ಸಾರ್ವಜನಿಕ ಸಂಪರ್ಕ ಇಲಾಖೆಗೆ ನೂತನ ಕಟ್ಟಡ: ಶಿಲಾನ್ಯಾಸ
Team Udayavani, Feb 28, 2019, 1:00 AM IST
ಕಾಸರಗೋಡು: ರಾಜ್ಯ ಸರಕಾರ ಒಂದು ಸಾವಿರ ದಿನ ಪೂರೈಸಿದ್ದು ಎಲ್ಲ ವಲಯಗಳಲ್ಲಿ ಬೃಹತ್ ಯೋಜನೆಗಳನ್ನು ಜಾರಿಗೊಳಿಸಿದೆ ಎಂದು ರಾಜ್ಯ ಕಂದಾಯ ಸಚಿವ ಇ. ಚಂದ್ರಶೇಖರನ್ ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಜಿಲ್ಲಾ ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗಾಗಿ ನಿರ್ಮಿಸಲಾಗುವ ನೂತನ ಕಟ್ಟಡದ ಶಿಲಾನ್ಯಾಸ ನಡೆಸಿ, ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಅವರು ಮಾತನಾಡಿದರು.
ಸರಕಾರದ ಸಂದೇಶಗಳನ್ನು ಕ್ಲಪ್ತ ಸಮಯದಲ್ಲಿ ಜನತೆಗೆ ತಲುಪಿಸುವ ಹೊಣೆಯನ್ನು ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನಿರ್ವಹಿಸುತ್ತಿದೆ. ಜತೆಗೆ ಸರಕಾರ ಮತ್ತು ಸಾರ್ವಜನಿಕರ ನಡುವೆ ಕೊಂಡಿಯಾಗಿ ಚಟುವಟಿಕೆ ನಡೆಸುತ್ತಿರುವುದು ಪ್ರಶಂಸನೀಯ ಎಂದರು.
ಶಿಕ್ಷಣ ಇಲಾಖೆಗೆ ಮಾತ್ರ ಒಂದು ಸಾವಿರ ಕೋಟಿ ರೂ. ಮೀಸಲಿರಿಸಿದೆ. ಯುವಜನತೆಗಾಗಿ ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡಲಾಗಿದೆ. 18,896 ಹುದ್ದೆಗಳನ್ನು ಸೃಷ್ಟಿಸಲಾಗಿದೆ. ಬರಿದಾಗಿರುವ ಹುದ್ದೆಗಳಿಗೆ ನೇಮಕಾತಿಗೂ ಸರ್ವ ಯತ್ನ ನಡೆಸಿದೆ. ಅಭಿವೃದ್ಧಿಗಾಗಿ ಬಳಸುವ ನಿಧಿಗಳನ್ನು ಸೂಕ್ತ ಅವಧಿಯಲ್ಲಿ ಬಳಸಲಾಗಿದೆ. ಮೂರು ವರ್ಷಗಳ ಅವಧಿಯಲ್ಲಿ ಬಹುತೇಕ ಯೋಜನೆಗಳು ಪೂರ್ಣಗೊಳ್ಳಲಿವೆ ಎಂದವರು ನಿರೀಕ್ಷೆ ವ್ಯಕ್ತಪಡಿಸಿದರು.
ಸಂಸದ ಪಿ. ಕರುಣಾಕರನ್ ಅಧ್ಯಕ್ಷತೆ ವಹಿಸಿದ್ದರು. ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನಿರ್ದೇಶಕ ಪಿ.ಎಸ್.ರಾಜಶೇಖರನ್ ಯೋಜನೆ ಮಾಹಿತಿ ನೀಡಿದರು. ಲೋಕೋಪಯೋಗಿ ಕಾರ್ಯಕಾರಿ ಎಂಜಿನಿಯರ್ ಸಿ. ರಾಜೇಶ್ ಚಂದ್ರನ್ ತಾಂತ್ರಿಕ ವರದಿ ಸಲ್ಲಿಸಿದರು. ಶಾಸಕ ಕೆ. ಕುಂಞಿರಾಮನ್, ಹೆಚ್ಚುವರಿ ದಂಡನಾಧಿ ಕಾರಿ ಎನ್. ದೇವಿದಾಸ್, ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕ ಕೆ.ಪಿ.ಅಬ್ದುಲ್ ಖಾದರ್, ಜಿಲ್ಲಾ ಕ್ರೀಡಾ ಮಂಡಳಿ ಅಧ್ಯಕ್ಷ ಹಬೀಬ್ ರಹಮಾನ್, ರಾಜ್ಯ ಕಾರ್ಯಕಾರಿ ಸದಸ್ಯ ಬಾಲನ್ ಮಾಣಿಯಾಟ್, ಎಚ್.ಎ.ಎಲ್.ಎ.ಜಿ.ಎಂ. ಸಿ.ಎ.ರಾವ್, ಪ್ರಸ್ ಕ್ಲಬ್ ಅಧ್ಯಕ್ಷ ಟಿ.ಎ.ಶಾಫಿ, ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳಾದ ನ್ಯಾಯವಾದಿ ಗೋವಿಂದನ್ ಪಳ್ಳಿಕಾಪಿಲ್, ಕೈಪ್ರತ್ ಕೃಷ್ಣನ್ ನಂಬ್ಯಾರ್, ಕೆ.ವಿ.ಯು ಧಿಷ್ಠಿರನ್, ಮಾಟುಮ್ಮಲ್ ಹಸನ್ ಮೊದಲಾದವರು ಉಪಸ್ಥಿತರಿದ್ದರು.
ಜಿಲ್ಲಾಧಿಕಾರಿ ಡಾ| ಡಿ.ಸಜಿತ್ ಬಾಬು ಸ್ವಾಗತಿಸಿದರು. ಜಿಲ್ಲಾ ಮಾಹಿತಿ ಅಧಿಕಾರಿ ಮಧುಸೂದನನ್ ಎಂ. ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kumbale: ವರ್ಕಾಡಿ ಪ್ಲೈವುಡ್ ಕಾರ್ಖಾನೆಯಲ್ಲಿ ಬೆಂಕಿ ಅನಾಹುತ: ಬೆಂಕಿ: ಕೋಟ್ಯಂತರ ರೂ. ನಷ್ಟ
Kasargod: ಬೆಕ್ಕಿಗಾಗಿ ಬಾವಿಗಿಳಿದ ವಿದ್ಯಾರ್ಥಿಯ ರಕ್ಷಣೆ
Kasaragodu: ಸಿವಿಲ್ ಪೊಲೀಸ್ ಆಫೀಸರ್ ಕೊಲೆ ಪ್ರಕರಣ: ಪತಿಯ ಸೆರೆ
Kasragodu: ನರ್ಸಿಂಗ್ ವಿದ್ಯಾರ್ಥಿನಿ ಸಾವು : ಕ್ರೈಂ ಬ್ರ್ಯಾಂಚ್ ತನಿಖೆ
Court: ಮಾವೋವಾದಿ ಸೋಮನ್ ಕಾಸರಗೋಡು ಕೋರ್ಟಿಗೆ ಹಾಜರು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.