“ಸಂಸ್ಕೃತಿ, ಪರಂಪರೆಗಳನ್ನು ಉಳಿಸಿಕೊಳ್ಳಲು ಬಂಟರು ಒಂದಾಗಬೇಕು’


Team Udayavani, Apr 11, 2019, 6:30 AM IST

samskruti-parampare

ಕಾಸರಗೋಡು: ಬಂಟರ ಸಂಘದ ಮಧೂರು ಪಂಚಾಯತ್‌ ಸಮಾವೇಶ ಸಿರಿಬಾಗಿಲು ಪುಳ್ಕೂರು ಶ್ರೀ ಮಹಾದೇವ ದೇವಸ್ಥಾನದ ವಠಾರದಲ್ಲಿ ಕುತ್ತಾರುಗುತ್ತು ರಾಮಕೃಷ್ಣ ಆಳ್ವ ಅವರ ಅಧ್ಯಕ್ಷತೆಯಲ್ಲಿ ಜರಗಿತು.

ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಕಾಸರಗೋಡು ಜಿಲ್ಲಾ ಬಂಟರ ಸಂಘದ ಅಧ್ಯಕ್ಷ ನ್ಯಾಯವಾದಿ ಸದಾನಂದ ರೈ ಅವರು ಬಂಟರು ಸಂಘದ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುವ ಮೂಲಕ ನಮ್ಮ ಸಮಾಜದ ಸಂಸ್ಕೃತಿ, ಪರಂಪರೆಗಳನ್ನು ಸಂರಕ್ಷಿಸಲು ಮುಂದಾಗಬೇಕು.

ದಕ್ಷಿಣ ಕನ್ನಡ ಜಿಲ್ಲೆಯಿಂದ ಬೇರ್ಪಟ್ಟ ಬಳಿಕ ಬಂಟ ಸಮಾಜವು ಕಾಸರಗೋಡಿನಲ್ಲಿ ಅನೇಕ ಕಷ್ಟ ನಷ್ಟಗಳು ಮತ್ತು ಸಮಸ್ಯೆಗಳನ್ನು ಎದುರಿಸಬೇಕಾಯಿತು. ಬಂಟರ ಜನ ಸಂಖ್ಯೆಯಲ್ಲಿ ಕೂಡಾ ಗಣನೀಯವಾಗಿ ಕಡಿತವುಂಟಾಗಿದೆ. ಹೆಚ್ಚಿನವರು ಕಾಸರಗೋಡಿನಿಂದ ವಲಸೆ ಹೋಗಿದ್ದಾರೆ. ಈ ಹಿನ್ನೆಲೆಯಲ್ಲಿ ಬಂಟ ಸಮಾಜ ಬಾಂಧವರು ಸಂಘಟಿತರಾಗಿ ನಮ್ಮ ಹಕ್ಕುಗಳಿಗೆ ಹೋರಾಟ ಮಾಡಬೇಕಾಗಿದೆ.

ನಮ್ಮ ಸಂಸ್ಕೃತಿ, ಆಚಾರ, ವಿಚಾರ ಅನುಷ್ಠಾನಗಳನ್ನು ಉಳಿಸಿಕೊಳ್ಳುವಲ್ಲಿ ಬಂಟರ ಸಂಘಗಳ ಮೂಲಕ ನಾವೆಲ್ಲರೂ ಒಂದು ಗೂಡಿ ಕಾರ್ಯವೆಸಗಬೇಕಾಗಿದೆ ಎಂದರು. ಬಂಟರ ಸಂಘದ ಮಾಜಿ ಅಧ್ಯಕ್ಷರಾದ ಜಿ.ಕೆ.ಶೆಟ್ಟಿ ಬೊಳ್ನಾಡುಗುತ್ತು ಮಾತನಾಡಿ ನಮ್ಮಲ್ಲಿ ಒಗ್ಗಟ್ಟಿದ್ದರೆ ಮಾತ್ರವೇ ಸಮಸ್ಯೆಗಳನ್ನು ಎದುರಿಸಲು ಸಾಧ್ಯವೆಂದರು.

ಕಾಸರಗೋಡು ವಲಯ ಬಂಟರ ಸಂಘದ ಅಧ್ಯಕ್ಷ ಸುಬ್ಬಣ್ಣ ಆಳ್ವ ಕುಚ್ಚಿಕ್ಕಾಡು ಪ್ರಾಸ್ತಾವಿಕ ಮಾತನಾಡಿ ಸಮಾವೇಶದ ಔಚಿತ್ಯ ಹಾಗು ಮಧೂರು ಪಂಚಾಯತ್‌ ಬಂಟರ ಸಂಘದ ಘಟಕವನ್ನು ಪುನಶ್ಚೇತನಗೊಳಿಸಲು ಕೈಗೊಳ್ಳಬೇಕಾದ ಚಟುವಟಿಕೆಗಳ ಕುರಿತು ಮಾಹಿತಿ ನೀಡಿದರು.

ಪಂಚಾಯತ್‌ ಘಟಕದ ಕಾರ್ಯದರ್ಶಿ ಮೋಹನ್‌ ಕುಮಾರ್‌ ಶೆಟ್ಟಿ ಸ್ವಾಗತಿಸಿದರು. ಮಹಾಬಲ ರೈ ಕಣ್ಣೂರುಗುತ್ತು, ರವೀಂದ್ರ ರೈ ಶಿರಿಬಾಗಿಲು, ಅಶೋಕ ರೈ ಸೂರ್ಲು, ರಾಮ ಶೆಟ್ಟಿ ಮಾಸ್ಟರ್‌, ರಮೇಶ್‌ ಶೆಟ್ಟಿ ಕಾಳ್ಯಂಗಾಡು, ಪುರಂದರ ಶೆಟ್ಟಿ ಮಾಯಿಪ್ಪಾಡಿ, ನಾರಾಯಣ ರೈ ಕುಂದಿಲ, ಪುಳ್ಕೂರು ಶ್ರೀ ಮಹಾದೇವ ಕ್ಷೇತ್ರದ ಅಧ್ಯಕ್ಷ ಶೀನ ಶೆಟ್ಟಿ ಕಜೆ, ರೋಹಿತಾಕ್ಷಿ ಬಿ.ರೈ ಕೂಡ್ಲು, ಶುಭಾ ಶೆಟ್ಟಿ ಮಧೂರು ಮೊದಲಾದವರು ಮಾತನಾಡಿದರು.

ಮಧೂರು ಪಂಚಾಯತ್‌ ಬಂಟರ ಸಂಘದ ಸಂಚಾಲಕ ಗಣೇಶ್‌ ರೈ ನಾಯಕ್ಕೋಡು ಕಾರ್ಯಕ್ರಮ ನಿರೂಪಿಸಿ, ಕೊನೆಯಲ್ಲಿ ವಂದಿಸಿದರು.

ಟಾಪ್ ನ್ಯೂಸ್

Laxmi-Heebalakar1

ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್‌ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ

Kalaburagi-Acci

Kalaburagi: ಟಿಟಿ ಟಯರ್‌ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!

Jagadambika-Pal-(JPC)

Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

Munirtahana–Egg

Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

byndoor

Siddapura: ಪಾದಚಾರಿಗೆ ಪಿಕಪ್‌ ವಾಹನ ಢಿಕ್ಕಿ; ಗಂಭೀರ

Laxmi-Heebalakar1

ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್‌ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ

6

Bantwal: ತುಂಬೆ ಜಂಕ್ಷನ್‌; ಸರಣಿ ಅಪಘಾತ

Untitled-1

Kasaragod ಅಪರಾಧ ಸುದ್ದಿಗಳು: ವಿದ್ಯಾರ್ಥಿನಿಯರಿಗೆ ಕಿರುಕುಳ; ಕೇಸು ದಾಖಲು

Brahmavar

Brahmavar: ಆರೂರು; ಬೆಂಕಿ ತಗಲಿ ಗಾಯಗೊಂಡಿದ್ದ ಮಹಿಳೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.