ಮಿಂಚಿದ ಅಗಲ್ಪಾಡಿ ಪ್ರೌಢ ಶಾಲಾ ಯಕ್ಷಗಾನ ತಂಡ


Team Udayavani, Dec 12, 2018, 1:05 AM IST

agalpadi-11-12.jpg

ವಿದ್ಯಾನಗರ: ಆಲಪ್ಪುಳದಲ್ಲಿ ನಡೆದ ರಾಜ್ಯ ಮಟ್ಟದ ಶಾಲಾ ಕಲೋತ್ಸವದಲ್ಲಿ ಅಗಲ್ಪಾಡಿ ಶ್ರೀ ಅನ್ನಪೂರ್ಣೇಶ್ವರೀ ಪ್ರೌಢ ಶಾಲಾ ಯಕ್ಷಗಾನ ತಂಡವು ಎ ಗ್ರೇಡ್‌ನೊಂದಿಗೆ ಪ್ರಥಮ ಸ್ಥಾನವನ್ನು ಗಳಿಸಿ ಮತ್ತೂಮ್ಮೆ ಗಡಿನಾಡಿನ ಜನತೆ ಹೆಮ್ಮೆ ಪಡುವಂತೆ ಮಾಡಿದೆ. ಐವತ್ತೂಂಬತ್ತನೇ ರಾಜ್ಯಮಟ್ಟದ ಶಾಲಾ ಕಲೋತ್ಸವದಲ್ಲಿ ಅಗಲ್ಪಾಡಿ ಶಾಲೆಯ ಯಕ್ಷಪ್ರತಿಭೆಗಳು ಮುರಾಸುರ ವಧೆ ಎಂಬ ಯಕ್ಷಗಾನವನ್ನು ಪ್ರದರ್ಶಿಸಿ ಅಪಾರವಾದ ಮೆಚ್ಚುಗೆ ಹಾಗೂ ಬಹುಮಾನವನ್ನು ತಮ್ಮದಾಗಿಸಿಕೊಂಡರು.

ಹತ್ತು ಜಿಲ್ಲೆಗಳಿಂದ ಬಂದ ಯಕ್ಷಗಾನ ತಂಡಗಳೊಂದಿಗೆ ಪೈಪೋಟಿ ನೀಡಿ ಈ ಸಾಧನೆಯನ್ನು ಮಾಡಿದ್ದಾರೆ. ಹೆಸರಾಂತ ನಾಟ್ಯಗುರು, ಜಾನಪದ ಲೋಕ ಪ್ರಶಸ್ತಿ ಪುರಸ್ಕೃತ ಜಯರಾಮ ಪಾಟಾಳಿ ಎಡಮಲೆ ನಿರ್ದೇಶನದಲ್ಲಿ ನಡೆದ ಯಕ್ಷಗಾನವು ಮಲಯಾಳ ಮಣ್ಣಿನಲ್ಲಿ ಯಕ್ಷಲೋಕ ಸೃಷ್ಟಿ ಬೆರಗುಗಣ್ಣಿನಿಂದ ನೋಡುವಂತೆ ಮಾಡಿತು. ಕಿಕ್ಕಿರಿದು ನೆರೆದ ಪ್ರೇಕ್ಷಕರನ್ನು ಯಕ್ಷಗಾನದ ಅದ್ಬುತ ಲೋಕದೊಳಗೆ ಹರಿಸುವಂತೆ ಮಾಡಿತು.

ಯಕ್ಷಗಾನದ ಮೂಲ ಪರಂಪರೆಗೆ ಧಕ್ಕೆಯಾಗದಂತೆ ಪ್ರದರ್ಶಿಸಲ್ಪಟ್ಟ ಯಕ್ಷಗಾನ ಪ್ರೇಕ್ಷಕರ ಹಾಗೂ ತೀರ್ಪುಗಾರರ ಮನಸೂರೆಗೊಳ್ಳುವಲ್ಲಿ ಯಶಸ್ವಿಯಾಯಿತು. ಮುರಾಸುರನ ಪಾತ್ರ ದಲ್ಲಿ ದೀಕ್ಷಿತ್‌ ಕುಮಾರ್‌, ದೇವೇಂದ್ರನಾಗಿ ಶ್ರೀರಾಮ ಗಮನ ಸೆಳೆದರು. ದೇವಬಲವಾಗಿ ನಂದಕಿಶೋರ ಡಿ. ಹಾಗೂ ರಾಕ್ಷಸಬಲವಾಗಿ ಕೆ.ಆರ್‌.ದೀಕ್ಷಾ ತಮ್ಮ ನಾಟ್ಯದ, ಧಿಂಗಿಣದ ಸೊಬಗಿನಿಂದ ಪ್ರೇಕ್ಷಕರನ್ನು ಸೆಳೆದರು.

ದೂತನಾಗಿ ಪ್ರಜ್ವಲ್‌ ಶೆಟ್ಟಿ ನೋಡುಗರನ್ನು ನಗೆಗಡಲಲ್ಲಿ ತೇಲಾಡುವಂತೆ ಮಾಡಿದರು. ಸುಪ್ರೀತಾ ಸುಧೀರ್‌ ರೈ ಕೃಷ್ಣನ ಪಾತ್ರಕ್ಕೆ ಜೀವ ತುಂಬಿದರೆ ಭಾವನಾಕೃಷ್ಣ ಜಗನ್ಮಾತೆಯಾಗಿ ಮಂಗಳವನ್ನುಂಟು ಮಾಡಿದರು. ಮುಮ್ಮೇಳದಲ್ಲಿ ಪುಟ್ಟ ಮಕ್ಕಳ ಉತ್ಸಾಹ ಜನಸಾಗರವನ್ನು ಹಿಡಿದಿಡುವಲ್ಲಿ ಯಶಸ್ವಿಯಾಯಿತು. ಹಿಮ್ಮೇಳದಲ್ಲಿ ಭಾಗವತರಾಗಿ ಮನೋಹರ್‌ ಬಲ್ಲಾಳ್‌, ಚೆಂಡೆ ಮದ್ದಳೆಯಲ್ಲಿ ಶ್ರೀಧರ ಪಡ್ರೆ, ಚಕ್ರತಾಳದಲ್ಲಿ ಉದಯ ಸಹಕರಿಸಿದರು. ನೇಪಥ್ಯದಲ್ಲಿ ವಸ್ತ್ರಾಲಂಕಾರ ಹಾಗೂ ಮುಖವರ್ಣಿಕೆಯಲ್ಲಿ ಮೋಹನ್‌ ಹಾಗೂ ಸಂಗಡಿಗರು ಸಹಕರಿಸಿದರು.

ಪ್ರದರ್ಶಿಸಿ ಗೆದ್ದಿರುವುದು ಸಂತೋಷ
ವಿದ್ಯಾರ್ಥಿಗಳ ಶಿಸ್ತು, ಪರಿಶ್ರಮ ಈ ಗೆಲುಗೆ ಕಾರಣ. ಸತತವಾಗಿ ಉತ್ಸಾಹದಿಂದ ಅಭ್ಯಾಸ ಮಾಡಿ ವೇದಿಕೆಯಲ್ಲಿ ಪ್ರದರ್ಶನ ನೀಡಿದ್ದಾರೆ. ಶಿಕ್ಷಕವೃಂದದವರ ಮತ್ತು ಹೆತ್ತವರ ಸಂಪೂರ್ಣ ಬೆಂಬಲ ಹಾಗೂ ಸಹಕಾರ ನಮ್ಮೊಂದಿಗಿತ್ತು. ಕಾಸರಗೋಡಿನ ಯಕ್ಷಗಾನದ ಮಹತ್ವವನ್ನು, ಆಕರ್ಷಣೆಯನ್ನು ಮತ್ತೂಮ್ಮೆ ಕಲೋತ್ಸವದ ವೇದಿಕೆಯಲ್ಲಿ ಪ್ರದರ್ಶಿಸಿ ಗೆದ್ದು ಬಂದಿರುವುದು ಸಂತೋಷ.
– ಜಯರಾಮ ಪಾಟಾಳಿ ಪಡುಮಲೆ, ನಾಟ್ಯಗುರು

ಟಾಪ್ ನ್ಯೂಸ್

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

18-bng

Bengaluru: ಕಂಕಣ ಕಾಲ-2 ಅರಮನೆ ಮೈದಾನದಲ್ಲೂ ಬಜೆಟ್‌ ವಿವಾಹ ಸಾಧ್ಯ!

Maharstra: ಬೈಕ್‌ಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ: 10ಮಂದಿ ಮೃತ್ಯು

Maharashtra: ಬೈಕ್ ಸವಾರನನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ… 10 ಮಂದಿ ಮೃತ್ಯು

ಯತ್ನಾಳ್‌

Vijayapura: ಸಿದ್ದರಾಮಯ್ಯ ಈಗ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ: ಯತ್ನಾಳ್‌ ಟೀಕೆ

Karnataka ಸೇರಿ 4ರಾಜ್ಯಗಳಿಗೆ ಬೇಕಿದ್ದ ಹಂತಕ ಅರೆಸ್ಟ್, 2000 CCTV ಪರಿಶೀಲಿಸಿದ್ದ ಪೊಲೀಸರು

Karnataka ಸೇರಿ 4ರಾಜ್ಯಗಳಿಗೆ ಬೇಕಿದ್ದ ಹಂತಕ ಅರೆಸ್ಟ್, 2000 CCTV ಪರಿಶೀಲಿಸಿದ್ದ ಪೊಲೀಸರು

shindhe

Maharashtra: ದಿಢೀರನೆ ಊರಿಗೆ ತೆರಳಿದ ಶಿಂಧೆ; ಮತ್ತೆ ಮುಂದುವರಿದ ʼಮಹಾ ಸಿಎಂʼ ಕಗ್ಗಂಟು

Champions Trophy: If Modi’s visit to Pakistan was right, then Team India should also go: Tejaswi Yadav

Champions Trophy: ಮೋದಿ ಪಾಕ್‌ ಗೆ ಹೋಗಿದ್ದು ಸರಿಯಾದರೆ ಟೀಂ ಇಂಡಿಯಾವೂ ಹೋಗಲಿ: ತೇಜಸ್ವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

Pension Fraud: ಕಲ್ಯಾಣ ಪಿಂಚಣಿ ಲಪಟಾವಣೆ; ಸಿಕ್ಕಿ ಬಿದ್ದ 1,458 ಸರಕಾರಿ ಸಿಬಂದಿ

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kumbla: ಬುರ್ಖಾಧಾರಿ ಯುವಕ ಪೊಲೀಸ್‌ ವಶಕ್ಕೆ

Kumbla: ಬುರ್ಖಾಧಾರಿ ಯುವಕ ಪೊಲೀಸ್‌ ವಶಕ್ಕೆ

4

Kasaragod: ಕಾರು ಢಿಕ್ಕಿ ಹೊಡೆಸಿ ವ್ಯಾಪಾರಿಯ 2 ಕೆಜಿ ಚಿನ್ನ ದರೋಡೆ

Untitled-5

Kasaragod: ನಗ-ನಗದು ಕಳವು; ಆರೋಪಿ ಬಂಧನ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

18-bng

Bengaluru: ಕಂಕಣ ಕಾಲ-2 ಅರಮನೆ ಮೈದಾನದಲ್ಲೂ ಬಜೆಟ್‌ ವಿವಾಹ ಸಾಧ್ಯ!

Yuva rajkumar’s Ekka movie muhurtha

Ekka: ಯುವ ರಾಜಕುಮಾರ್‌ ಹೊಸ ಸಿನಿಮಾ ʼಎಕ್ಕʼ ಮುಹೂರ್ತ

Maharstra: ಬೈಕ್‌ಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ: 10ಮಂದಿ ಮೃತ್ಯು

Maharashtra: ಬೈಕ್ ಸವಾರನನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ… 10 ಮಂದಿ ಮೃತ್ಯು

17-

Bengaluru: ದೆಹಲಿಯ ನೇಲ್‌ ಆರ್ಟಿಸ್ಟ್ ನೇಣಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.