Kasaragod: ಹನಿಟ್ರ್ಯಾಪ್, ನಕಲಿ ಅಧಿಕಾರಿಯ ಸೋಗಿನಲ್ಲಿ ವಂಚನೆ
Team Udayavani, Aug 8, 2024, 8:38 PM IST
ಕಾಸರಗೋಡು: ಐಎಸ್‌ಆರ್‌ಒ ಟೆಕ್ನಿಕಲ್ ಅಸಿಸ್ಟೆಂಟ್ ಎಂಬ ನಕಲಿ ಅಧಿಕಾರಿಯ ಸೋಗಿನಲ್ಲಿ ಹಣ ಎಗರಿಸಿದ ಪ್ರಕರಣಕ್ಕೆ ಸಂಬಂಧಿಸಿ ಬಂಧಿತಳಾಗಿರುವ ಚೆಮ್ನಾಡ್ ಕೊಂಬನಡ್ಕ ನಿವಾಸಿ ಶ್ರುತಿ ಚಂದ್ರಶೇಖರನ್(34) ವಿರುದ್ಧ ಮತ್ತೆ ಮೂರು ಹೊಸ ಪ್ರಕರಣಗಳನ್ನು ಪೊಲೀಸರು ದಾಖಲಿಸಿದ್ದಾರೆ.
ಪುಲ್ಲೂರು ಪೆರಿಯಾ ಪಂಚಾಯತ್‌ನ ಯುವಕನೋರ್ವ ನೀಡಿದ ದೂರಿನಂತೆ ಮೇಲ್ಪರಂಬ ಪೊಲೀಸರು ಕೇಸು ದಾಖಲಿಸಿದ್ದಾರೆ. ತಾನು ಇಸ್ರೋದ ಅಧಿಕಾರಿಯಾಗಿದ್ದೇನೆಂದು ಹೇಳಿ ಆರೋಪಿ ಶ್ರುತಿ ನನ್ನನ್ನು ಮದುವೆಯಾಗುವುದಾಗಿ ನಂಬಿಸಿ ಆ ಹೆಸರಿನಲ್ಲಿ ಮೊದಲು ನನ್ನಿಂದ 14000 ರೂ. ಪಡೆದುಕೊಂಡು, ಆ ಬಳಿಕ ಮಾರ್ಚ್ 31 ರಂದು ನಕಲಿ ಫೋಟೋ ಮತ್ತು ವೀಡಿಯೋವನ್ನು ತೋರಿಸಿ ಮತ್ತೆ ಐವತ್ತು ಸಾವಿರ ರೂ.ಕೇಳಿ ಪಡೆದುಕೊಂಡಳೆಂದೂ, ಎಪ್ರಿಲ್ 29 ರಂದು ಮತ್ತೆ ಐವತ್ತು ಸಾವಿರ ರೂ. ಪಡೆದ ಬಳಿಕ ವಂಚಿಸಿದ್ದಾಗಿ ದೂರಿನಲ್ಲಿ ತಿಳಿಸಿದ್ದಾರೆ.
ಕಾಸರಗೋಡು ನಗರದ ಲ್ಯಾಬೊಂದರ ಸಿಬ್ಬಂದಿ ಉದುಮದ 42 ವರ್ಷದ ಯುವಕನೋರ್ವ ನೀಡಿದ ದೂರಿನಂತೆ ಕಾಸರಗೋಡು ಪೊಲೀಸರು ಶ್ರುತಿ ವಿರುದ್ಧ ಕೇಸು ದಾಖಲಿಸಿದ್ದಾರೆ. ನಾನು ಆದಾಯ ತೆರಿಗೆ ಇಲಾಖೆಯ ಅಧಿಕಾರಿಯಾಗಿರುವುದಾಗಿ ನಂಬಿಸಿ 2019 ರಿಂದ 2021ರ ಅವಧಿಯಲ್ಲಿ ಶ್ರುತಿ ತನ್ನ ಬ್ಯಾಂಕ್ ಖಾತೆಯಿಂದ 73000 ರೂ. ಪಡೆದುಕೊಂಡಿದ್ದಳು. ಇದಲ್ಲದೆ ಬ್ಯಾಂಕ್‌ನಲ್ಲಿ ಅಡ ಇರಿಸಿದ 83.81 ಗ್ರಾಂ ಚಿನ್ನ ಪಡೆದು ಅದನ್ನೂ ಹಿಂತಿರುಗಿಸದೆ ವಂಚಿಸಿದ್ದಾಗಿ ನೀಡಿದ ದೂರಿನಂತೆ ಕೇಸು ದಾಖಲಿಸಲಾಗಿದೆ.
ನಾನು ಫೆಡರಲ್ ಬ್ಯಾಂಕ್‌ನ ಮೆನೇಜರ್ ಎಂದು ನಂಬಿಸಿ ಶ್ರುತಿ ತನ್ನಿಂದ 1,23,750 ರೂ. ಪಡೆದು ವಂಚಿಸಿದಾಗಿ ಕೊಲ್ಲಂ ಕರುನಾಗಪಳ್ಳಿಯ 33 ರ ಹರೆಯದ ಯುವತಿ ನೀಡಿದ ದೂರಿನಂತೆ ಕೊಲ್ಲಂ ಈಸ್ಟ್ ಪೊಲೀಸ್ ಠಾಣೆಯಲ್ಲಿ ಶ್ರುತಿ ವಿರುದ್ಧ ಪೊಲೀಸರು ಕೇಸು ದಾಖಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ
Mollywood: ʼಮಾರ್ಕೊʼ ಬಳಿಕ ಮೋಹನ್ ಲಾಲ್ ನಿರ್ದೇಶನದ ʼಬರೋಜ್ʼ ಚಿತ್ರಕ್ಕೂ ಪೈರಸಿ ಕಾಟ
BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್ ಗೆ ಆಹ್ವಾನವಿಲ್ಲ! ದಿಗ್ಗಜನ ಬೇಸರ
Gundlupete: ಅಕ್ರಮವಾಗಿ 3 ಕೆ.ಜಿ. 100 ಗ್ರಾಂ ಗಾಂಜಾ ಸಾಗಣೆ: ಬಂಧನ
Odisha: ಕಾರಿಗೆ ಟ್ರಕ್ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.