ಸಿ-ವಿಜಿಲ್‌ ಆ್ಯಪ್‌ ಬಳಸಲು ಸಿಇಒ ಲಕ್ಷ್ಮೀಪ್ರಿಯಾ ಸಲಹೆ

Team Udayavani, Apr 12, 2019, 6:30 AM IST

c-vizil

ಮಡಿಕೇರಿ: ಸಿ-ವಿಜಿಲ್‌ ಮೊ ಬೈಲ್‌ ಆ್ಯಪ್‌ ಸದ್ಬಳಕೆ ಮಾಡಿಕೊಂಡು ಚುನಾವಣಾ ಅಕ್ರಮಗಳಿಗೆ ಕಡಿವಾಣ ಹಾಕಲು ಸಾರ್ವಜನಿಕರು ಸಹಕರಿಸುವಂತೆ ಸ್ವೀಪ್‌ ಸಮಿತಿ ಅಧ್ಯಕ್ಷರಾದ ಕೆ.ಲಕ್ಷಿ¾ಪ್ರಿಯಾ ಅವರು ಕೋರಿದ್ದಾರೆ.

ಚುನಾವಣೆ ಸಂದರ್ಭದಲ್ಲಿ ಹಣ, ಮದ್ಯ ಮತ್ತಿತರ ವಸ್ತುಗಳನ್ನು ಹಂಚಿ ಮತದಾರರಿಗೆ ಆಮಿಷ ಒಡ್ಡುವ ಪ್ರಕರಣಗಳನ್ನು ನಿಯಂತ್ರಿಸಲು ಚುನಾ ವಣಾ ಆಯೋಗ ಸಾರ್ವಜನಿಕ ಸ್ನೇಹಿ ಆ್ಯಪ್‌ ರೂಪಿಸಿದ್ದು, ಇದನ್ನು ಸದ್ಬಳಕೆ ಮಾಡಿಕೊಳ್ಳುವಂತಾಗಬೇಕು ಎಂದು ಅವರು ಹೇಳಿದರು.

ಸಿ-ವಿಜಿಲ್‌ ಆ್ಯಪ್‌ನ ಮೂಲಕ ಚುನಾವಣಾ ಅಕ್ರಮಗಳ ಬಗ್ಗೆ ದೂರು ನೀಡಿದರೆ ಅಂಥವರ ಹೆಸರನ್ನು ಗೌಪ್ಯವಾಗಿ ಇಡಲಾಗುವುದು. ಅಕ್ರಮಗಳಿಗೆ ಸಂಬಂಧಿತ ಛಾಯಾಚಿತ್ರ, ವೀಡಿಯೋ ಮತ್ತಿತರ ವಿವರಗಳನ್ನು ಆ್ಯಪ್‌ ಮೂಲಕ ಕಳುಹಿಸಿದ 15 ನಿಮಿಷದಲ್ಲಿ ಕ್ಷಿಪ್ರ ತನಿಖಾ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, 100 ನಿಮಿಷಗಳ ಒಳಗೆ ಮಾಹಿತಿ ನೀಡಲಾಗುತ್ತದೆ ಎಂದರು.

ಇನ್ನಷ್ಟು ಮಾಹಿತಿ:-ಭಾರತ ಚುನಾವಣಾ ಆಯೋಗವು ಈ ಬಾರಿಯು ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಮಾದರಿ ನೀತಿ ಸಂಹಿತೆ ಹಾಗೂ ಅಭ್ಯರ್ಥಿಗಳ ಚುನಾವಣಾ ವೆಚ್ಚ ಕುರಿತು ನಿಗಾವಹಿಸಲು ಸಿ-ವಿಜಿಲ್‌ ಎಂಬ ಮೊಬೈಲ್‌ ಆ್ಯಪ್‌ನ್ನು ಪರಿಚಯಿಸಿದೆ. ನಾಗರಿಕರು ಸಿ-ವಿಜಿಲ್‌ ಆ್ಯಪ್‌ ಮೂಲಕ ದೂರು ದಾಖಲಿಸಿದ್ದಲ್ಲಿ ಸದರಿ ದೂರನ್ನು 100 ನಿಮಿಷದೊಳಗೆ ಇತ್ಯರ್ಥಗೊಳಿಸಲಾಗುವುದು.

ಕಳುಹಿಸುವ ಫೋಟೋ ಅಥವಾ ವೀಡಿಯೋದಲ್ಲಿ ಚಿತ್ರೀಕರಿಸಿದ ಸ್ಥಳದ ಮಾಹಿತಿ ಜಿಪಿಆರ್‌ಎಸ್‌ ಮೂಲಕ ಚುನಾವಣಾ ಆಯೋಗಕ್ಕೆ ತಿಳಿಯುತ್ತದೆ. ದೂರಿನ ಸ್ಥಳ ಮಾಹಿತಿಯನ್ನು ಆಧರಿಸಿ ಆ ಸ್ಥಳಕ್ಕೆ ಸಮೀಪವಿರುವ ನೀತಿ ಸಂಹಿತೆ ನಿಗಾ ತಂಡದ ಅಧಿಕಾರಿಗೆ ದೂರು ರವಾನೆಯಾಗುತ್ತದೆ. ದೂರು ಬಂದ 5 ನಿಮಿಷದ ಅವಧಿಯೊಳಗೆ ಜಿಲ್ಲಾ ಕಂಟ್ರೋಲ್‌ ರೂಂ ಅಧಿಕಾರಿಗಳ ತಂಡಕ್ಕೆ ದೂರು ವರ್ಗಾಯಿಸುತ್ತಾರೆ.

ದೂರು ಕೈಗೆತ್ತಿಕೊಂಡ ಅಧಿಕಾರಿಗಳ ತಂಡ 100 ನಿಮಿಷಗಳ ಕಾಲಾವಧಿಯೊಳಗೆ ಪರಿಶೀಲನೆ ನಡೆಸಿ ವರದಿ ಸಲ್ಲಿಸುತ್ತದೆ. ದೂರು ದಾಖಲಾದ 100 ನಿಮಿಷದೊಳಗೆ ದೂರುದಾರ ನಾಗರಿಕನಿಗೆ ದೂರಿನ ತನಿಖೆಯ ಮಾಹಿತಿಯ ಸ್ಥಿತಿ ಸಿ-ವಿಜಿಲ್‌ ಆ್ಯಪ್‌ ಮೂಲಕ ರವಾನೆಯಾಗುತ್ತದೆ.

ಕೇಂದ್ರ ಚುನಾವಣಾ ಆಯೋಗ ಕಣ್ಣು
ಈ ಎಲ್ಲ ಆನ್‌ಲೈನ್‌ ಬೆಳವಣಿಗೆಗಳ ಮೇಲೆ ಕೇಂದ್ರ ಚುನಾವಣಾ ಆಯೋಗ ಕಣ್ಣಿಟ್ಟಿರುತ್ತದೆ. ಮತದಾರರನ್ನು ಸೆಳೆ ಯಲು ಹಣ, ಮದ್ಯ ಹಂಚುವುದು, ಉಡುಗೊರೆ ನೀಡುವುದು, ಧಾರ್ಮಿಕ ಸ್ಥಳ, ಸಮುದಾಯ ಭವನಗಳಲ್ಲಿ ಮತ ಯಾಚಿಸುವುದು, ಧ್ವನಿ ವರ್ಧಕಗಳನ್ನು ಅನುಮತಿ ಇಲ್ಲದ ಸಮಯದಲ್ಲಿ ಬಳಸುವುದು ಕಂಡುಬಂದಲ್ಲಿ ಹಾಗೂ ಇತರೆ ಚಟುವಟಿಕೆಗಳ ಬಗ್ಗೆ ಪ್ರತಿಯೊಬ್ಬರೂ ಸಿ-ವಿಜಿಲ್‌ ಆ್ಯಪ್‌ ಮೂಲಕ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಬಹುದು.

ದೂರು ನೀಡುವ ನಾಗರಿಕರು ತಮ್ಮ ಮೊಬೈಲ್‌ ನಂ. ಮತ್ತು ಹೆಸರು ನೊಂದಾ ಯಿಸಬೇಕು ಅಥವಾ ಅನಾಮಧೇಯರಾಗಿ ದೂರು ನೀಡಲು ಅವಕಾಶ ಕಲ್ಪಿಸಲಾಗಿದೆ.

ನೋಂದಾಯಿತ ದೂರುದಾರರಿಗೆ ಮಾತ್ರ ಕ್ರಮ ಕೈಗೊಂಡಿರುವ ಬಗ್ಗೆ ಮಾಹಿತಿ ಲಭಿಸಲಿದೆ.

ಎಲ್ಲ ನಾಗರಿಕರು ಸಿ-ವಿಜಿಲ್‌ ಆ್ಯಪ್‌ನ್ನು ಡೌನ್‌ಲೋಡ್‌ ಮಾಡಿಕೊಂಡು ಮಾದರಿ ನೀತಿ ಸಂಹಿತೆ ಉಲ್ಲಂಘನೆ ಕಂಡು ಬಂದಲ್ಲಿ ಸಿ-ವಿಜಿಲ್‌ ಆ್ಯಪ್‌ ಮೂಲಕ ದೂರು ದಾಖಲಿಸಬಹುದಾಗಿದೆ ಎಂದು ಸ್ವೀಪ್‌ ಸಮಿತಿ ಅಧ್ಯಕ್ಷರಾದ ಕೆ.ಲಕ್ಷಿ¾ಪ್ರಿಯಾ ಅವರು ಕೋರಿದ್ದಾರೆ.

ಗೂಗಲ್‌ ಪ್ಲೇಸ್ಟೋರ್‌
ಸಿ-ವಿಜಿಲ್‌ ಆ್ಯಪ್‌ನ್ನು ಗೂಗಲ್‌ ಪ್ಲೇಸ್ಟೋರ್‌ ಮೂಲಕ ಡೌನ್‌ಲೋಡ್‌ ಮಾಡಿಕೊಂಡು ಫೋಟೋ ಅಥವಾ ವಿಡಿಯೋ ಮೂಲಕ ದೂರನ್ನು ದಾಖಲಿಸಬಹುದು. ಸಿ-ವಿಜಿಲ್‌ ಆ್ಯಪ್‌ ಮಾದರಿ ಚುನಾವಣಾ ನೀತಿ ಸಂಹಿತೆ ಜಾರಿಯಾದ ದಿನದಿಂದಲೇ ಕಾರ್ಯಚರಣೆಯಲ್ಲಿದೆ. ಮಾದರಿ ನೀತಿ ಸಂಹಿತೆ ಅವಧಿಯಲ್ಲಿ ನಿಯಮ ಉಲ್ಲಂಘನೆ ಮಾಡುವ ವ್ಯಕ್ತಿ, ಗುಂಪು, ಸ್ಥಳದ ಫೋಟೋ, ವೀಡಿಯೋಗಳನ್ನು ಈ ಆ್ಯಪ್‌ನಲ್ಲಿ ದಾಖಲಿಸಿ, ಜಿಲ್ಲಾ ಚುನಾವಣಾ ಘಟಕಕ್ಕೆ ನಾಗರಿಕರು ರವಾನಿಸಬಹುದು.

ನಾಗರಿಕರು ಕಳುಹಿಸುವ ಈ ದೂರುಗಳು ಸಮೀಪದ ಜಿಲ್ಲಾ ಚುನಾವಣಾ ಆಯೋಗದ ಕಂಟ್ರೋಲ್‌ ರೂಂನಲ್ಲಿ ದಾಖಲಾಗುತ್ತದೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Darshan (3)

Renukaswamy ಹ*ತ್ಯೆ ಸ್ಥಳದಲ್ಲಿ ದರ್ಶನ್‌ ಇದ್ದ ಚಿತ್ರ ಲಭ್ಯ: ಪರಂ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

1-ewew

ಸಂಗೀತ ವಿವಿಯಲ್ಲಿ ಕೋರ್ಸ್‌ ಆರಂಭ: ಕುಲಪತಿ ನಾಗೇಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.