ಪತ್ನಿಯ ಸೀಮಂತಕ್ಕಾಗಿ 2 ದಿನಗಳ ಹಿಂದೆ ಕೊಲ್ಲಿಯಿಂದ ಊರಿಗೆ ಬಂದಿದ್ದ ಯುವಕ ಅಪಘಾತದಲ್ಲಿ ಸಾವು

Team Udayavani, Jun 25, 2024, 9:15 PM IST

13-Kumbale

ಕುಂಬಳೆ: ಎರಡು ದಿನಗಳ ಹಿಂದೆಯಷ್ಟೇ ಪತ್ನಿಯ ಸೀಮಂತ ಕಾರ್ಯಕ್ರಮಕ್ಕಾಗಿ ಕೊಲ್ಲಿಯಿಂದ ಊರಿಗೆ ಬಂದಿದ್ದ ಯುವಕ ಬೈಕ್‌ ಅಪಘಾತದಲ್ಲಿ ಸಾವಿಗೀಡಾದ ಘಟನೆ ನಡೆದಿದೆ. ಬಂಬ್ರಾಣ ಉಜಾರು ನಿವಾಸಿ ದಿ|ಅಮ್ಮು ಶೆಟ್ಟಿ ಅವರ ಪುತ್ರ ಅಜಿತ್‌ ಶೆಟ್ಟಿ(32) ಸಾವಿಗೀಡಾದವರು. ಜೂ. 24 ರಂದು ರಾತ್ರಿ 9.30ಕ್ಕೆ ಆರಿಕ್ಕಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಬೈಕ್‌ ಅಪಘಾತದಲ್ಲಿ ಈ ಸಾವು ಸಂಭವಿಸಿದೆ.

ಅವರು ಕತಾರ್‌ನಲ್ಲಿ ಉದ್ಯೋಗದಲ್ಲಿದ್ದರು. ಜೂ. 22ರಂದು ಊರಿಗೆ ಬಂದಿದ್ದರು. ಜೂ. 23ರಂದು ಪತ್ನಿಯ ಸೀಮಂತ ಕಾರ್ಯಕ್ರಮ ನಡೆದಿತ್ತು. ಜೂ. 24ರಂದು ರಾತ್ರಿ ಕುಂಬಳೆ ಪೇಟೆಗೆ ಬಂದ ಅಜಿತ್‌ ಶೆಟ್ಟಿ ಆಹಾರ ವಸ್ತುಗಳನ್ನು ಖರೀದಿಸಿ ಬುಲೆಟ್‌ನಲ್ಲಿ ಮನೆಗೆ ಮರಳುತ್ತಿದ್ದಾಗ ರಾಷ್ಟ್ರೀಯ ಹೆದ್ದಾರಿ ಆರಿಕ್ಕಾಡಿ ಶ್ರೀ ಹನುಮಾನ್‌ ದೇವಸ್ಥಾನ ಸಮೀಪ ಬೈಕ್‌ ರಸ್ತೆಯ ಡಿವೈಡರ್‌ಗೆ ಢಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಗಂಭೀರ ಗಾಯಗೊಂಡ ಅವರನ್ನು ಸ್ಥಳೀಯರು ಹಾಗು ಇತರ ಪ್ರಯಾಣಿಕರು ಕುಂಬಳೆಯ ಜಿಲ್ಲಾ ಸರಕಾರಿ ಆಸ್ಪತ್ರೆಗೆ ತಲುಪಿಸಿ ಪ್ರಥಮ ಚಿಕಿತ್ಸೆ ನೀಡಿದ ಬಳಿಕ ಮಂಗಳೂರಿನ ಆಸ್ಪತ್ರೆಗೆ ಕೊಂಡೊಯ್ಯುತ್ತಿದ್ದಾಗ ದಾರಿ ಮಧ್ಯೆ ಸಾವನ್ನಪ್ಪಿದರು. ಮೃತರು ತಾಯಿ, ಪತ್ನಿ, ಸಹೋದರ, ಸಹೋದರಿಯನ್ನು ಅಗಲಿದ್ದಾರೆ.

ಟಾಪ್ ನ್ಯೂಸ್

Nigeria; ಮದುವೆ ಹಾಲ್, ಆಸ್ಪತ್ರೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿ; 18 ಮಂದಿ ಸಾವು

Nigeria; ಮದುವೆ ಹಾಲ್, ಆಸ್ಪತ್ರೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿ; 18 ಮಂದಿ ಸಾವು

3-vitla

Campco ಮಾಜಿ ಅಧ್ಯಕ್ಷ ಎಲ್.ಎನ್. ಕೂಡೂರು ಇನ್ನಿಲ್ಲ

INDWvsSAW; ಸ್ನೇಹ್ ರಾಣಾ ಸ್ಪಿನ್ ಜಾಲಕ್ಕೆ ಸಿಲುಕಿ ದಿಢೀರ್ ಕುಸಿತ ಕಂಡ ದ.ಆಫ್ರಿಕಾ

INDWvsSAW; ಸ್ನೇಹ್ ರಾಣಾ ಸ್ಪಿನ್ ಜಾಲಕ್ಕೆ ಸಿಲುಕಿ ದಿಢೀರ್ ಕುಸಿತ ಕಂಡ ದ.ಆಫ್ರಿಕಾ

T20 World Cup ಗೆದ್ದ ಧನ್ಯತೆಯಲ್ಲಿ ಬಾರ್ಬಡೋಸ್ ಪಿಚ್ ಮಣ್ಣು ತಿಂದ ರೋಹಿತ್ ಶರ್ಮಾ

T20 World Cup ಗೆದ್ದ ಧನ್ಯತೆಯಲ್ಲಿ ಬಾರ್ಬಡೋಸ್ ಪಿಚ್ ಮಣ್ಣು ತಿಂದ ರೋಹಿತ್ ಶರ್ಮಾ

T20 WC; This is my luck…..: Coach Rahul Dravid

T20 WC; ಇದು ನನ್ನ ಅದೃಷ್ಟ…..: ಟ್ರೋಫಿಯೊಂದಿಗೆ ಟೀಂ ಇಂಡಿಯಾ ತೊರೆದ ಕೋಚ್ ದ್ರಾವಿಡ್ ಮಾತು

T20 World Cup; ವಿರಾಟ್ ದಾರಿಯಲ್ಲೇ ಸಾಗಿದ ರೋಹಿತ್; ಕಪ್ ಗೆದ್ದ ಬಳಿಕ ನಿವೃತ್ತಿ ಘೋಷಣೆ

T20 World Cup; ವಿರಾಟ್ ದಾರಿಯಲ್ಲೇ ಸಾಗಿದ ರೋಹಿತ್; ಕಪ್ ಗೆದ್ದ ಬಳಿಕ ನಿವೃತ್ತಿ ಘೋಷಣೆ

2-kushtagi

Kushtagi: ಮನೆ ಮುಂದೆ ನಿಲ್ಲಿಸಿದ್ದ ದ್ವಿ ಚಕ್ರ ವಾಹನಕ್ಕೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madikeri ಸೆ.15ರ ವರೆಗೆ “ಗಾಜಿನ ಸೇತುವೆ’ ವೀಕ್ಷಣೆ ಸ್ಥಗಿತ : ಜಿಲ್ಲಾಧಿಕಾರಿ ಸೂಚನೆ

Madikeri ಸೆ.15ರ ವರೆಗೆ “ಗಾಜಿನ ಸೇತುವೆ’ ವೀಕ್ಷಣೆ ಸ್ಥಗಿತ : ಜಿಲ್ಲಾಧಿಕಾರಿ ಸೂಚನೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

ಬಿರುಸಿನ ಗಾಳಿ ಮಳೆ- ಕಾಸರಗೋಡು ಜಿಲ್ಲೆಯ ಹಲವೆಡೆ ವ್ಯಾಪಕ ಹಾನಿ

ಬಿರುಸಿನ ಗಾಳಿ ಮಳೆ- ಕಾಸರಗೋಡು ಜಿಲ್ಲೆಯ ಹಲವೆಡೆ ವ್ಯಾಪಕ ಹಾನಿ

madhur-temple

Kasaragod: ಧಾರಾಕಾರ ಮಳೆಗೆ ಮಧೂರು ಸಿದ್ಧಿವಿನಾಯಕ ದೇವಸ್ಥಾನ ಜಲಾವೃತ

TET Exam ಮಾರ್ಗಸೂಚಿಯಂತೆ ಟಿಇಟಿ ಪರೀಕ್ಷೆ ನಡೆಸಿ : ಜಿಲ್ಲಾಧಿಕಾರಿ

TET Exam ಮಾರ್ಗಸೂಚಿಯಂತೆ ಟಿಇಟಿ ಪರೀಕ್ಷೆ ನಡೆಸಿ : ಜಿಲ್ಲಾಧಿಕಾರಿ

MUST WATCH

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

ಹೊಸ ಸೇರ್ಪಡೆ

Bantwala: ಮರ ಬಿದ್ದು ಕೋಳಿ ಫಾರಂ ಜಖಂ

Nigeria; ಮದುವೆ ಹಾಲ್, ಆಸ್ಪತ್ರೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿ; 18 ಮಂದಿ ಸಾವು

Nigeria; ಮದುವೆ ಹಾಲ್, ಆಸ್ಪತ್ರೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿ; 18 ಮಂದಿ ಸಾವು

Untitled-1

Bengaluru: ಬೆಂಕಿ ಅವಘಡ; 6 ಕಾಲೇಜು ಬಸ್‌ಗಳು ಸುಟ್ಟು ಕರಕಲು

3-vitla

Campco ಮಾಜಿ ಅಧ್ಯಕ್ಷ ಎಲ್.ಎನ್. ಕೂಡೂರು ಇನ್ನಿಲ್ಲ

Bengaluru: ಟ್ರಾಫಿಕ್‌ ಜಾಮ್‌ ಪರಿಹಾರಕ್ಕೆ ಕೇಂದ್ರದ ಮೊರೆ ಹೋದ ರಾಜ್ಯ

Bengaluru: ಟ್ರಾಫಿಕ್‌ ಜಾಮ್‌ ಪರಿಹಾರಕ್ಕೆ ಕೇಂದ್ರದ ಮೊರೆ ಹೋದ ರಾಜ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.