ಭಗವಂತನ ಸಾಮೀಪ್ಯದಿಂದ ಜೀವನ ಪಾವನ: ಹೆಗ್ಗಡೆ
ಗುರುಪುರ: ಪುನಃ ಪ್ರತಿಷ್ಠಾ ರಜತ ಮಹೋತ್ಸವ, ಶ್ರೀನಿವಾಸ ಕಲ್ಯಾಣೋತ್ಸವ
Team Udayavani, Apr 29, 2019, 11:22 AM IST
ಪುನಃ ಪ್ರತಿಷ್ಠಾ ರಜತ ಮಹೋತ್ಸವದ ಅಂಗವಾಗಿ ನಡೆದ ಶ್ರೀನಿವಾಸ ಕಲ್ಯಾಣೋತ್ಸವದಲ್ಲಿ ವಿರೇಂದ್ರ ಹೆಗ್ಗಡೆಯವರನ್ನು ಸಮ್ಮಾನಿಸಲಾಯಿತು
ಮಹಾನಗರ: ಭಗವಂತನ ಸಾಮೀಪ್ಯದಿಂದ ಭವದ ದುರಿತ ದುಮ್ಮನಗಳು ದೂರವಾಗಿ ಜೀವನ ಪಾವನಗೊಳ್ಳುತ್ತದೆ. ಶ್ರೀನಿವಾಸ ಕಲ್ಯಾಣೋತ್ಸವದಂತಹ ಕಾರ್ಯಕ್ರಮಗಳು ಭಕ್ತರಿಗೆ ಭಗವಂತನ ಸಾಮೀಪ್ಯ ಒದಗಿÓುತ್ತದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ರಾಜರ್ಷಿ ಡಾ| ಡಿ. ವಿರೇಂದ್ರ ಹೆಗ್ಗಡೆ ಅವರು ಹೇಳಿದರು.
ಗುರುಪುರ ಶ್ರೀ ಸತ್ಯದೇವತಾ ಧರ್ಮ ದೇವತಾ ಮಹೋತ್ಸವ ಸಮಿತಿ ಆಶ್ರಯದಲ್ಲಿ ನಡೆಯುತ್ತಿರುವ ಶ್ರೀ ಸತ್ಯದೇವತಾ ಧರ್ಮದೇವತಾ ಮಂದಿರದ ಪುನಃ ಪ್ರತಿಷ್ಠಾ ರಜತ ಮಹೋತ್ಸವದ ನಾಲ್ಕನೇ ದಿನವಾದ ಶನಿವಾರ ಶ್ರೀನಿವಾಸ ಕಲ್ಯಾಣೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಜಿಎಸ್‌ಬಿ ಸಮುದಾಯದ ಸಂಸ್ಕೃತಿ ಆಚಾರ ವಿಚಾರಗಳನ್ನು ಜತೆ ಸೇರಿಸಿ ಅತ್ಯುತ್ತಮ ಕಾರ್ಯಕ್ರಮವನ್ನು ಸಂಘಟಿಸುವಲ್ಲಿ ಎಲ್ಲರೂ ಯಶಸ್ವಿಯಾಗಿದ್ದಾರೆ. ಶ್ರೀನಿವಾಸ ಕಲ್ಯಾಣೋತ್ಸವ ಶ್ರದ್ಧಾ ಭಕ್ತಿ ಮತ್ತು ವಿಜೃಂಭಣೆಯಿಂದ ಜರಗಿ ಭಕ್ತ ಜನರನ್ನು ಪುನೀತಗೊಳಿಸಿದೆ. ಶ್ರೀ ಸತ್ಯದೇವತೆ ಗುರುಪುರ ಕ್ಷೇತ್ರದಲ್ಲಿ ಶ್ರೀ ಸತ್ಯದೇವತೆಯು ಧರ್ಮದೇವತೆಯು ನೆಲೆಸಿ ಭಕ್ತ ಜನರನ್ನು ಅನುಗ್ರಹಿಸುತ್ತಿದ್ದಾರೆ ಎಂದರು.
ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ, ಗುರುಪುರ ಜಂಗಮ ಮಠದ ಶ್ರೀರುದ್ರಮುನಿ ಮಹಾಸ್ವಾಮಿ, ಶ್ರೀ ಕ್ಷೇತ್ರ ಕಟೀಲಿನ ಆನುವಂಶಿಕ ಅರ್ಚಕರಾದ ಲಕ್ಷ್ಮೀ ನಾರಾಯಣ ಆಸ್ರಣ್ಣ, ಹರಿ ಆಸ್ರಣ್ಣ ಅವರು ವಿಶೇಷ ಆಮಂತ್ರಿತರಾಗಿ ಉಪಸ್ಥಿತರಿದ್ದರು.
ಶ್ರೀಕಾಂತ್ ಭಟ್ ನಿರೂಪಿಸಿದರು. ಪುತ್ತೂರು ನರಸಿಂಹ ನಾಯಕ್ ಮತ್ತು ಬಳಗದವರಿಂದ ಸಂಗೀತ ಮತ್ತು ನಿರ್ವಹಣೆ ನಡೆಯಿತು.
ಶ್ರೀನಿವಾಸ ಕಲ್ಯಾಣಕ್ಕೂ ಮುನ್ನ ಶ್ರೀ ಸತ್ಯದೇವತಾ ಸಭಾಗ್ರಹದಿಂದ ಶ್ರೀ ವರ ವೆಂಕಟೇಶ ಸ್ವಾಮಿಯನ್ನು ವೇದಘೋಷ ಭಜನೆ, ವಾದ್ಯಘೋಷ, ಸಕಲ- ಬಿರುದಾವಳಿಗಳಿಂದ ಮಂಟಪಕ್ಕೆ ಕರೆತರಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!
Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ
ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್: ವಿ.ನಾರಾಯಣನ್
Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು
Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್ ನಿಶ್ಶಬ್ದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.