ಅಗಲ್ಪಾಡಿ ಶಾಲೆಗೆ ಪ್ರಶಸ್ತಿಯ ಗರಿ
Team Udayavani, Mar 20, 2019, 1:00 AM IST
ಬದಿಯಡ್ಕ : ಗಡಿನಾಡಿನ ಅತ್ಯುತ್ತಮ ಕನ್ನಡ ಮಾಧ್ಯಮ ಶಾಲೆ ಪ್ರಶಸ್ತಿ ಅಗಲ್ಪಾಡಿ ಶ್ರೀ ಅನ್ನಪೂರ್ಣೇಶ್ವರಿ ಪ್ರೌಢಶಾಲೆಗೆ ಲಭಿಸಿದೆ. ನಿಟ್ಟೆ ಎಜುಕೇಶನ್ ಟ್ರಸ್ಟ್ ಕೊಡಮಾಡುವ ಡಾ| ನಿಟ್ಟೆ ಶಂಕರ ಅಡ್ಯಂತಾಯ ಸ್ಮಾರಕ ಅತ್ಯುತ್ತಮ ಶಾಲಾ ಪ್ರಶಸ್ತಿ ವಿತರಣೆ ಸಮಾರಂಭ ನಿಟ್ಟೆ ವಿಶ್ವವಿದ್ಯಾನಿಲಯ ಕ್ಯಾಂಪಸ್‌ನ ಕೆ.ಎಸ್. ಆಡಿಟೋರಿಯಂನಲ್ಲಿ ನಡೆಯಿತು. ಶಾಲಾ ಮುಖ್ಯಸ್ಥರು, ವಿದ್ಯಾರ್ಥಿಗಳೊಂದಿಗೆ ಮೂರು ಲಕ್ಷ ರೂ ನಗದು ಹಾಗೂ ವಿಶೇಷ ಪ್ರಶಸ್ತಿ ಪತ್ರವನ್ನು ಪಡೆದುಕೊಂಡರು. ನಿವೃತ್ತ ನ್ಯಾಯಮೂರ್ತಿ ಕರ್ನಾಟಕದ ಮಾಜಿ ಲೋಕಾಯುಕ್ತ ಎನ್.ಸಂತೋಷ್ ಹೆಗ್ಡೆ ಪ್ರಶಸ್ತಿ ವಿತರಿಸಿದರು. ನಿಟ್ಟೆ ವಿಶ್ವವಿದ್ಯಾಲಯದ ಕುಲಾಧಿಪತಿ ಎನ್. ವಿನಯ ಹೆಗ್ಡೆ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಅತ್ಯುತ್ತಮ ಶಾಲೆ ಆಯ್ಕೆ ಸಮಿತಿ ಸದಸ್ಯರಾದ ಕುದಿ ವಸಂತ ಶೆಟ್ಟಿ , ಪ್ರವೀಣ ಕುಮಾರಿ ಹಾಗೂ ಶಂಕರನಾರಾಯಣ ಅವರನ್ನು ಗೌರವಿಸಲಾಯಿತು. ಸಹ ಕುಲಾಧಿಪತಿ ಪ್ರೊಫೆಸರ್ ಡಾ| ಎಂ. ಶಾಂತಾರಾಮ ಶೆಟ್ಟಿ , ವಿವಿಯ ಆರ್ಥಿಕ ಹಾಗೂ ಅಭಿವೃದ್ಧಿ ನಿರ್ದೇಶಕ ಡಾ. ರಾಜೇಂದ್ರ ಎಂ. ನಿಟ್ಟೆ ವಿಶ್ವವಿದ್ಯಾಲಯದ ಆಡಳಿತ ಸಹ ಕುಲಾಧಿಪತಿ ಎನ್ ವಿಶಾಲ್ ಹೆಗ್ಡೆ ಸಮಾರಂಭದಲ್ಲಿ ಉಪಸ್ಥಿತರಿದ್ದರು.
ಗ್ರಾಮೀಣ ಕನ್ನಡ ಮಾಧ್ಯಮ ಶಾಲೆಗಳನ್ನು ಗುರುತಿಸುವ ನಿಟ್ಟಿನಲ್ಲಿ ನಿಟ್ಟೆ ವಿಶ್ವವಿದ್ಯಾಲಯ ಜಂಟಿಯಾಗಿ ದಕ್ಷಿಣ ಕನ್ನಡ ಕಾಸರಗೋಡು ಹಾಗೂ ಉಡುಪಿ ಜಿಲ್ಲೆಗಳ ಅರ್ಹ ಶಾಲೆಗಳನ್ನು ಗುರುತಿಸಿ, ಗಡಿನಾಡಿನ ಅತ್ಯುತ್ತಮ ಕನ್ನಡ ಶಾಲೆಯಾಗಿ ಅಗಲ್ಪಾಡಿ ಶ್ರೀ ಅನ್ನಪುರ್ಣೇಶ್ವರಿ ಕನ್ನಡ ಮಾಧ್ಯಮ ಪ್ರೌಢಶಾಲೆ ಆಯ್ಕೆಗೊಂಡಿತು. ಶಾಲಾ ವ್ಯವಸ್ಥಾಪಕ ನಾರಾಯಣ ಶರ್ಮ ಬಳ್ಳಪದವು, ಮುಖ್ಯೋಪಾಧ್ಯಾಯರಾದ ಗಿರೀಶ ಎನ್, ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಶ್ರೀಪತಿ ಎಂ., ಎಂಪಿಟಿಎ ಅಧ್ಯಕ್ಷೆ ಜಯಂತಿ, ಶಾಲಾ ಅಧ್ಯಾಪಕರು, ವಿದ್ಯಾರ್ಥಿಗಳು ಜತೆಗಿದ್ದು ಪ್ರಶಸ್ತಿಯನ್ನು ಪಡೆದುಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Karkala: ಪಾಳು ಬಿದ್ದ ಸರಕಾರಿ ಕಟ್ಟಡಗಳು; ಲಕ್ಷಾಂತರ ಅನುದಾನ ವ್ಯರ್ಥ
Network Problem: ಇಲ್ಲಿ ಟವರ್ ಇದೆ, ಆದರೆ ನೆಟ್ವರ್ಕ್ ಸಿಗಲ್ಲ!
Hubli: ತೀವ್ರತೆ ಪಡೆದ ಬಂದ್; ಬಸ್-ಆಟೋ ಇಲ್ಲದೆ ಪರದಾಡಿದ ಜನತೆ
Bhopal: ಉಗ್ರರನ್ನು ಇರಿಸಲಾಗಿದ್ದ ಕೇಂದ್ರ ಕಾರಾಗೃಹದ ಬಳಿ ಚೀನಾ ನಿರ್ಮಿತ ಡ್ರೋನ್ ಪತ್ತೆ…
Kitchen appliance: ಬಜಾಜ್ ನಿಂದ ಅಡುಗೆ ಮನೆಗೆ ಬಂತು ಮತ್ತೊಂದು ಸಾಧನ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.