“ಕಾರ್ಯಕರ್ತರು ಒಗ್ಗೂಡಿ ಪಕ್ಷವನ್ನು ಬಲ ಪಡಿಸಿ’
Team Udayavani, Jul 23, 2019, 5:56 AM IST
ಪೆರ್ಲ: ಬಿಜೆಪಿ ಎಣ್ಮಕಜೆ ಪಂಚಾಯತ್ ಸಮಿತಿ ಕಾರ್ಯಕರ್ತರ ಸಮಾವೇಶ ಪೆರ್ಲ ಭಾರತೀ ಸದನದಲ್ಲಿ ರವಿವಾರರಂದು ನಡೆಯಿತು.
ಸಮಾವೇಶ ಉದ್ಘಾಟಿಸಿ ಮಾತನಾಡಿದ ಬಿಜೆಪಿ ಕಾಸರಗೋಡು ಜಿಲ್ಲಾಧ್ಯಕ್ಷ ನ್ಯಾ|ಕೆ.ಶ್ರೀಕಾಂತ್, ದೇಶ ವಿಭಜನೆಯಲ್ಲಿ ಪ್ರಮುಖ ಪಾತ್ರವಹಿಸಿದ ಜಿನ್ನಾ ಹಿಂದು ಮುಸ್ಲಿಮರ ವೈಪರೀತ್ಯಗಳನ್ನು ಎತ್ತಿ ಹಿಡಿದು ಮುಸ್ಲಿಮರಿಗೆ ಪ್ರತ್ಯೇಕ ರಾಜ್ಯ ಬೇಕೆಂಬ ಕೂಗಿನೊಂದಿಗೆ ದೇಶವಿಭಜನೆಗೆ ಕಾರಣರಾದರು.ದೇಶ ವಿಭಜನೆಗೊಂಡು 70ವರ್ಷ ಕಳೆದರೂ ಅದೇ ಪಾಕಿಸ್ಥಾನದ ಮುಸ್ಲಿಂ ಲೀಗ್ ಪತಾಕೆಯೊಂದಿಗೆ ಭಾರತದಲ್ಲಿ ಮತಯಾಚಿಸುತ್ತಿದೆ. ಕಳೆದ ಲೋಕ ಸಭಾ ಚುನಾವಣೆಯಲ್ಲಿ ಮುಸ್ಲಿಂ ಲೀಗ್ ಒತ್ತಡಕ್ಕೆ ಮಣಿದು ಕಾಂಗ್ರೇಸ್ ಹೊರ ಜಿಲ್ಲೆಯ ಅಭ್ಯರ್ಥಿಯನ್ನು ಕಣಕ್ಕಿಳಿಸಿ ಗೆಲ್ಲಿಸಿದೆ.
ಸಿಪಿಐ(ಎಂ) ಪಕ್ಷದ ಜನ ವಿರೋಧಿ ನೀತಿ,ದಬ್ಟಾಳಿಕೆ,ಹಿಂಸಾ ರಾಜಕೀಯದಿಂದ ಜನರು ರೋಸಿ ಹೋಗಿ ತಿರಸ್ಕರಿಸಿದ್ದಾರೆ ಎಂದು ಹೇಳಿದರು.
ಬಿಜೆಪಿ ರಾಜ್ಯ ಸಮಿತಿ ಸದಸ್ಯ ರವೀಶ ತಂತ್ರಿ ಕುಂಟಾರು ಮಾತನಾಡಿ, ಮಂಜೇಶ್ವರ ಉಪ ಚುನಾವಣೆ ಸಮೀಪಿಸಿದ್ದು ಕಾರ್ಯಕರ್ತರು ಒಗ್ಗೂಡಿ ಪಕ್ಷವನ್ನು ಬಲ ಪಡಿಸುವಂತೆ ಕರೆ ನೀಡಿದರು.
ಎಣ್ಮಕಜೆ ಪಂ.ಸಮಿತಿ ಉಪಾಧ್ಯಕ್ಷ ರಮಾನಂದ ಎಡಮಲೆ ಅಧ್ಯಕ್ಷತೆ ವಹಿಸಿದ್ದರು.ಮಂಜೇಶ್ವರ ಮಂ.ಅಧ್ಯಕ್ಷ ಸತೀಶ್ಚಂದ್ರ ಭಂಡಾರಿ ಕೋಳಾರು, ಕಾಸರಗೋಡು ಮಂ.ಅಧ್ಯಕ್ಷ ಸುಧಾಮ ಗೋಸಾಡ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.
ಇದೇ ಸಂದರ್ಭದಲ್ಲಿ ಸಮಾಜ ಸೇವಕರಾದ ಸುಂದರ ನಾಯ್ಕ ಖಂಡಿಗೆ,ಗೋವಿಂದ ನಾಯ್ಕ ಬಜಕೂಡ್ಲು , ವೆಂಕಟ್ರಮಣ ಭಟ್ ಎಡಮಲೆ ಅವರನ್ನು ಅಭಿನಂದಿಸಲಾಯಿತು.
ಬಿಜೆಪಿ ರಾಜ್ಯ ಸಮಿತಿ ಸದಸ್ಯೆ ಪುಷ್ಪಾ ಅಮೆಕ್ಕಳ ಉಪಸ್ಥಿತರಿದ್ದರು. ಬಿಜೆಪಿ ಎಣ್ಮಕಜೆ ಪಂ.ನೂತನ ಸಮಿತಿ ರಚಿಸಲಾಯಿತು.ಅಧ್ಯಕ್ಷರಾಗಿ ಉದಯ ಚೆಟ್ಟಿಯಾರ್ ಬಜಕೂಡ್ಲು , ಉಪಾಧ್ಯಕ್ಷರಾಗಿ ರಮಾನಂದ ಎಡಮಲೆ ಮತ್ತು ಪದ್ಮಶೇಖರ್ ನೇರೋಳು, ಕಾರ್ಯದರ್ಶಿಗಳಾಗಿ ಸತೀಶ್ ಕುಲಾಲ್ ನಲ್ಕ ,ಸುರೇಶ್ ವಾಣೀನಗರ ಹಾಗೂ 9 ಮಂದಿ ಕಾರ್ಯಕಾರಿ ಸದಸ್ಯರನ್ನು ಆಯ್ಕೆ ಮಾಡಲಾಯಿತು. ಪಂ.ಸಮಿತಿ ಉಪಾಧ್ಯಕ್ಷ ಪದ್ಮಶೇಖರ್ ನೇರೋಳು ಸ್ವಾಗತಿಸಿ,ಪ್ರಧಾನ ಕಾರ್ಯದರ್ಶಿ ನಾರಾಯಣ ನಾಯ್ಕ ಅಡ್ಕಸ್ಥಳ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ
BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್ ವಿಚಾರವಾಗಿ ವಾಗ್ವಾದ
Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್ ಸೆರೆ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.