತ, ಅನುದಾನ ಲಭ್ಯತೆಯಲ್ಲಿ ಏರಿಳಿತವಾಗಲಿದೆ. ವೈಜ್ಞಾನಿಕವಾಗಿ ಕ್ಷೇತ್ರ ಪುನರ್‌ವಿಂಗಡಣೆಯಾಗಬೇಕಿದ್ದು, ಸರಕಾರ ಮಧ್ಯ ಪ್ರವೇಶಿಸಿ ಸಮಸ್ಯೆ ಸರಿಪಡಿಸಬೇಕು ಎಂದು ಮನವಿ ಮಾಡಿದರು. ಇದಕ್ಕೆ ಉತ್ತರಿಸಿದ ಸಚಿವ ಬೊಮ್ಮಾಯಿ, ಈ ಬಗ್ಗೆ ಚರ್ಚಿಸಿ ಆಯೋಗಕ್ಕೆ ತಿಳಿಸಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Murdeshwar:ಅಶುಭ- ಪ್ರವಾಸಿಗರಿಲ್ಲದೆ ಮುರ್ಡೇಶ್ವರ ಕಿನಾರೆ ಭಣ ಭಣ!
KD Movie: ಕೆಡಿ ಶಿವ ಮೊಗದಲ್ಲಿ 25 ಮಿಲಿಯನ್ ನಗು
Mumbai: ಹೊಸ ವರ್ಷದ ಮುನ್ನಾದಿನ 17,800 ವಾಹನ ಚಾಲಕರಿಗೆ ದಂಡ, 89 ಲಕ್ಷ ರೂ. ಸಂಗ್ರಹ
Hubballi: ಹಳೇ ವೈಷಮ್ಯದಿಂದ ಸಹಚರರೊಂದಿಗೆ ಸೇರಿ ಹಲ್ಲೆ; ವ್ಯಕ್ತಿ ಮೃತ್ಯು
Delhi: ಕೇಜ್ರಿವಾಲ್ ಚುನಾವಣೆಯಲ್ಲಿ ನೀಡಿದ್ದ ಒಂದೂ ಭರವಸೆ ಈಡೇರಿಸಿಲ್ಲ: ಬಿಜೆಪಿ ವಾಗ್ದಾಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.