ಕಾಮಗಾರಿಗೆ ಭೂಮಿಪೂಜೆ :ಹೆದ್ದಾರಿ ಅಭಿವೃದ್ಧಿಗೆ 4.50 ಕೋ. ರೂ.
Team Udayavani, Oct 2, 2019, 5:04 AM IST
ಮಡಿಕೇರಿ: ಕೂಡಿಗೆ, ಕುಶಾಲನಗರ ರಾಜ್ಯ ಹೆದ್ದಾರಿ ವಿಸ್ತರಣೆ ಮತ್ತು ದುರಸ್ತಿ ಕಾರ್ಯಕ್ಕೆ 4.50 ಕೋಟಿ ರೂ. ಖರ್ಚು ಮಾಡಲಾಗುತ್ತಿದ್ದು, ಕಾಮಗಾರಿಗೆ ಲೋಕೋಪಯೋಗಿ ಇಲಾಖೆ ಮೂಲಕ ಚಾಲನೆ ನೀಡಲಾಗಿದೆ ಎಂದು ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಅವರು ತಿಳಿಸಿದ್ದಾರೆ.
ಕೂಡಿಗೆ, ಕುಶಾಲನಗರ ರಸ್ತೆಯ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಮಳೆಹಾನಿ ಪರಿಹಾರ ಮತ್ತು ಇತರ ಯೋಜನೆಗಳ ಮೂಲಕ ರಸ್ತೆಗಳ ಅಭಿವೃದ್ಧಿಗೆ ಮೊದಲ ಆದ್ಯತೆ ನೀಡಲಾಗುತ್ತಿದೆ. ಅಲ್ಲದೆ ಗ್ರಾಮಾಂತರ ಪ್ರದೇಶದ ರಸ್ತೆಯ ಪ್ರಗತಿಗೆ ಹೆಚ್ಚು ಹಣವನ್ನು ಕಾದಿರಿಸಲಾಗಿದೆ ಎಂದರು. ರಸ್ತೆ ಕಾಮಗಾರಿ ಸಂದರ್ಭ ಗುಣಮಟ್ಟ ಕಾಯ್ದುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಸಂದರ್ಭ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ವಿ.ಎಂ.ವಿಜಯ, ಜಿ.ಪಂ. ಸದಸ್ಯೆ ಮಂಜುಳಾ, ತಾ.ಪಂ. ಸದಸ್ಯ ಗಣೇಶ್, ಕೂಡಿಗೆ ಗ್ರಾ.ಪಂ. ಅಧ್ಯಕ್ಷೆ ಪೇಮಲೀಲಾ, ಉಪಾಧ್ಯಕ್ಷ ಗಿರೀಶ್ ಕುಮಾರ್, ಎಪಿಎಂಸಿ ಮಾಜಿ ಅಧ್ಯಕ್ಷ ಎಂ.ಬಿ. ಜಯಂತ್, ತಾಲೂಕು ಬಿಜೆಪಿ ಉಪಾಧ್ಯಕ್ಷ ಕೆ.ಕೆ. ಭೋಗಪ್ಪ ಮೊದಲಾದವರು ಮಾತನಾಡಿದರು.
ಪಕ್ಷದ ಪ್ರಮುಖರಾದ ಕೆ. ವರದ. ಮಣಿಕುಮಾರ್, ಧನರಾಜ್, ಶಶಿಕಿರಣ, ಉದ್ಯಮಿ ಕಿಶೋರ್, ಚಂದ್ರು ಮೂಡ್ಲಿಗೌಡ, ಮಂಜುನಾಥ, ಚಿಣ್ಣಪ್ಪ, ಕೂಡುಮಂಗಳೂರು ಗ್ರಾ. ಪಂ. ಸದಸ್ಯೆ ಸಾವಿತ್ರಿ ರಾಜ್, ತಾಲೂಕು ಎಸ್ ಸಿ ಘಟಕದ ಅಧ್ಯಕ್ಷ ಕುಮಾರಸ್ವಾಮಿ, ಎಸ್‌ಟಿ ಘಟಕದ ಅಧ್ಯಕ್ಷ ಪ್ರಭಾಕರ, ಕೂಡಿಗೆ ಗ್ರಾಮ ಪಂಚಾಯತ್ ಸದಸ್ಯೆ ಕಲ್ಪನಾ ಸೇರಿದಂತೆ ಕೂಡಿಗೆ ಕೂಡುಮಂಗಳೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬಿ.ಜೆ.ಪಿ.ಯ ವಿವಿಧ ಘಟಕಗಳ ಮತ್ತು ಸ್ಥಾನೀಯ ಸಮಿತಿಯ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಗ್ರಾಮಸœರು ಲೋಕೋಪಯೋಗಿ ಇಲಾಖೆಯ ಎಂಜಿನಿಯರ್ ಪೀಟರ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.