Sulya: ಬ್ಯಾನರ್ ಹರಿದ ಪ್ರಕರಣ; ಆರೋಪಿಗಳನ್ನು ಕೂಡಲೇ ಬಂಧಿಸಲು ಒತ್ತಾಯಿಸಿ ಪ್ರತಿಭಟನೆ
ಅಯೋಧ್ಯೆ ಪ್ರತಿಷ್ಠೆ ಸಲುವಾಗಿ ಹಾಕಿದ ಬ್ಯಾನರ್ ಹರಿದ ಪ್ರಕರಣ
Team Udayavani, Jan 7, 2024, 12:03 PM IST
ಸುಳ್ಯ: ಅಯೋಧ್ಯೆ ಪ್ರತಿಷ್ಠೆ ಸಲುವಾಗಿ ಸುಳ್ಯ ನಗರದ ರಸ್ತೆ ಬದಿ ಹಾಕಿದ ಬ್ಯಾನರ್ ಹರಿದು ಹಾಕಿದ ಕಿಡಿಗೇಡಿಗಳನ್ನು ಬಂಧಿಸಲು ವಿಫಲವಾದ ಪೊಲೀಸ್ ಇಲಾಖೆ ವಿರುದ್ಧ ಬೃಹತ್ ಪ್ರತಿಭಟನೆ ಸುಳ್ಯ ನಗರದ ಖಾಸಗಿ ಬಸ್ ನಿಲ್ದಾಣದ ಬಳಿ ಜ.7ರ ಭಾನುವಾರ ನಡೆಯಿತು.
ಶಾಸಕಿ ಭಾಗೀರಥಿ ಮುರುಳ್ಯ ಮಾತನಾಡಿ, ರಾಮ ಭಕ್ತರು ಹಾಕಿದ ಬ್ಯಾನರನ್ನು ಹರಿದು ಹಾಕಿ ರಾಮಂದಿರವನ್ನೇ ಕಟ್ ಮಾಡುವ ಉದ್ದೇಶ ಏನಿದೆ ಅವರಿಗೆ. ಕೃತ್ಯದ ಹಿಂದಿರುವವರ ಬಗ್ಗೆ ಸೂಕ್ತ ತನಿಖೆ ನಡೆಸಿ ಸಮಗ್ರ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಬೇಕು. ಶಾಂತಿ ಸುವ್ಯವಸ್ಥೆಗೆ ಕೈಜೋಡಿಸಬೇಕು. ಪೊಲೀಸ್ ಇಲಾಖೆ ಆರೋಪಿಗಳನ್ನು ಕೂಡಲೇ ಬಂಧಿಸಲಿ ಎಂದು ಆಗ್ರಹಿಸಿದರು.
ಬಿಜೆಪಿ ಸುಳ್ಯ ಮಂಡ ಅಧ್ಯಕ್ಷ ಹರೀಶ್ ಕಂಜಿಪಿಲಿ ಮಾತನಾಡಿ, ಹಿಂದುತ್ವಕ್ಕೆ ಧಕ್ಕೆ ಆದಾಗ ಹೋರಾಟ ನಡೆಸಿದ ಊರು ಸುಳ್ಯ. ಇದೀಗ ಮತ್ತೆ ಮತ್ತೆ ಹಿಂದೂಗಳನ್ನು ಕೆದಕುವ ಕೆಲಸ ನಡೆಯುತ್ತಿದೆ. ತಪ್ಪು ಯಾರು ಮಾಡಿದ್ದರು ಅವರನ್ನು ಹಿಂದೂ ಸಮಾಜ ಖಂಡಿಸುತ್ತದೆ. ಬ್ಯಾನರ್ ಹಾಕಿದನ್ನು ಹರಿದ ವಿರುದ್ಧ ಹಾಗೂ ಆರೋಪಿಗಳನ್ನು ಕೂಡಲೇ ಬಂಧಿಸಲು ಪ್ರತಿಭಟನೆ ನಡೆಸಲಾಗಿದೆ. ಮುಂದಿನ ಮೂರು ದಿನಗಳಲ್ಲಿ ಆರೋಪಿಗಳನ್ನು ಬಂಧಿಸದೇ ಇದ್ದಲ್ಲಿ ಮುಂದೆ ಸುಳ್ಯ ತಾಲೂಕು ಬಂದ್ ಮಾಡಿ ಪ್ರತಿಭಟನೆ ನಡೆಸುತ್ತೇವೆ ಎಂದರು.
ನ.ಪಂ. ಮಾಜಿ ಅಧ್ಯಕ್ಷ ವಿನಯ ಕುಮಾರ್ ಕಂದಡ್ಕ, ಪ್ರಮುಖರಾದ ಎನ್.ಎ.ರಾಮಚಂದ್ರ, ಜಿ.ಜಿ.ನಾಯಕ್, ಲತೇಶ್ ಗುಂಡ್ಯ ಮಾತನಾಡಿ ಕೂಡಲೇ ಆರೋಪಿಗಳ ಪತ್ತೆಗೆ ಆಗ್ರಹಿಸಿದರು.
ತನಿಖೆ ಪ್ರಗತಿಯಲ್ಲಿದೆ. ಕೂಡಲೇ ಆರೋಪಿಗಳ ಬಂಧನವಾಗಲಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದರು. ಪೊಲೀಸ್ ಸಿಬ್ಬಂದಿಗಳು ಬಂದೋ ಬಸ್ತ್ ಮಾಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Ranga Chavadi: ಕಿಶೋರ್ ಡಿ ಶೆಟ್ಟಿ ಅವರಿಗೆ ರಂಗಚಾವಡಿ 2024 ಪ್ರಶಸ್ತಿ
Deepawali: ಸುಳ್ಯದಲ್ಲಿ ಗಮನ ಸೆಳೆದ ಬಲೀಂದ್ರ ಅಲಂಕಾರ ಸರ್ಧೆ
Bantwala ತಾಲೂಕು ಮಟ್ಟದ ಚಿಣ್ಣರ ಬಣ್ಣ ಮಕ್ಕಳ ಚಿತ್ರಕಲಾ ಸ್ಪರ್ಧೆ
Puttur: ಮುಂಜಾನೆ 3 ಗಂಟೆಗೆ ನಡೆಯಿತು ಅಗಲಿದವರಿಗೆ ಅವಲಕ್ಕಿ ಸಮರ್ಪಣೆ!
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.