ಬದಿಯಡ್ಕ ಸಮುದಾಯ ಆರೋಗ್ಯ ಕೇಂದ್ರ: ವೈದ್ಯರ ಕೊರತೆ

ಚಿಕಿತ್ಸೆಯಿಲ್ಲದೆ ರೋಗಿಗಳು ಹೈರಾಣ

Team Udayavani, Aug 3, 2019, 5:57 AM IST

1bdk01

ಬದಿಯಡ್ಕ: ಮಳೆಗಾಲದಲ್ಲಿ ಕಾಯಿಲೆಗಳು ಹೆಚ್ಚು ಹೆಚ್ಚಾಗಿ ಕಾಡುವುದರಿಂದ ಎಲ್ಲ ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಕುಟುಂಬ ಆರೋಗ್ಯ ಕೇಂದ್ರಗಳು ಸೇರಿದಂತೆ ಆಸ್ಪತ್ರೆ ಗಳು ಸೂಕ್ತ ರೀತಿಯ ಚಿಕಿತ್ಸೆ ನೀಡಲು ಪೂರ್ವ ತಯಾರಿ ಮಾಡಿಕೊಳ್ಳಬೇಕಾದ ಅಗತ್ಯವಿದೆಯಾದರೂ ಕೆಲವೆಡೆ ನಾನಾ ಕಾರಣಗಳಿಂದ ಜನರಿಗೆ ಸರಿಯಾದ ಚಿಕಿತ್ಸೆ ದೊರಕದಿರುವುದು ವಿಷಾದನೀಯ.

ಡೆಂಗ್ಯೂ ಮೊದಲಾದ ಪ್ರಾಣಹಾನಿಕರ ರೋಗಗಳು ಬಾಧಿಸಿ ಚಿಕಿತ್ಸೆಗೆ ಬರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಆದರೆ ಆಸ್ಪತ್ರೆ ಇದ್ದರೆ ವೈದ್ಯರಿಲ್ಲ, ವೈದ್ಯರಿದ್ದರೆ ವ್ಯವಸ್ಥೆ ಇಲ್ಲ ಎಂಬಂತಾಗಿದೆ. ಇದಕ್ಕೆ ಬದಿಯಡ್ಕ ಸಮುದಾಯ ಆರೋಗ್ಯ ಕೇಂದ್ರವೂ ಹೊರತಲ್ಲ. ಬದಿಯಡ್ಕ ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರ ಕೊರತೆಯಿಂದ ರೋಗಿಗಳನ್ನು ದಾಖಲಿಸಿ ಚಿಕಿತ್ಸೆ ನೀಡುವ ವ್ಯವಸ್ಥೆ ಮೊಟಕುಗೊಂಡಿರುವುದಲ್ಲದೆ ಹೊರ ರೋಗಿ ವಿಭಾಗದಲ್ಲಿಯೂ ಬಡರೋಗಿಗಳು ಚಿಕಿತ್ಸೆಗಾಗಿ ಅದೆಷ್ಟೋ ಹೊತ್ತು ಕ್ಯೂ ನಿಲ್ಲಬೇಕಾಗಿ ಬಂದಿದೆ. ಹವಾಮಾನ ವೈಪರೀತ್ಯದಿಂದ ಅನೇಕ ಮಂದಿಗೆ ಜ್ವರ ಹಾಗೂ ಇನ್ನಿತರ ರೋಗಗಳು ಬಾಧಿಸಿದ್ದು, ರೋಗಿಗಳ ಸಂಖ್ಯೆಯಲ್ಲಿಯೂ ಹೆಚ್ಚಳವುಂಟಾಗಿದೆ.

ರೋಗಬಾಧೆಯಿಂದ ನಿತ್ರಾಣದಲ್ಲಿರುವ ರೋಗಿಗಳು ಹಾಗೂ ಪುಟ್ಟ ಮಕ್ಕಳನ್ನು ಕೈಯಲ್ಲಿ ಎತ್ತಿಕೊಂಡು ಸರತಿ ಸಾಲಿನಲ್ಲಿ ನಿಲ್ಲಬೇಕಾದ ಪರಿಸ್ಥಿತಿ ತಾಯಂದಿರಿಗೆ ಉಂಟಾಗುತ್ತಿದೆ. ಈ ಆಸ್ಪತ್ರೆಯಲ್ಲಿ 30 ಹಾಸಿಗೆಗಳಿದ್ದು, ಈ ಹಿಂದೆ ರೋಗಿಗಳನ್ನು ದಾಖಲಿಸಿ ಚಿಕಿತ್ಸೆ ನೀಡುವ ಸೌಕಾರ್ಯವಿತ್ತು. ಸಮೀಪದ ಪಂಚಾಯತ್‌ಗಳಾದ ಕುಂಬಾxಜೆ, ಎಣ್ಮಕಜೆ ಪಂಚಾಯತ್‌ಗಳಲ್ಲಿ ಆರೋಗ್ಯ ಕೇಂದ್ರಗಳಿದ್ದರೂ ರೋಗಿಗಳ ದಾಖಲಾತಿ ಚಿಕಿತ್ಸಾ ಸೌಕರ್ಯವಿಲ್ಲ. ಆದ್ದರಿಂದ ಈ ಭಾಗದ ರೋಗಿಗಳು ಬದಿಯಡ್ಕ ಆರೋಗ್ಯ ಕೇಂದ್ರವನ್ನು ಆಶ್ರಯಿಸುತ್ತಿದ್ದಾರೆ.

ಆದರೆ ಕಳೆದ ಎರಡು ವಾರಗಳಿಂದ ಇಲ್ಲಿ ದಾಖಲಿಸಿ ಚಿಕಿತ್ಸೆ ನೀಡುವ ವ್ಯವಸ್ಥೆ ಮೊಟಕುಗೊಂಡಿರುತ್ತದೆ. ವೈದ್ಯರುಗಳ ಹಾಗೂ ಇತರ ಸಿಬ್ಬಂದಿಗಳ ಕೊರತೆಯೇ ಈ ಸ್ಥಿತಿಗೆ ಕಾರಣವೆಂದು ಹೇಳಲಾಗುತ್ತದೆ. ಈ ಆಸ್ಪತ್ರೆಯಲ್ಲಿ 7 ಮಂದಿ ವೈದ್ಯರುಗಳ ಅಗತ್ಯವಿದ್ದು, 3 ತಿಂಗಳ ಹಿಂದೆ ಅವರನ್ನು ನೇಮಕ ಮಾಡಲಾಗಿತ್ತು. ಈ ಪೈಕಿ ಮೂವರು ವೈದ್ಯರುಗಳಿಗೆ ವಾಣಿನಗರ, ಪೆರ್ಲ, ಮುಳಿಯಾರು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲೂ ಕರ್ತವ್ಯ ನಿಭಾಯಿಸ ಬೇಕಾಗಿದೆ. ಇದರಿಂದಾಗಿ ಬದಿಯಡ್ಕದ ಆಸ್ಪತ್ರೆಯಲ್ಲಿ ಕೇವಲ ನಾಲ್ಕುಮಂದಿ ವೈದ್ಯರ ಸೇವೆ ಮಾತ್ರವೇ ಲಭ್ಯವಿದೆ. ಲ್ಯಾಬ್‌ ಟೆಕ್ನೀಶಿಯನ್‌ಗಳ ಸಹಿತ ಎಂಟು ಮಂದಿ ದಾದಿಯರ ಅಗತ್ಯವಿದ್ದು ಕೇವಲ 3 ದಾದಿಯರು ಮಾತ್ರ ಕರ್ತವ್ಯದಲ್ಲಿದ್ದಾರೆ. ಇತರ ಅಗತ್ಯಗಳಿಗಾಗಿ ದಿನಗೂಲಿ ನೌಕರರಾಗಿ 4 ಮಂದಿ ಸಹಾಯಕರಿದ್ದಾರೆ.

ಪೆರಡಾಲ ಕೊಲನಿಯ ಜನರೂ ಚಿಕಿತ್ಸೆಗಾಗಿ ಇಲ್ಲಿಗೆ ಬರುತ್ತಿದ್ದು ಸೂಕ್ತ ಚಿಕಿತ್ಸೆ ಲಭಿಸದಿದ್ದಲ್ಲಿ ದೂರದ ಆಸ್ಪತ್ರೆಗಳಿಗೆ ಹೋಗಿ ಚಿಕಿತ್ಸೆ ಪಡೆಯಲು ಆಸಹಾಯಕರಾದ ಬಡ ಜನರಿಗೆ ಈ ಆಸ್ಪತ್ರೆಯ ಆಲಿಖೀತ ನಿಯಮಗಳು ಸವಾಲಾಗಿವೆ.

ರೋಗಿಗಳ ಪರದಾಟ
ಅಸೌಖ್ಯ ಬಾಧಿಸಿ ಹಲವರು ಆಸ್ಪತ್ರೆಗೆ ಬಂದಾಗ ಇಲ್ಲಿನ ನಾಲ್ಕು ಮಂದಿ ವೈದ್ಯರು ಅಪರಾಹ್ನ 3 ಗಂಟೆ ತನಕ ತಪಾಸಣೆ ನಡೆಸಿ ಮರಳುತ್ತಾರೆ. ಸಂಜೆ 5 ಗಂಟೆಗೆ ದಾದಿಯರ ಸಹಿತ ಎಲ್ಲ ನೌಕರರೂ ಮರಳುತ್ತಿದ್ದು, ಅನಂತರ ಬರುವ ರೋಗಿಗಳಿಗೆ ಚಿಕಿತ್ಸೆ ಲಭಿಸುತ್ತಿಲ್ಲ. ಹಗಲು ಹೊತ್ತಿನಲ್ಲಿ ಬರುವ ರೋಗಿಗಳ ಪೈಕಿ ದಾಖಲಾಗಿ ಚಿಕಿತ್ಸೆ ಪಡೆಯಬೇಕಾದಲ್ಲಿ ಕಾಸರಗೋಡಿನ ಸರಕಾರಿ ಆಸ್ಪತ್ರೆಗೆ ಅಥವಾ ಇತರ ಖಾಸಗಿ ಆಸ್ಪತ್ರೆಗಳಿಗೆ ತೆರಳಬೇಕಾದ ಸ್ಥಿತಿ ನಿರ್ಮಾಣವಾಗಿದೆ. ಇದೇ ಸ್ಥಿತಿ ಮುಂದುವರಿದರೆ ಈ ಭಾಗದ ಬಡ ರೋಗಿಗಳು ತೀವ್ರ ಸಂಕಷ್ಟ ಅನುಭವಿಸಲಿದ್ದಾರೆ. ಈ ಬಗ್ಗೆ ಅಧಿಕಾರಿಗಳು ತುರ್ತು ಗಮನ ಹರಿಸಿ ಅಗತ್ಯವುಳ್ಳ ವೈದ್ಯರನ್ನು ಹಾಗೂ ಸಿಬಂದಿಯನ್ನು ನೇಮಕಗೊಳಿಸಲಿ ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಸಮಸ್ಯೆ ಪರಿಹರಿಸಿ
ಬದಿಯಡ್ಕ ಪಂಚಾಯತ್‌ನ ಜನರಿಗೆ ಆಶ್ರಯವಾಗಿ ಇದೊಂದೇ ಆಸ್ಪತ್ರೆಯಿರುವುದು. ಆದರೆ ಸೂಕ್ತ ಚಿಕಿತ್ಸೆ ನೀಡಿ ಜನರಿಗೆ ನೆಮ್ಮದಿ ತರುವಲ್ಲಿ ಇದು ಸೋಲುತ್ತಿರುವುದು ಬೇಸರದ ವಿಷಯ. ನೇಮಕಗೊಂಡ ವೈದ್ಯರು ಹಾಗೂ ದಾದಿಯಂದಿರು ಎರಡೇ ತಿಂಗಳಲ್ಲಿ ವರ್ಗವಾಗಿ ಹೋಗುವುದು ಕಂಡುಬರುತ್ತದೆ. ಈ ಎಲ್ಲ ಸಮಸ್ಯೆಗಳನ್ನು ಸಕಾಲದಲ್ಲಿ ಪರಿಹರಿಸಿ ಜನರಿಗೆ ಸರಿಯಾದ ಚಿಕಿತ್ಸೆ ನೀಡುವಂತಾಗಬೇಕು.
– ನರೇಂದ್ರ.ಬಿ,
ಅಧ್ಯಕ್ಷರು, ಟ್ರೇಡರ್ ವೆಲ್ಫೆರ್‌ ಸೊಸೈಟಿ.

-ಅಖೀಲೇಶ್‌ ನಗುಮುಗಂ

ಟಾಪ್ ನ್ಯೂಸ್

Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ

Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ

Happy New Year 2025: ಹೊಸ ಕ್ಯಾಲೆಂಡರ್‌ನೊಂದಿಗೆ ಹೊಸ ವರ್ಷದ ಆರಂಭ

Happy New Year 2025: ಹೊಸ ಕ್ಯಾಲೆಂಡರ್‌ನೊಂದಿಗೆ ಹೊಸ ವರ್ಷದ ಆರಂಭ

Namma Metro; Metro services till 2 am on December 31

Namma Metro; ಡಿಸೆಂಬರ್‌ 31ರಂದು ಮಧ್ಯರಾತ್ರಿ 2 ಗಂಟೆಯವರೆಗೆ ಮೆಟ್ರೋ ಸಂಚಾರ

Borewell Tragedy: ಹೇಗಾದರು ಮಾಡಿ ನನ್ನ 3ವರ್ಷದ ಮಗಳನ್ನು ರಕ್ಷಣೆ ಮಾಡಿ ಕೊಡಿ.. ತಾಯಿ ಅಳಲು

Borewell Tragedy: ಹೇಗಾದರು ಮಾಡಿ ನನ್ನ 3ವರ್ಷದ ಮಗಳನ್ನು ರಕ್ಷಣೆ ಮಾಡಿ ಕೊಡಿ.. ತಾಯಿ ಅಳಲು

Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್‌”

Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್‌”

ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು

ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು

Agarwal

Vijay Hazare Trophy; ಮಯಾಂಕ್‌ ಅಗರ್ವಾಲ್‌ ಭರ್ಜರಿ ಶತಕ; ಸುಲಭ ಜಯ ಸಾಧಿಸಿದ ಕರ್ನಾಟಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ

Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ

ಕೊಪ್ಪಳದಲ್ಲಿ ಕ್ಯಾನ್ಸರ್‌ ಖಾಯಿಲೆಗಿಲ್ಲ ಚಿಕಿತ್ಸೆ -114 ಜನರಲ್ಲಿ ಕ್ಯಾನ್ಸರ್‌ ಪತ್ತೆ!

ಬೆಳಗಾವಿ: ಎರಡೂ ಅಧಿವೇಶನಗಳಿಗೆ ಕಾಡಿದ ಶೋಕ

ಬೆಳಗಾವಿ: ಎರಡೂ ಅಧಿವೇಶನಗಳಿಗೆ ಕಾಡಿದ ಶೋಕ

Happy New Year 2025: ಹೊಸ ಕ್ಯಾಲೆಂಡರ್‌ನೊಂದಿಗೆ ಹೊಸ ವರ್ಷದ ಆರಂಭ

Happy New Year 2025: ಹೊಸ ಕ್ಯಾಲೆಂಡರ್‌ನೊಂದಿಗೆ ಹೊಸ ವರ್ಷದ ಆರಂಭ

Namma Metro; Metro services till 2 am on December 31

Namma Metro; ಡಿಸೆಂಬರ್‌ 31ರಂದು ಮಧ್ಯರಾತ್ರಿ 2 ಗಂಟೆಯವರೆಗೆ ಮೆಟ್ರೋ ಸಂಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.