ಬಿಜೆಪಿ ಪ್ರತಿಭಟನೆ
Team Udayavani, May 28, 2018, 10:07 AM IST
ಬೆಂಗಳೂರು: ಓಟರ್ ಐಡಿ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮುನಿರತ್ನ ಅವರನ್ನು ಬಂಧಿಸುವಂತೆ ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಭಾನುವಾರ ಯಶವಂತಪುರ ಆರ್‌ಎಂಸಿ ಯಾರ್ಡ್‌ನ ಎಸಿಪಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.
ಜಾಲಹಳ್ಳಿಯ ಎಸ್‌ಎಲ್‌ವಿ ಅಪಾರ್ಟ್‌ಮೆಂಟ್‌ನಲ್ಲಿ 9564 ಮತದಾರ ಗುರುತಿನ ಚೀಟಿಗಳನ್ನು ಅಕ್ರಮವಾಗಿ ಸಂಗ್ರಹಿಸಿಟ್ಟ ಘಟನೆ ಮೇ 8ರಂದು ಬೆಳಕಿಗೆ ಬಂದಿತ್ತು. ಈ ಸಂಬಂಧ ಜಾಲಹಳ್ಳಿ ಠಾಣೆಯಲ್ಲಿ ಪ್ರಕರಣದ ಜತೆಗೆ ಎರಡು ಎಫ್ಐಆರ್ ಕೂಡ ದಾಖಲಾಗಿತ್ತು. ಈ ಕುರಿತಂತೆ ಪ್ರತ್ಯೇಕ ತನಿಖೆ ನಡೆಸುವಂತೆ ಅಧೀನ ನ್ಯಾಯಾಲಯ ತೀರ್ಪು ನೀಢಿದೆ. ಆದರೂ, ಪ್ರಕರಣದ ಆರೋಪಿಗಳ ಪಟ್ಟಿಯಲ್ಲಿ ಇರುವ ಕಾಂಗ್ರೆಸ್ ಅಭ್ಯರ್ಥಿ ಮುನಿರತ್ನ ಅವರನ್ನು ಪೊಲೀಸರು ಬಂಧಿಸುತ್ತಿಲ್ಲ ಎಂದು ಬಿಜೆಪಿ ಮುಖಂಡರು ದೂರಿದರು.
ನಗರದ 7ನೇ ಎಸಿಎಂಎಂ ನ್ಯಾಯಾಲಯ ಪ್ರಕರಣದ ಪ್ರತ್ಯೇಕ ತನಿಖೆಗೆ ಆದೇಶಿಸಿದೆ. ನ್ಯಾಯಾಲಯದ ನಿರ್ದೇಶನದಂತೆ ಮುನಿರತ್ನ ವಿರುದ್ಧ ಹೆಚ್ಚುವರಿ ಎಫ್ಐಆರ್ ದಾಖಲಿಸಿ, ಕೂಡಲೇ ಬಂದಿಸಬೇಕು. ಪೊಲೀಸ್ ಅಧಿಕಾರಿಗಳು ಯಾವುದೇ ಕ್ರಮ ತೆಗೆದುಕೊಳ್ಳದಿದ್ದರೆ ಉಗ್ರ ಹೋರಾಟ ಮಾಡಲಿದ್ದೇವೆ ಎಂದು ಬಿಜೆಪಿ ವಕ್ತಾರ ಅಶ್ವತ್ಥನಾರಾಯಣ ಎಚ್ಚರಿಕೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.