Kasargod: ಕಾರಿನಲ್ಲಿ ಸಾಗಿಸುತ್ತಿದ್ದ 40 ಲಕ್ಷ ರೂ. ವಶಕ್ಕೆ ಇಬ್ಬರ ಬಂಧನ
Team Udayavani, Dec 7, 2024, 7:56 PM IST
ಕಾಸರಗೋಡು: ಕಾರಿನಲ್ಲಿ ಯಾವುದೇ ದಾಖಲೆ ಪತ್ರಗಳಿಲ್ಲದೆ ಸಾಗಿಸುತ್ತಿದ್ದ 40 ಲಕ್ಷ ರೂ.ಗಳನ್ನು ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ಈ ಸಂಬಂಧ ಕರ್ನಾಟಕ ನಿವಾಸಿಗಳಾದ ಇಬ್ಬರನ್ನು ವಶಪಡಿಸಿಕೊಂಡಿದ್ದಾರೆ. ತೊಡುಪುಳದ ಅಬಕಾರಿ ಚೆಕ್ಪೋಸ್ಟ್ ಅಸಿಸ್ಟೆಂಟ್ ಎಕ್ಸೈಸ್ ಇನ್ಸ್ಪೆಕ್ಟರ್ ರಾಜೇಶ್ ಕೋಮಾತ್ತ್ ನೇತೃತ್ವದ ತಂಡ ನಡೆಸಿದ ಕಾರ್ಯಾಚರಣೆಯಲ್ಲಿ ಕರ್ನಾಟಕದಿಂದ ಬಂದ ಕಾರಿನಲ್ಲಿ ಹಣ ಪತ್ತೆಯಾಗಿದೆ. ಈ ಸಂಬಂಧ ಕರ್ನಾಟಕದ ಪೆರಿಯಾಪಟ್ಟಣ ನಿವಾಸಿ ಬಿ.ಎಸ್. ರಾಮಚಂದ್ರ ಮತ್ತು ಕಾರಿನ ಚಾಲಕನನ್ನು ವಶಕ್ಕೆ ತೆಗೆದುಕೊಂಡಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ಇವರನ್ನು ಕೋಯಿಕ್ಕೋಡ್ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳಿಗೆ ಹಸ್ತಾಂತರಿಸಲಾಗಿದೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.