![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
Team Udayavani, Jul 16, 2023, 5:04 AM IST
ಮಡಿಕೇರಿ: ಕುಶಾಲನಗರ ಪಟ್ಟಣದ ಇಂದಿರಾ ಬಡಾವಣೆ, ಪ್ರಥಮ ದರ್ಜೆ ಕಾಲೇಜು ಸಮೀಪದ ವಾಲಿ¾ಕಿ ಭವನದ ಬಳಿ ಮಾದಕ ವಸ್ತುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕೇರಳದ ಸಿಜಿನ್ ಮಂಗಳಸೆರಿ, ಸೋಮವಾರಪೇಟೆ ಕಲ್ಕಂದೂರು ನಿವಾಸಿ ಮುಸ್ತಾಫ (40), ಹಕೀಂ (23), ಗುಮ್ಮನಕೊಲ್ಲಿಯ ವಿನೋದ್ (41) ಹಾಗೂ ಶಂಕರ (41) ರನ್ನು ಮಾಲು ಸಹಿತ ಬಂಧಿಸಲಾಗಿದೆ. ಆರೋಪಿಗಳಿಂದ 1.75 ಕೆ.ಜಿ. ಗಾಂಜಾ ಮತ್ತು 5.6 ಗ್ರಾಂ ಎಂಡಿಎಂಎ ನಿಷೇಧಿತ ಮಾದಕ ವಸ್ತುವನ್ನು ವಶಕ್ಕೆ ಪಡೆಯಲಾಗಿದೆ. ಸೋಮವಾರಪೇಟೆ ಡಿವೈಎಸ್‌ಪಿ ಆರ್.ವಿ. ಗಂಗಾಧರಪ್ಪ ನೇತೃತ್ವದಲ್ಲಿ ಕುಶಾಲನಗರ ವೃತ್ತ ನಿರೀಕ್ಷಕ ಬಿ.ಜಿ. ಮಹೇಶ್, ಕುಶಾಲನಗರ ಪಟ್ಟಣ ಠಾಣಾಧಿಕಾರಿ ರವೀಂದ್ರ ಮತ್ತು ಸಿಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
You seem to have an Ad Blocker on.
To continue reading, please turn it off or whitelist Udayavani.