Fraud: ವಿದೇಶದಲ್ಲಿ ಉದ್ಯೋಗ ಭರವಸೆ ನೀಡಿ 2.5 ಲಕ್ಷ ರೂ. ವಂಚನೆ; ದೂರು
Team Udayavani, Aug 17, 2024, 7:16 PM IST
ಕಾಸರಗೋಡು: ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ 2.5 ಲಕ್ಷ ರೂ. ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ಕಾಸರಗೋಡು ಪಿಲಿಕುಂಜೆ ನಿವಾಸಿ, ಯೂತ್ ಕಾಂಗ್ರೆಸ್ ಮಂಡಲ ಅಧ್ಯಕ್ಷ ದಿಲೀಪ್ ದಿನೇಶ್ ಮತ್ತು ದಿನೇಶ್ ಕುಮಾರ್ ವಿರುದ್ಧ ನಾಗವೇಣಿ ಕಾಸರಗೋಡು ಪೊಲೀಸರಿಗೆ ದೂರು ನೀಡಿದ್ದಾರೆ.
ಪುತ್ರನಿಗೆ ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ 2022 ಮೇ ತಿಂಗಳಲ್ಲಿ ಎಚ್ಡಿಎಫ್ಸಿ ಬ್ಯಾಂಕ್ನ ಖಾತೆ ಮೂಲಕ 1 ಲಕ್ಷ ರೂ.ಗಳನ್ನು ದಿಲೀಪ್ ಮತ್ತು ದಿನೇಶ್ಗೆ ನೀಡಿದ್ದೆವು. ಆ ಬಳಿಕ ಹಂತಹಂತವಾಗಿ ಒಂದೂವರೆ ಲಕ್ಷ ರೂ.ಗಳನ್ನು ಗೂಗಲ್ ಪೇ ಮೂಲಕ ನೀಡಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ. ಆದರೆ ವರ್ಷ ಎರಡು ಸಂದರೂ ಇನ್ನೂ ಉದ್ಯೋಗ ಕೊಡಿಸಿಲ್ಲ, ಹಣವನ್ನೂ ಮರಳಿಸಿಲ್ಲವೆಂದು ದೂರಿನಲ್ಲಿ ತಿಳಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.