ಚರ್ಚ್‌ಗಳಲ್ಲಿ ಗರಿಗಳ ರವಿವಾರ ಆಚರಣೆ
Team Udayavani, Apr 10, 2017, 5:43 PM IST
ಕಾಸರಗೋಡು: ಗರಿಗಳ ರವಿವಾರ ಆಚರಣೆಯೊಂದಿಗೆ ಕ್ರೈಸ್ತರ ಪವಿತ್ರ ಸಪ್ತಾಹ ರವಿವಾರ ಆರಂಭ ಗೊಂಡಿತು. ಯೇಸುಕ್ರಿಸ್ತರು ಜೆರುಸಲೆಂಗೆ ಪ್ರವೇಶಿಸುವ ಸಂದರ್ಭದಲ್ಲಿ ಭಕ್ತರು “ಒಲಿವ್’ ಮರದ ಗರಿಗಳನ್ನು ಹಿಡಿದು ವೈಭವದಿಂದ ಸ್ವಾಗತಿಸಿದ ಸಂಕೇತವಾಗಿ ತೆಂಗಿನ ಗರಿಗಳನ್ನು ಹಿಡಿದು ಕ್ರೈಸ್ತರು ರವಿವಾರದ ಬಲಿಪೂಜೆಯಲ್ಲಿ ಪಾಲ್ಗೊಂಡರು. ಮಂಗಳೂರು ಧರ್ಮಪ್ರಾಂತಕ್ಕೆ ಒಳಪಟ್ಟ ಕಾಸರಗೋಡು ವಲಯದ ಎಲ್ಲ ಚರ್ಚ್ ಹಾಗು ಜಿಲ್ಲೆಯ ಇತರ ಚರ್ಚ್‌ಗಳಲ್ಲಿ ಗರಿಗಳ ರವಿವಾರ ವಿಶೇಷ ಪ್ರಾರ್ಥನೆಯೊಂದಿಗೆ ನಡೆಯಿತು.
ಕಯ್ನಾರು ಕ್ರಿಸ್ತರಾಜ ದೇವಾಲಯದಲ್ಲಿ ನಡೆದ ಆಶೀರ್ವಚನವನ್ನು ವಂ| ವಿಕ್ಟರ್ ಡಿ’ಸೋಜಾ ನೆರವೇರಿಸಿ ದರು. ಬೇಳ, ಕೊಲ್ಲಂಗಾನ, ಕಾಸರಗೋಡು, ಕುಂಬಳೆ, ನಾರಂಪಾಡಿ, ಉಕ್ಕಿನಡ್ಕ, ಮಣಿಯಂಪಾರೆ, ಮಂಜೇಶ್ವರ, ತಲಪಾಡಿ, ವರ್ಕಾಡಿ, ಪಾವೂರು, ಮೀಯಪದವು ಚರ್ಚ್ ಗಳಲ್ಲಿ ಗರಿಗಳ ರವಿವಾರವನ್ನು ಆಚರಿಸಲಾಯಿತು.
ಯೇಸುಕ್ರಿಸ್ತರು ಶಿಲುಬೆಯಲ್ಲಿ ಮರಣಿಸಿದ ಅಥವಾ ಶುಭ ಶುಕ್ರವಾರದ ಪೂರ್ವ ರವಿವಾರವನ್ನು ಗರಿಗಳ ಭಾನುವಾರವಾಗಿ ಕ್ರೈಸ್ತರು ಆಚರಿಸುತ್ತಾರೆ.
ಗರಿಗಳನ್ನು ಹಿಡಿದು ಮೆರವಣಿಗೆ
ಪೂಜೆಗೆ ಮೊದಲು ತೆಂಗಿನ ಗರಿಗಳನ್ನು ಚರ್ಚ್ ಆವರಣದಲ್ಲಿ ಆಶೀರ್ವಚಿಸಿ ಬಳಿಕ ಅವುಗಳನ್ನು ಹಿಡಿದು ಮೆರವಣಿಗೆಯಲ್ಲಿ ಚರ್ಚ್‌ನ್ನು ಪ್ರವೇಶಿಸಿದರು. ಗುರು ವಾರ ಯೇಸುಕ್ರಿಸ್ತರ ಕೊನೆಯ ಭೋಜನದ ದಿನ. ಶುಕ್ರ ವಾರ ಯೇಸುಕ್ರಿಸ್ತರನ್ನು ಶಿಲುಬೆಗೇರಿಸಿದ ದಿನ. ಶನಿವಾರ ರಾತ್ರಿ ಜಾಗರಣೆ ಮತ್ತು ರವಿವಾರ ಯೇಸುಕ್ರಿಸ್ತರ ಪುನರುತ್ಥಾನದ ಹಬ್ಬವನ್ನು ಆಚರಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್: ಫೋಟೋ ಸಾಕ್ಷ್ಯ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ
Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್
Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.