ಗೋಡಂಬಿ ಕೃಷಿ ವಿಪುಲಗೊಳಿಸಲು ಕ್ರಮ: ಸಚಿವೆ ಜೆ. ಮೆರ್ಸಿಕುಟ್ಟಯಮ್ಮ
Team Udayavani, Apr 7, 2017, 2:16 PM IST
ಕಾಸರಗೋಡು: ಜಿಲ್ಲೆಯಲ್ಲಿ ಗೋಡಂಬಿ ಕೃಷಿಯನ್ನು ವಿಪುಲಗೊಳಿಸಲು ಮತ್ತು ಗೋಡಂಬಿ ಕಾರ್ಮಿಕರ ಉದ್ಯೋಗ ಸಂರಕ್ಷಣೆಗಾಗಿ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮೀನುಗಾರಿಕೆ ಮತ್ತು ಗೋಡಂಬಿ ಉದ್ದಿಮೆ ಸಚಿವೆ ಜೆ. ಮೆರ್ಸಿಕುಟ್ಟಯಮ್ಮ ಅವರು ಹೇಳಿದರು.
ಜಿಲ್ಲೆಯ ತೋಟಗಾರಿಕಾ ನಿಗಮದ ತೋಟಗಳಿಂದ ಗೋಡಂಬಿ ಸಂಗ್ರಹಿಸುವ ಕುರಿತಾಗಿ ಕಾಸರಗೋಡು ಸರಕಾರಿ ಅತಿಥಿ ಮಂದಿರದಲ್ಲಿ ನಡೆದ ಅವಲೋಕನ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ತೋಟಗಾರಿಕಾ ನಿಗಮದ ಗೋಡಂಬಿ ಕೃಷಿ ರಂಗದಲ್ಲಿ ಆಧುನಿಕ ತಾಂತ್ರಿಕತೆಯನ್ನು ಬಳಸಿ ಗೋಡಂಬಿ ಸಸಿಗಳನ್ನು ಅಭಿವೃದ್ಧಿಪಡಿಸಬೇಕಾದ ಅನಿವಾರ್ಯತೆ ಇದೆ. ತೋಟಗಾರಿಕಾ ಎಸ್ಟೇಟ್‌ಗಳಲ್ಲಿ ಅಕ್ರಮವಾಗಿ ವಾಹನ ಸಾಗುವುದು ಹಾಗೂ ಗೇರುಬೀಜ ಕಳವು ಮಾಡಿ ಸಾಗಿಸುವುದನ್ನು ತಡೆಯಲು ಪೊಲೀಸರನ್ನು ನೇಮಿಸಲಾಗುವುದು. ತೋಟಗಳ ನಿರ್ವಹಣೆಗೆ ಕೋ-ಆರ್ಡಿನೇಶನ್ ಸಮಿತಿ ರಚಿಸಲಾಗುವುದು ಎಂದು ಸಚಿವರು ಹೇಳಿದರು.
ಸಭೆಯಲ್ಲಿ ಗೋಡಂಬಿ ಅಭಿವೃದ್ಧಿ ನಿಗಮದ ಚೇರ್‌ಮನ್ ಎಸ್. ಜಯಮೋಹನ್, ಕಾಫೆಕ್ಸ್ ಚೇರ್‌ಮನ್ ಎಸ್.ಸುಧೇಯನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಜಿ. ಸೈಮನ್, ಕೆಎಸ್‌ಸಿಡಿಸಿ ಮ್ಯಾನೇಜಿಂಗ್ ಡೈರೆಕ್ಟರ್ ಟಿ.ಎಫ್. ಸೇವ್ಯರ್, ಮಾಜಿ ಶಾಸಕರಾದ ಪಿ. ರಾಘವನ್, ಕೆ.ಪಿ. ಸತೀಶ್ಚಂದ್ರನ್, ನ್ಯಾಯವಾದಿ ಸಿ.ಎಚ್. ಕುಂಞಂಬು, ವಿವಿಧ ಕಾರ್ಮಿಕ ಸಂಘಟನೆಗಳ ಪ್ರತಿನಿಧಿಗಳು, ಗೋಡಂಬಿ ಕಾರ್ಮಿಕರು, ಸಿಬಂದಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ
Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.