ಕಾಸರಗೋಡು ಜಿಲ್ಲೆಯಲ್ಲಿ ಮತ್ತೆ 8 ಮಂದಿಗೆ ಸೋಂಕು


Team Udayavani, Apr 3, 2020, 12:00 PM IST

ಕಾಸರಗೋಡು ಜಿಲ್ಲೆಯಲ್ಲಿ ಮತ್ತೆ 8 ಮಂದಿಗೆ ಸೋಂಕು

ಕಾಸರಗೋಡು: ಕೇರಳದಲ್ಲಿ ಗುರುವಾರ 21 ಮಂದಿಯಲ್ಲಿ ಕೋವಿಡ್‌- 19 ಸೋಂಕು ದೃಢವಾಗಿದ್ದು, ಈ ಪೈಕಿ 8 ಪ್ರಕರಣಗಳು ಕಾಸರಗೋಡು ಜಿಲ್ಲೆಯಿಂದ ವರದಿಯಾಗಿವೆ. ಇದರೊಂದಿಗೆ ಸೋಂಕು ಪೀಡಿತರ ಸಂಖ್ಯೆ ಜಿಲ್ಲೆಯಲ್ಲಿ 128ಕ್ಕೆ, ರಾಜ್ಯದಲ್ಲಿ 286ಕ್ಕೇರಿದೆ.

ಗುರುವಾರ ಇಬ್ಬರು ಸೋಂಕಿತರು ಗುಣಮುಖರಾಗುವುದರೊಂದಿಗೆ ರಾಜ್ಯದಲ್ಲಿ ಈ ವರೆಗೆ ಗುಣಮುಖರಾದವರ ಸಂಖ್ಯೆ 28. ಅವರಲ್ಲಿ ನಾಲ್ವರು ವಿದೇಶಿಗರು. ಇದೀಗ ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ 256 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಬ್ಬರು ಸಾವಿಗೀಡಾಗಿದ್ದಾರೆ.

10,240 ಮಂದಿ ನಿಗಾದಲ್ಲಿ
ಜಿಲ್ಲೆಯಲ್ಲಿ 10,240 ಮಂದಿ ನಿಗಾ
ದಲ್ಲಿದ್ದಾರೆ. ಈ ಪೈಕಿ 10,063 ಮಂದಿ ಮನೆಗಳಲ್ಲೂ, 177 ಮಂದಿ ಆಸ್ಪತ್ರೆಗಳಲ್ಲೂ ನಿಗಾದಲ್ಲಿದ್ದಾರೆ. ಗುರುವಾರ 37 ಸ್ಯಾಂಪಲ್‌ ಸೇರಿದಂತೆ ಈ ತನಕ 1,214 ಸ್ಯಾಂಪಲ್‌ಗ‌ಳನ್ನು ಲ್ಯಾಬ್‌ಗಳಿಗೆ ಕಳುಹಿಸಲಾಗಿದೆ. 362ರ ಫಲಿತಾಂಶ ಇನ್ನಷ್ಟೇ ಲಭಿಸ ಬೇಕಾಗಿದೆ. ಹೊಸದಾಗಿ 21 ಮಂದಿ ಯನ್ನು ಐಸೋಲೇಶನ್‌ ವಾರ್ಡ್‌ಗೆ ದಾಖಲಿಸಲಾಗಿದೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ತಿಳಿಸಿದ್ದಾರೆ.

ಈ ವರೆಗೆ ಕೋವಿಡ್‌- 19 ಬಾಧಿಸಿದವರಲ್ಲಿ 200 ಮಂದಿ ವಿದೇಶದಿಂದ ಬಂದವರು ಮತ್ತು 7 ಮಂದಿ ವಿದೇಶಿಗರು. ರೋಗಿಗಳೊಂದಿಗಿನ ಸಂಪರ್ಕ ದಿಂದ 76 ಮಂದಿಗೆ, ನಿಜಾಮುದ್ದೀನ್‌ ಸಮಾವೇಶದಲ್ಲಿ ಭಾಗವಹಿಸಿ ಮರಳಿದ ಇಬ್ಬರಿಗೆ ಗುಜರಾತ್‌ನಿಂದ ಬಂದ ಓರ್ವನಿಗೆ ಸೋಂಕು ಬಾಧಿಸಿದೆ. ಗುರುವಾರ ತಿರುವನಂತಪುರ ಮತ್ತು ಮಲಪುರ ಜಿಲ್ಲೆಯ ತಲಾ ಒಬ್ಬರು ರೋಗ ಮುಕ್ತರಾಗಿದ್ದಾರೆಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

ಲಾಕ್‌ಡೌನ್‌ ಉಲ್ಲಂಘನೆ: 25 ಪ್ರಕರಣ; 45 ಬಂಧನ
ಲಾಕ್‌ಡೌನ್‌ ಆದೇಶ ಉಲ್ಲಂಘನೆ ಆರೋಪದಲ್ಲಿ ಜಿಲ್ಲೆಯಲ್ಲಿ 25 ಕೇಸು ದಾಖಲಿಸಿ 45 ಮಂದಿಯನ್ನು ಬಂಧಿಸಲಾಗಿದೆ. 18 ವಾಹನಗಳನ್ನು ವಶಪಡಿಸಿಕೊಳ್ಳ ಲಾಗಿದೆ. ಕುಂಬಳೆ ಠಾಣೆಯಲ್ಲಿ 2, ಆದೂರು 3, ವಿದ್ಯಾನಗರ 2, ಮೇಲ್ಪರಂಬ 5, ಚಿತ್ತಾರಿಕಲ್‌ 2, ಅಂಬಲತ್ತರ 1, ಹೊಸದುರ್ಗ 1, ನೀಲೇಶ್ವರ 1, ಚಂದೇರ 2,ವೆಳ್ಳರಿಕುಂಡ್‌ 5, ರಾಜಪುರಂ 1 ಕೇಸು ದಾಖಲಾಗಿವೆ. ಈ ವರೆಗೆ ಜಿಲ್ಲೆಯ ವಿವಿಧ ಠಾಣೆಗಳಲ್ಲಿ 269 ಕೇಸು ದಾಖಲಿಸಿ 390 ಮಂದಿಯನ್ನು ಬಂಧಿಸಲಾಗಿದೆ.

ಹೊರದೇಶ, ರಾಜ್ಯಗಳಲ್ಲಿ ಕೇರಳದ ನಾಲ್ವರ ಸಾವು
ಕಾಸರಗೋಡು: ಕೋವಿಡ್‌- 19 ವೈರಸ್‌ ಸೋಂಕಿನಿಂದಾಗಿ ಯುಎಸ್‌ನಲ್ಲಿ ಇಬ್ಬರು, ದುಬಾೖ ಮತ್ತು ಮುಂಬಯಿಯಲ್ಲಿ ತಲಾ ಒಬ್ಬರಂತೆ ನಾಲ್ಕು ಮಂದಿ ಕೇರಳಿಗರು ಸಾವಿಗೀಡಾಗಿದ್ದಾರೆ.

ಟಾಪ್ ನ್ಯೂಸ್

Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು

Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು

ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್‌ ಸೂರ್ಯವಂಶಿ

Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್‌ ಸೂರ್ಯವಂಶಿ

virat-Hotel

BBMP Notice: ವಿರಾಟ್‌ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್‌

Shabarimala

Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್‌ ಬುಕ್ಕಿಂಗ್‌ ತಾತ್ಕಾಲಿಕ ರದ್ದು

Dinesh-Gundurao

Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್‌

CT-Ravi-BJP

Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ

Mulki-kambala

Kambala Kalarava: ರಾಜ ಮನೆತನದ ಐತಿಹ್ಯವಿರುವ ಮೂಲ್ಕಿ ಸೀಮೆಯ ʼಅರಸು ಕಂಬಳʼ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು

Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು

ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್‌ ಸೂರ್ಯವಂಶಿ

Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್‌ ಸೂರ್ಯವಂಶಿ

virat-Hotel

BBMP Notice: ವಿರಾಟ್‌ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್‌

Shabarimala

Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್‌ ಬುಕ್ಕಿಂಗ್‌ ತಾತ್ಕಾಲಿಕ ರದ್ದು

Dinesh-Gundurao

Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.