130 ಇಂಗುಗುಂಡಿ ನಿರ್ಮಿಸಿದ ವಿದ್ಯಾರ್ಥಿನಿಯರು
ಕಾರ್ಮೆಲ್ ಪ್ರೌಢಶಾಲೆ: ಜಲಕ್ರಾಂತಿಗೆ ಮುನ್ನುಡಿ
Team Udayavani, Aug 5, 2019, 1:41 PM IST
ಇಂದುಗುಂಡಿ ನಿರ್ಮಿಸಿದ ಬಿ.ಸಿ. ರೋಡ್‌ನ ಮೊಡಂಕಾಪು ಕಾರ್ಮೆಲ್ ಬಾಲಿಕೆಯರ ಪ್ರೌಢಶಾಲಾ ವಿದ್ಯಾರ್ಥಿನಿಯರು.
ಬಂಟ್ವಾಳ: ಬೇಸಗೆಯಲ್ಲಿ ತಮ್ಮ ಮನೆಗಳಲ್ಲಿ ನೀರಿನ ಬವಣೆ ಬರಬಾರದು ಎಂಬ ನಿಟ್ಟಿನಲ್ಲಿ ಬಿ.ಸಿ. ರೋಡ್‌ನ ಮೊಡಂಕಾಪು ಕಾರ್ಮೆಲ್ ಬಾಲಿಕೆಯರ ಪ್ರೌಢಶಾಲಾ ವಿದ್ಯಾರ್ಥಿನಿಯರು ಶಿಕ್ಷಕರ ಮಾರ್ಗದರ್ಶನದಿಂದ 130 ಇಂಗುಗುಂಡಿ ಮಾಡಿ ಜಲಕ್ರಾಂತಿಗೆ ಮುನ್ನುಡಿ ಬರೆದಿದ್ದಾರೆ.
ಶಿಕ್ಷಕ ರೋಶನ್ ಪಿಂಟೋ ಮಾರ್ಗದರ್ಶನ
ಶಾಲೆಯ ಹಸಿರು ಭವಿಷ್ಯ ಪರಿಸರ ಸಂಘದ ಮಾರ್ಗದರ್ಶಿ ಶಿಕ್ಷಕ ರೋಶನ್ ಪಿಂಟೋ ಮಾರ್ಗ ದರ್ಶನದಲ್ಲಿ ವಿದ್ಯಾರ್ಥಿನಿಯರು ತಮ್ಮ ಮನೆ ಪರಿಸರದಲ್ಲಿ ಇಂಗುಗುಂಡಿಗಳನ್ನು ಮಾಡಿದ್ದಾರೆ. ಎಲ್ಲ ವಿದ್ಯಾರ್ಥಿಗಳು ತಾವು ಮನೆಯಲ್ಲಿ ನಿರ್ಮಿಸಿರುವ ಇಂಗುಗುಂಡಿಗಳ ವರದಿ ನೀಡಿದ್ದು, ಈ ಮೂಲಕ ಒಟ್ಟು ಇಂಗುಗುಂಡಿಗಳ ಸಂಖ್ಯೆ ಲೆಕ್ಕ ಹಾಕಲಾಗಿದೆ. ಬೇಸಗೆಯಲ್ಲಿ ಹಲವು ವಿದ್ಯಾರ್ಥಿಗಳ ಮನೆಯವರು ನೀರಿನ ಬವಣೆ ಅನುಭವಿಸುತ್ತಿದ್ದು, ಭೂಮಿಗೆ ನೀರು ಕೊಟ್ಟಾಗಲೇ ನಾವು ಬದುಕಲು ಸಾಧ್ಯ ಎಂಬ ನಿಟ್ಟಿ ನಲ್ಲಿ ಶಿಕ್ಷಕರು ವಿದ್ಯಾರ್ಥಿನಿಯರಿಗೆ ಮಾರ್ಗದರ್ಶನ ನೀಡಿದ್ದರು.
ಮನೆಯ ಸುತ್ತಮುತ್ತ ಇಂಗುಗುಂಡಿ
ಶಾಲಾ ವಠಾರದಲ್ಲಿ ಸಾಕಷ್ಟು ಸ್ಥಳಾವಕಾಶ ಲಭ್ಯತೆ ಇಲ್ಲದ ಕಾರಣ ವಿದ್ಯಾರ್ಥಿನಿಯರು ಅವರ ಮನೆಯ ಸುತ್ತಮುತ್ತ ಇಂಗುಗುಂಡಿಗಳನ್ನು ನಿರ್ಮಿಸಿದ್ದಾರೆ.
ಕೆಲವು ವಿದ್ಯಾರ್ಥಿನಿಯರು ಹೆತ್ತವರ ಸಹಾಯ ಪಡೆದರೆ, ಇನ್ನು ಕೆಲವು ವಿದ್ಯಾರ್ಥಿನಿಯರು ಸ್ವತಃ ಪ್ರತೀ ದಿವಸ ಸ್ವಲ್ಪ ಸ್ವಲ್ಪ ಕೆಲಸ ಮಾಡಿ ಗುಂಡಿ ಪೂರ್ಣಗೊಳಿಸಿದ್ದಾರೆ. 3 ಅಡಿ ಉದ್ದ, 2 ಅಡಿ ಅಗಲ, 2 ಅಡಿ ಆಳದ ಗುಂಡಿ ನಿರ್ಮಿಸಿದ್ದಾರೆ.
ತಮ್ಮ ಮನೆ ಅಂಗಳ, ನೆರೆಮನೆ ಯವರ ಜಾಗ, ಮಾರ್ಗದ ಬದಿ, ಕಾಡಿನಲ್ಲಿ ಇಂಗುಗುಂಡಿ ನಿರ್ಮಿಸಿ ದ್ದಾರೆ. ವಿದ್ಯಾರ್ಥಿನಿ ರಚನಾ 9 ಇಂಗುಗುಂಡಿಗಳನ್ನು ಸ್ವತಃ ನಿರ್ಮಿ ಸಿದ್ದು, ಹರ್ಷಿತಾ ಹಾಗೂ ಆಯಿಷತ್ ಆನ್ಸೀಫಾ 7 ಇಂಗುಗುಂಡಿಗಳನ್ನು ನಿರ್ಮಿಸಿದ್ದಾರೆ. ಇತರ ವಿದ್ಯಾರ್ಥಿನಿಯರು ಮೂರು, ನಾಲ್ಕು ಇಂಗುಗುಂಡಿಗಳನ್ನು ನಿರ್ಮಿ ಸಿದ್ದಾರೆ. ಹೆತ್ತವರೂ ಅವರನ್ನು ಬೆಂಬಲಿಸಿದ್ದು, ಶಿಕ್ಷಕ ರೋಶನ್ ಪಿಂಟೋ ತಮ್ಮ ಮನೆಯಲ್ಲಿ ಕೊಳವೆ ಬಾವಿಗೆ ಜಲ ಮರುಪೂರಣ ಮಾಡಿ ಅದರ ಪ್ರಯೋಜನ ಪಡೆದಿದ್ದಾರೆ ಹಾಗೂ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uppinangady: ತ್ಯಾಜ್ಯ ಸರಿಯಾಗಿ ವಿಂಗಡಿಸಿ ಕೊಡದಿದ್ದರೆ ಕ್ರಮಕ್ಕೆ ಸದಸ್ಯರ ಸಲಹೆ
Bantwal: ಪ್ರವಾಸಕ್ಕೆ ತೆರಳಿದ್ದ ಬಸ್ ಅಪಘಾತ; ಗಾಯಗೊಂಡಿದ್ದ ಮಹಿಳೆ ಮೃ*ತ್ಯು
Bantwal: ಅಭಿವೃದ್ಧಿ ಕಾರ್ಯಕ್ಕಿಂತಲೂ ಸಮಸ್ಯೆಗಳ ಸರಮಾಲೆ ಪ್ರಸ್ತಾವಿಸಿದ ಸಾರ್ವಜನಿಕರು
Puttur: ಮುಖ್ಯ ರಸ್ತೆಯ ಚರಂಡಿ ಮೇಲಿನ ಪೈಪ್‌ನಲ್ಲಿ ಸಿಲುಕಿದ ಮಹಿಳೆ!
Puttur: ಎಸೆಸೆಲ್ಸಿ ವಿದ್ಯಾರ್ಥಿನಿ ಆತ್ಮಹ*ತ್ಯೆ ಯತ್ನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mysuru: ಇನ್ಫೋಸಿಸ್ ಆವರಣದಲ್ಲಿ ಚಿರತೆ: ಸಿಬಂದಿಗೆ ವರ್ಕ್ ಫ್ರಂ ಹೋಂ
Professional Life: ಚಿತ್ರರಂಗಕ್ಕೆ ನಟ ದರ್ಶನ್ ಮರುಪ್ರವೇಶ!
Demand: ಮನೆ ನಿರ್ಮಾಣ: ಶೇ.18 ಜಿಎಸ್‌ಟಿ ರದ್ಧತಿಗೆ ಆಗ್ರಹಿಸುವೆ: ಟಿ.ಬಿ.ಜಯಚಂದ್ರ
Haveri: ಬಾಲಕಿಗೆ ಲೈಂಗಿಕ ದೌರ್ಜನ್ಯ, ಮತಾಂತರಕ್ಕೆ ಯತ್ನ: ಇಬ್ಬರ ವಶ
Re-Enforcement: ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಿ: ಸಿ.ಎಸ್.ಷಡಾಕ್ಷರಿ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.