ಕನ್ನಡ ಶಾಲೆಗಳಲ್ಲಿ ಕನ್ನಡೇತರ ಅಧ್ಯಾಪಕರ ನೇಮಕ; ಖಂಡನೆ
Team Udayavani, Mar 9, 2022, 1:32 PM IST
ಕಾಸರಗೋಡು: ಭಾಷಾ ಅಲ್ಪ ಸಂಖ್ಯಾಕ ಪ್ರದೇಶವಾದ ಕಾಸರಗೋಡಿನಲ್ಲಿ ಸಾಂವಿಧಾನಿಕವಾಗಿ ಭಾಷಾ ಅಲ್ಪ ಸಂಖ್ಯಾಕರ ಹಕ್ಕನ್ನು ಹೊಂದಿದ್ದರೂ ಕನ್ನಡಿಗರು ಅನುಭವಿಸುವ ಕಷ್ಟ ಇಂದು ನಿನ್ನೆಯದಲ್ಲ. ಕನ್ನಡ ಮಾಧ್ಯಮ ಶಾಲೆಗಳಲ್ಲಿ ಕನ್ನಡೇತರ ಅಧ್ಯಾಪಕರ ನೇಮಕ ಈ ಹಿಂದೆ ಅನೇಕ ಬಾರಿ ನಡೆದು, ತೀವ್ರ ಪ್ರತಿರೋಧ ಎದುರಿಸಿದರೂ ಈಗ ಮತ್ತೆ ಕನ್ನಡೇತರ ಅಧ್ಯಾಪಕರ ನೇಮಕವನ್ನು ಮಾಡುವ ಮೂಲಕ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದೆ.
ಅಂಗಡಿಮೊಗರು ಸ. ಪ್ರೌಢ ಶಾಲೆಯ ಕನ್ನಡ ವಿಭಾಗಕ್ಕೆ ಕನ್ನಡೇತರ ಅಧ್ಯಾಪಕರ ನೇಮಕದ ಆದೇಶ ಆಗಿದ್ದು, ಈ ಬಗ್ಗೆ ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕರ ಸಂಘದ ನಿಯೋಗವು ಶಾಲೆಗೆ ಭೇಟಿ ನೀಡಿ, ಈ ನೇಮಕಾತಿಯ ವಿರುದ್ಧ ತೀವ್ರವಾಗಿ ಖಂಡನೆಯನ್ನು ವ್ಯಕ್ತಪಡಿಸಿತು. ಈ ಹಿಂದೆ ಆದ ಇಂತಹ ನೇಮಕಾತಿಗಳ ಬಗ್ಗೆ ಸಂಬಂಧಪಟ್ಟ ಇಲಾಖೆಗಳಿಗೆ ಮನವಿ ಸಲ್ಲಿಸಿದರೂ ಮತ್ತೆ ಇಂತಹ ನೇಮಕಾತಿಯನ್ನು ಮಾಡುವ ಮೂಲಕ ಕನ್ನಡಿಗರ ಸಾಂವಿಧಾನಿಕ ಹಕ್ಕನ್ನು ಮತ್ತೂಮ್ಮೆ ಕಸಿದುಕೊಂಡಂತಾಗಿದೆ, ಈ ಬಗ್ಗೆ ಶೀಘ್ರ ಕ್ರಮ ಕೈಗೊಂಡು ಕನ್ನಡ ಮಕ್ಕಳ ಭವಿಷ್ಯವನ್ನು ಕಾಪಾಡಬೇಕೆಂದು ಆಗ್ರಹಿಸಿದೆ.
ಇದನ್ನೂ ಓದಿ:ಮಹಾನಗರ ಪಾಲಿಕೆ: ವಾರ್ಡ್ ಕಮಿಟಿ ಅಸ್ತಿತ್ವಕ್ಕೆ: 60 ವಾರ್ಡ್‌ಗಳ ಮಹತ್ವದ ಸಭೆ
ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕರ ಸಂಘದ ಕೇಂದ್ರ ಸಮಿತಿಯ ಅಧ್ಯಕ್ಷ ಶ್ರೀನಿವಾಸ ರಾವ್ ಪಿ.ಬಿ, ಪ್ರಧಾನ ಕಾರ್ಯದರ್ಶಿ ಜಯಪ್ರಶಾಂತ್ ಪಾಲೆಂಗ್ರಿ, ಸಂ. ಕಾರ್ಯದರ್ಶಿ ಪ್ರದೀಪ್ ಕುಮಾರ್ ಶೆಟ್ಟಿ, ಕೋಶಾಧಿಕಾರಿ ಪದ್ಮಾವತಿ ಎಂ, ಕುಂಬಳೆ ಉಪಜಿಲ್ಲಾ ಸಮಿತಿ ಅಧ್ಯಕ್ಷರಾದ ಶಿವಕುಮಾರ್ ಎಸ್., ಕೋಶಾಧಿಕಾರಿ ಶರತ್ ಕುಮಾರ್, ಸದಸ್ಯರಾದ ನಯನಾ ಪ್ರಸಾದ್ ಎಚ್.ಟಿ., ಗುರುರಾಜ್ ಮೊದಲಾದವರು ಒಳಗೊಂಡ ನಿಯೋಗವು ಶಾಲೆಗೆ ಭೇಟಿ ನೀಡಿ, ನೇಮಕಾತಿಯನ್ನು ತಡೆ ಹಿಡಿಯಲು ಸಂಪೂರ್ಣ ಸಹಕಾರದ ಭರವಸೆಯನ್ನು ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Waqf ಗೆಜೆಟ್ ನೋಟಿಫಿಕೇಶನ್ ನಲ್ಲಿ ಬಿಜೆಪಿ ಪಾಲಿದೆ: ಎಚ್.ಕೆ. ಪಾಟೀಲ್ ಕಿಡಿ
Waqf ವಿಷಯ ಮುಗಿದು ಹೋಗಿದೆ.. ಬಿಜೆಪಿಯವರಿಂದ ಗೊಂದಲ: ಲಕ್ಷ್ಮಣ ಸವದಿ
Dandeli: ಅಪರಿಚಿತ ವಾಹನ ಡಿಕ್ಕಿ; ಕರು ಸಾವು
Covid ಗಿಂತ ಬಿಜೆಪಿ ಭ್ರಷ್ಟಾಚಾರದಿಂದ ಹೆಚ್ಚು ಜನ ಪ್ರಾಣ ಕಳೆದುಕೊಂಡಿದ್ದಾರೆ: ಖಂಡ್ರೆ
Delhi: ಕ್ಷುಲ್ಲಕ ಕಾರಣಕ್ಕೆ 19ರ ಯುವಕನ ಗುಂಡಿಕ್ಕಿ ಹ*ತ್ಯೆಗೈದ ಅಪ್ರಾಪ್ತರು!!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.