ಬದಿಯಡ್ಕ ಹಾಲುತ್ಪಾದಕರ ಸಂಘ: ಮಿಲ್ಕ್ ಡೇ ಆಚರಣೆ
Team Udayavani, Jun 2, 2019, 12:11 PM IST
ಬದಿಯಡ್ಕ: ಜೂನ್ 1 ಮಿಲ್ಕ್ ಡೇ ಅಂಗವಾಗಿ ಬದಿಯಡ್ಕ ಹಾಲುತ್ಪಾದಕರ ಸಂಘದ ಆಶ್ರಯದಲ್ಲಿ ನಡೆದ ವಿಶೆಷ ಕಾರ್ಯಕ್ರಮವನ್ನು ಬದಿಯಡ್ಕ ಗ್ರಾ.ಪಂ. ಸದಸ್ಯರಾದ ಬಾಲಕೃಷ್ಣ ಶೆಟ್ಟಿ ಉದ್ಘಾಟಿಸಿ ಮಾತನಾಡಿ, ಹಸು ಸಾಕಣೆಯಿಂದ ಸ್ವಾವಲಂಬಿ ಬದುಕು ಸಾಧ್ಯ. ದನದ ಹಾಲು ಮತ್ತು ಹಾಲಿನ ಉತ್ಪನ್ನಗಳಿಗೆ ಮಾರುಕಟ್ಟೆಯಲ್ಲಿ ಹೆಚ್ಚಿನ ಬೇಡಿಕೆ ಇದೆ. ಆದುದರಿಂದ ಹೈನುಗಾರಿಕೆಯಲ್ಲಿ ಹೆಚ್ಚು ಜನರು ತೊಡಗಿಸಿಕೊಳ್ಳಬೇಕು ಎಂದು ಹೇಳಿದರು.
ಬದಿಯಡ್ಕ ಹಾಲುತ್ಪಾದಕರ ಸಂಘದ ಅಧ್ಯಕ್ಷರಾದ ಕೆ.ಎ.ಶೆಟ್ಟಿ ಅದ್ಯಕ್ಷತೆ ವಹಿಸಿ, ಜನರ ಉತ್ತಮ ರೀತಿಯ ಸಹಕಾರ ಬದಿಯಡ್ಕ ಹಾಲುತ್ಪಾದಕರ ಸಂಘದ ಬೆಳವಣಿಗೆಗೆ ಕಾರಣವಾಗಿದೆ. ಈ ಪ್ರದೇಶದ ಹಾಲುತ್ಪಾದರಕು ಸಕಾಲದಲ್ಲಿ ಸೊಸೈಟಿಗೆ ಹಾಲನ್ನು ತಂದೊಪ್ಪಿಸುವಲ್ಲಿ ತೋರುವ ಆಸಕ್ತಿ ಮತ್ತು ಹೆಚ್ಚುತ್ತಿರುವ ಬೇಡಿಕೆ ಉತ್ತಮವಾಗಿದೆ. ಆಡಳಿತ ಮಂಡಳಿ ಸದಸ್ಯರಾದ ಸದಾನಂದ ರೈ ಶುಭಾಶಂಸನೆಗೈದರು.
ಉಮಾನಾಥ ಕಾಮತ್ ಉಪಸ್ಥಿತರಿದ್ದರು. ಸುರೇಖ ಸ್ವಾಗತಿಸಿ ಅಶೋಕ ರೈ ವಂದಿಸಿದರು. ಕಾರ್ಯಕ್ರಮದಲ್ಲಿ ವಿಶೇಷವಾಗಿ ಬೆಳಗ್ಗೆ ಡೈರಿಗೆ ಹಾಲು ತಂದವರಿಗೆ ಹಾಲಿನಿಂದ ತಯಾರಿಸಿದ ಸಿಹಿ ತಿಂಡಿಗಳನ್ನು ವಿತರಿಸಿ ಮಿಲ್ಕ್ ಡೇಯ ಶುಭ ಕೋರಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ
ಆಪರೇಷನ್ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Percentage War: ಮತ್ತೆ 60 ಪರ್ಸೆಂಟ್ ಕಮಿಷನ್ ಯುದ್ಧ ; ಆರೋಪ – ಪ್ರತ್ಯಾರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.