ಆನೆಕೆರೆಯ ಹೂಳೆತ್ತುವ ಕಾರ್ಯಕ್ಕೆ ಉದ್ಯಮಿಯಿಂದ ಚಾಲನೆ 

Team Udayavani, Mar 20, 2018, 11:40 AM IST

Anekere-19-3.jpg

ಸೋಮವಾರಪೇಟೆ: ನೂರಾರು ವರ್ಷಗಳ ಇತಿಹಾಸ ಹೊಂದಿರುವ ಪಟ್ಟಣದ ಆನೆಕೆರೆಯ ಹೂಳೆತ್ತುವ ಕಾರ್ಯಕ್ಕೆ ಉದ್ಯಮಿ ಹರಪಳ್ಳಿ ರವೀಂದ್ರ ಅವರು ಚಾಲನೆ ನೀಡಿದರು. ಕಳೆದ ಎರಡು ದಶಕಗಳಿಂದ ಹೂಳುತುಂಬಿ ಬತ್ತಿದ್ದ ಆನೆಕೆರೆಗೆ ಕಾಯಕಲ್ಪ ನೀಡುವಂತೆ ಸಾರ್ವಜನಿಕರು ಮನವಿ ಮಾಡುತ್ತಲೇ ಬಂದಿದ್ದರೂ ಸಹ ಸಂಬಂಧಿಸಿದವರು ಈ ಬಗ್ಗೆ ಗಮನ ಹರಿಸಿರಲಿಲ್ಲ. ಇದೀಗ ಉದ್ಯಮಿ ಹರಪಳ್ಳಿ ರವೀಂದ್ರ ಅವರು ತಮ್ಮ ಸ್ವಂತ ಖರ್ಚಿನಿಂದ ಆನೆಕೆರೆಯ ಹೂಳನ್ನು ತೆಗೆಯಲು ಮುಂದಾಗಿದ್ದು, ಇಂದು ವಿಶೇಷ ಪೂಜೆ ಅಲ್ಲಿಸಿ ಕಾಮಗಾರಿಗೆ ಚಾಲನೆ ನೀಡಿದರು. ಕಳೆದ ಕೆಲ ದಿನಗಳ ಹಿಂದೆ ಯಡೂರು ಗ್ರಾಮದಲ್ಲಿ ಬತ್ತಿದ್ದ ವಿಶಾಲ ಕೆರೆಯನ್ನು ರೂ. 8.50ಲಕ್ಷ ವೆಚ್ಚದಲ್ಲಿ ಹೂಳುತೆಗೆದಿದ್ದು, ಆನೆಕೆರೆಯ ಕಾಮಗಾರಿಗೆ 7 ಲಕ್ಷ ವೆಚ್ಚವನ್ನು ಅಂದಾಜಿಸಲಾಗಿದೆ.

ಅವರ ಈ ಕಾರ್ಯಕ್ಕೆ ಸೋಮವಾರಪೇಟೆಯ ವಾಹನ ಚಾಲಕರು ಮತ್ತು ಮೋಟಾರು ಕೆಲಸಗಾರರ ಸಂಘ ಹಾಗೂ ನಗರ ಗೌಡ ಒಕ್ಕೂಟದ ಸದಸ್ಯರು ಕೈ ಜೋಡಿಸಿದ್ದಾರೆ. ಹೂಳೆತ್ತುವ ಕಾರ್ಯಕ್ಕೆ ಚಾಲನೆ ನೀಡಿದ ನಂತರ ಮಾತನಾಡಿದ ರವೀಂದ್ರ, ಅಂತರ್ಜಲ ಮಟ್ಟ ದಿನೇ ದಿನೇ ಕುಸಿಯುತ್ತಿರುವದರಿಂದ ಕೆರೆಗಳನ್ನು ಉಳಿಸಿಕೊಳ್ಳಲೇಬೇಕಾಗಿದೆ. ಈ ನಿಟ್ಟಿನಲ್ಲಿ ತಾನು ತನ್ನ ಸ್ವಂತ ದುಡಿಮೆಯಿಂದ ಕೆರೆಗಳ ಹೂಳೆತ್ತುವ ಕಾರ್ಯಕ್ಕೆ ಹಣ ವಿನಿಯೋಗಿಸುತ್ತಿದ್ದೇನೆ. ಈಗಾಗಲೇ ಯಡೂರು ಕೆರೆಯಲ್ಲಿ ಹೂಳೆತ್ತುವ ಕಾರ್ಯ ಮುಕ್ತಾಯಗೊಂಡಿದ್ದು, ಮುಂದಿನ ದಿನಗಳಲ್ಲಿ ಅಬ್ಬೂರುಕಟ್ಟೆ ವ್ಯಾಪ್ತಿಯಲ್ಲಿ ಕೆರೆಗಳ ಹೂಳೆತ್ತಲಾಗುವದು ಎಂದರು.

ಒಂದು ಹಿಟಾಚಿ ಯಂತ್ರದ ಮೂಲಕ ಕೆರೆಯ ಹೂಳೆತ್ತುವ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು, ನಾಲ್ಕು ಟಿಪ್ಪರ್‌ಗಳ ಮೂಲಕ ಹೂಳನ್ನು ಹೊರಭಾಗಕ್ಕೆ ಸಾಗಿಸಲಾಗುತ್ತಿದೆ. ಸುಮಾರು 7 ಲಕ್ಷ ವೆಚ್ಚದಲ್ಲಿ ಕಾಮಗಾರಿ ನಡೆಯಲಿದ್ದು, ಮುಂದಿನ 10 ದಿನಗಳಲ್ಲಿ ಮುಕ್ತಾಯವಾಗಲಿದೆ ಎಂದು ರವೀಂದ್ರ ತಿಳಿಸಿದರು. ಮೋಟಾರು ಯೂನಿಯನ್‌ ಅಧ್ಯಕ್ಷ ಸಿ.ಸಿ. ನಂದ ಮಾತನಾಡಿ, ಅನೆಕೆರೆಗೆ ಕಾಯಕಲ್ಪ ನೀಡುವದು ಈ ಭಾಗದ ಸಾರ್ವಜನಿಕರ ದಶಕಗಳ ಬೇಡಿಕೆಯಾಗಿತ್ತು. ಅದನ್ನು ರವೀಂದ್ರ ಅವರು ಈಡೇರಿಸಿದ್ದಾರೆ. ಇವರ ಸಮಾಜಮುಖೀ ಕಾರ್ಯಕ್ಕೆ ಮೋಟಾರ್‌ ಯೂನಿಯನ್‌ ಸಂಪೂರ್ಣ ಬೆಂಬಲ ನೀಡಲಿದ್ದು, ಆನೆಕೆರೆಯಲ್ಲಿ ಈಗಾಗಲೇ ಸಂಘದಿಂದ ಶುಚಿತ್ವ ಕಾರ್ಯ ನಡೆಸಲಾಗಿದೆ. ಮುಂದಿನ ದಿನಗಳಲ್ಲಿ ಯಾರೂ ಸಹ ಇಲ್ಲಿಗೆ ತ್ಯಾಜ್ಯಗಳನ್ನು ಸುರಿಯಬಾರದು ಎಂದು ಮನವಿ ಮಾಡಿದರು.

ಈ ಸಂದರ್ಭ ನಗರ ಗೌಡ ಒಕ್ಕೂಟದ ಅಧ್ಯಕ್ಷ ಪ್ರಕಾಶ್‌, ಬನ್ನಳ್ಳಿ ಗೋಪಾಲ್‌, ಮೋಟಾರ್‌ ಯೂನಿಯನ್‌ ಕಾರ್ಯದರ್ಶಿ ಬಾಲಕೃಷ್ಣ ಪೂಜಾರಿ, ಪದಾಧಿಕಾರಿಗಳಾದ ಖಾದರ್‌, ಪರಮೇಶ್‌, ಹಾಲಪ್ಪ, ಶೇಷಪ್ಪ, ಚೌಡ್ಲು ವಿಎಸ್‌ಎಸ್‌ಎನ್‌ ನಿರ್ದೇಶಕಿ ಜಾನಕಿ ವೆಂಕಟೇಶ್‌, ಆಟೋ ಯೂನಿಯನ್‌ ಅಧ್ಯಕ್ಷ ಮೋಹನ್‌ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Jasprit Bumrah ಬೌಲಿಂಗ್‌ ಶೈಲಿಯನ್ನೇ ಶಂಕಿಸಿದ ಆಸೀಸ್‌ ಮಾಧ್ಯಮಗಳು!

Jasprit Bumrah ಬೌಲಿಂಗ್‌ ಶೈಲಿಯನ್ನೇ ಶಂಕಿಸಿದ ಆಸೀಸ್‌ ಮಾಧ್ಯಮಗಳು!

Mangaluru: ಎರಡು ಸೈಬರ್‌ ವಂಚನೆ ಪ್ರಕರಣ: ಸೆನ್‌ ಪೊಲೀಸರಿಂದ ಇಬ್ಬರ‌ ಬಂಧನ

Mangaluru: ಎರಡು ಸೈಬರ್‌ ವಂಚನೆ ಪ್ರಕರಣ: ಸೆನ್‌ ಪೊಲೀಸರಿಂದ ಇಬ್ಬರ‌ ಬಂಧನ

High-Court

High Court: ಕಬ್ಬಿಣದ ಅದಿರಿಗೆ ದರ ನಿಗದಿ: ಕೇಂದ್ರ, ರಾಜ್ಯಕ್ಕೆ ನೋಟಿಸ್‌

Nagendra-ED

Valmiki Nigama Scam: ಪ್ರಕರಣ ರದ್ದು ಕೋರಿ ಮಾಜಿ ಸಚಿವ ನಾಗೇಂದ್ರ ಹೈಕೋರ್ಟ್‌ಗೆ

CS-Shadakshari

Govt. Employees Association: ನನ್ನ ಸೋಲಿಸಲು ರಾಜಕೀಯ ಷಡ್ಯಂತ್ರ: ಸಿ.ಎಸ್‌.ಷಡಾಕ್ಷರಿ

Christmas: ಕರಾವಳಿಯಲ್ಲಿ ಸಡಗರ, ಸಂಭ್ರಮದ ಕ್ರಿಸ್ಮಸ್‌

Christmas: ಕರಾವಳಿಯಲ್ಲಿ ಸಡಗರ, ಸಂಭ್ರಮದ ಕ್ರಿಸ್ಮಸ್‌

Belthangady: ಸಂತ ಲಾರೆನ್ಸ್‌ ದೇವಾಲಯದಲ್ಲಿ ಕ್ರಿಸ್ಮಸ್‌ ಬಲಿಪೂಜೆ

Belthangady: ಸಂತ ಲಾರೆನ್ಸ್‌ ದೇವಾಲಯದಲ್ಲಿ ಕ್ರಿಸ್ಮಸ್‌ ಬಲಿಪೂಜೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madikeri: ವಾಹನ ಅಪಘಾತಕ್ಕೀಡಾದ ವ್ಯಕ್ತಿ ಸಾವುMadikeri: ವಾಹನ ಅಪಘಾತಕ್ಕೀಡಾದ ವ್ಯಕ್ತಿ ಸಾವು

Madikeri: ವಾಹನ ಅಪಘಾತಕ್ಕೀಡಾದ ವ್ಯಕ್ತಿ ಸಾವು

Kasaragod: ಯೂತ್‌ ಕಾಂಗ್ರೆಸ್‌ ಕಾರ್ಯಕರ್ತರಿಬ್ಬರ ಕೊಲೆ: ಡಿ. 28 ರಂದು ಕೋರ್ಟ್‌ ತೀರ್ಪು

Kasaragod: ಯೂತ್‌ ಕಾಂಗ್ರೆಸ್‌ ಕಾರ್ಯಕರ್ತರಿಬ್ಬರ ಕೊಲೆ: ಡಿ. 28 ರಂದು ಕೋರ್ಟ್‌ ತೀರ್ಪು

2-madikeri

Madikeri: ರಾಜ್ಯದಲ್ಲೇ ಮೊಟ್ಟಮೊದಲ ಮೂಳೆ ದಾನ: ಸಾವಿನಲ್ಲೂ ಸಾರ್ಥಕತೆ ಮೆರೆದ ಯುವಕ

Khattar (2)

Kasaragod: ಸ್ಥಳ ನೀಡಿದರೆ ಕೇರಳದಲ್ಲಿ ಅಣು ಶಕ್ತಿ ನಿಲಯ: ಕೇಂದ್ರ ಸಚಿವ ಖಟ್ಟರ್‌

court

Kasaragod; ಯುವಕನ ಕೊಲೆ: 6 ಮಂದಿಗೆ ಜೀವಾವಧಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Jasprit Bumrah ಬೌಲಿಂಗ್‌ ಶೈಲಿಯನ್ನೇ ಶಂಕಿಸಿದ ಆಸೀಸ್‌ ಮಾಧ್ಯಮಗಳು!

Jasprit Bumrah ಬೌಲಿಂಗ್‌ ಶೈಲಿಯನ್ನೇ ಶಂಕಿಸಿದ ಆಸೀಸ್‌ ಮಾಧ್ಯಮಗಳು!

Mangaluru: ಎರಡು ಸೈಬರ್‌ ವಂಚನೆ ಪ್ರಕರಣ: ಸೆನ್‌ ಪೊಲೀಸರಿಂದ ಇಬ್ಬರ‌ ಬಂಧನ

Mangaluru: ಎರಡು ಸೈಬರ್‌ ವಂಚನೆ ಪ್ರಕರಣ: ಸೆನ್‌ ಪೊಲೀಸರಿಂದ ಇಬ್ಬರ‌ ಬಂಧನ

High-Court

High Court: ಕಬ್ಬಿಣದ ಅದಿರಿಗೆ ದರ ನಿಗದಿ: ಕೇಂದ್ರ, ರಾಜ್ಯಕ್ಕೆ ನೋಟಿಸ್‌

Nagendra-ED

Valmiki Nigama Scam: ಪ್ರಕರಣ ರದ್ದು ಕೋರಿ ಮಾಜಿ ಸಚಿವ ನಾಗೇಂದ್ರ ಹೈಕೋರ್ಟ್‌ಗೆ

CS-Shadakshari

Govt. Employees Association: ನನ್ನ ಸೋಲಿಸಲು ರಾಜಕೀಯ ಷಡ್ಯಂತ್ರ: ಸಿ.ಎಸ್‌.ಷಡಾಕ್ಷರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.