ಮಂಜೇಶ್ವರದ ಅಭಿವೃದ್ಧಿಗಾಗಿ ಬಿಜೆಪಿಗೆ ಮತ : ನಳಿನ್ ಕುಮಾರ್ ಕಟೀಲು
1957ರಿಂದ ಮಂಜೇಶ್ವರದಲ್ಲಿ ಕಮ್ಯೂನಿಸ್ಟ್ ಮತ್ತು ಕಾಂಗ್ರೆಸ್, ಮುಸ್ಲಿಂಲೀಗ್ ಆಡಳಿತ ನಡೆಸುತ್ತಾ ಬಂದಿದೆ.
Team Udayavani, Mar 31, 2021, 10:58 AM IST
ಮಂಜೇಶ್ವರ: ಮಂಜೇಶ್ವರ ಮತ್ತು ಮಂಗಳೂರು ಒಂದೇ ಸಮಯದಲ್ಲಿ ರೂಪಿತವಾದ ಪ್ರದೇಶಗಳು. ಪ್ರಸ್ತುತ ಮಂಜೇಶ್ವರಕ್ಕೂ ಮಂಗಳೂರಿಗೂ ಎಲ್ಲ ಕ್ಷೇತ್ರದಲ್ಲೂ ಅಜಗಜಾಂತರ ವ್ಯತ್ಯಾಸವಿದೆ ಎಂದು ಬಿಜೆಪಿ ಕರ್ನಾಟಕ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲ್ ಅವರು ಜೋಡುಕಲ್ಲಿನಲ್ಲಿರುವ ಎನ್‌ಡಿಎ ಚುನಾವಣಾ ಕಾರ್ಯಾಲಯದಲ್ಲಿ ಭಾರತೀಯ ಜನತಾ ಯುವಮೋರ್ಚಾದ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದರು.
ಮಂಗಳೂರಿನಲ್ಲಿರುವ ಹೈ ಸ್ಪೆಷಾಲಿಟಿ ಆಸ್ಪತ್ರೆಗಳಾಗಲಿ, ಮಕ್ಕಳ ವಿದ್ಯಾಭ್ಯಾಸಕ್ಕೆ ಉನ್ನತ ಮಟ್ಟದ ಶಾಲಾ ಕಾಲೇಜುಗಳಾಗಲಿ, ಉದ್ಯೋಗ ನೀಡುವ ಕಂಪೆನಿಗಳಾಗಲಿ ಹಾಗೂ ಮೂಲಭೂತ ಸೌಕರ್ಯಗಳಾಗಲಿ ಮಂಜೇಶ್ವರದಲ್ಲಿಲ್ಲ. 1957ರಿಂದ ಮಂಜೇಶ್ವರದಲ್ಲಿ ಕಮ್ಯೂನಿಸ್ಟ್ ಮತ್ತು ಕಾಂಗ್ರೆಸ್, ಮುಸ್ಲಿಂಲೀಗ್ ಆಡಳಿತ ನಡೆಸುತ್ತಾ ಬಂದಿದೆ. ಪ್ರಸ್ತುತ ಜನರು ಚಿಂತಿಸತೊಡಗಿದ್ದಾರೆ. ಅಭಿವೃದ್ಧಿ ಕಾಣದ ಮಂಜೇಶ್ವರವು ಬದಲಾಗಿ ಅಭಿವೃದ್ಧಿ ಹೊಂದಿದ ಮಂಜೇಶ್ವರದ ಬಗ್ಗೆ ಕನಸು ಕಾಣುತ್ತಿದ್ದಾರೆ ಎಂದರು.
ಆದ್ದರಿಂದ ಅಭಿವೃದ್ಧಿಗೋಸ್ಕರ ಬಿಜೆಪಿಗೆ ಮತ ನೀಡಿ, ಎನ್‌ಡಿಎ ಅಭ್ಯರ್ಥಿ ಕೆ.ಸುರೇಂದ್ರನ್ ಅವರನ್ನು ಗೆಲ್ಲಿಸಿ ಎಂದು ನಳಿನ್‌ಕುಮಾರ್ ಕಟೀಲು ಕರೆ ನೀಡಿದರು.
ಸಮಾರಂಭದ ಅಧ್ಯಕ್ಷತೆಯನ್ನು ಯುವಮೋರ್ಚಾ ಮಂಡಲ ಅಧ್ಯಕ್ಷ ಚಂದ್ರಕಾಂತ ಶೆಟ್ಟಿ ವಹಿಸಿದ್ದರು. ಯುವಮೋರ್ಚಾ ರಾಜ್ಯಾಧ್ಯಕ್ಷ ಪ್ರಫುಲ್ಲ ಕೃಷ್ಣ , ಬಿಜೆಪಿ ರಾಜ್ಯ ಸಮಿತಿ ಸದಸ್ಯ ಸುರೇಶ್‌ಕುಮಾರ್ ಶೆಟ್ಟಿ ಪೂಕಟ್ಟೆ, ಮಂಜೇಶ್ವರ ಮಂಡಲ ಅಧ್ಯಕ್ಷ ಮಣಿಕಂಠ ರೈ ಪಟ್ಲ, ಮಂಡಲ ಚುನಾವಣಾ ಉಸ್ತುವಾರಿ ಸಂತೋಷ್‌ಕುಮಾರ್ ರೈ ಬೋಳಿಯಾರು ಮುಂತಾದವರು ಉಪಸ್ಥಿತರಿದ್ದರು. ಪ್ರದೀಪ್ ಬಂಬ್ರಾಣ ಸ್ವಾಗತಿಸಿ, ಧನರಾಜ್ ಸೋಂಕಾಲ್ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bantwala: ಅಡಿಕೆ ಮರದಿಂದ ಬಿದ್ದು ವ್ಯಕ್ತಿ ಮೃತ್ಯು
Kanguva Movie: ಪ್ರೇಕ್ಷಕರ ಮನದಲ್ಲಿ ಕಂಗೊಳಿಸಿದ ʼಕಂಗುವʼ..ಸಿನಿಮಾ ನೋಡಿದವರು ಹೇಳಿದ್ದೇನು?
IPL 2025: ಸಾತಂತ್ರ್ಯ ನೀಡುವ ತಂಡವೇ ನನ್ನ ಆದ್ಯತೆ: ಕೆ.ಎಲ್.ರಾಹುಲ್
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.