ಕಾಸರಗೋಡು: ಶುಕ್ರವಾರ 49 ಮಂದಿಗೆ ಸೋಂಕು; ಕೊಡಗು: ಓರ್ವ ಸಾವು; 43 ಪಾಸಿಟಿವ್ ಪ್ರಕರಣ
Team Udayavani, Aug 14, 2020, 11:41 PM IST
ಸಾಂದರ್ಭಿಕ ಚಿತ್ರ
ಕಾಸರಗೋಡು: ಜಿಲ್ಲೆಯಲ್ಲಿ ಶುಕ್ರವಾರ 49 ಮಂದಿಗೆ ಕೊರೊನಾ ಸೋಂಕು ದೃಢಗೊಳಿಸಲಾಗಿದೆ. ಇದೇ ಸಂದರ್ಭ 51 ಮಂದಿ ಗುಣಮುಖರಾಗಿದ್ದಾರೆ. 35 ಮಂದಿಗೆ ಸಂಪರ್ಕದ ಮೂಲಕ ರೋಗ ಬಾಧಿಸಿದೆ. ವರ್ಕಾಡಿ ಬಳಿಯ ಕೋಳ್ಯೂರು ಕೊರ್ಣಕಜೆ ನಿವಾಸಿ 75ರ ಮಹಿಳೆ ಕೋವಿಡ್‌ನಿಂದ ಮೃತಪಟ್ಟಿದ್ದಾರೆ.
ಆ್ಯಂಬುಲೆನ್ಸ್‌ನಲ್ಲಿ ಮಗುವಿಗೆ ಜನ್ಮ
ಹೆರಿಗೆ ಸಂಬಂಧ ಮಂಗಲ್ಪಾಡಿ ಯಿಂದ ಕಾಸರಗೋಡು ಜನರಲ್ ಆಸ್ಪತ್ರೆಗೆ ತೆರಳುತ್ತಿದ್ದ ಗರ್ಭಿಣಿ 108 ಆ್ಯಂಬುಲೆನ್ಸ್‌ನಲ್ಲಿ ಮಗುವಿಗೆ ಜನ್ಮ ನೀಡಿದ ಘಟನೆ ನಡೆದಿದೆ. ಈ ಮಹಿಳೆಗೆ ಪ್ರಾಥಮಿಕ ತಪಾಸಣೆಯಲ್ಲಿ ಕೋವಿಡ್ ಖಾತರಿಯಾದ ಹಿನ್ನೆಲೆಯಲ್ಲಿ ಪರಿಯಾರಂ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. 1,569 ಮಂದಿಗೆ ಸೋಂಕು ಕೇರಳದಲ್ಲಿ 1,569 ಮಂದಿಗೆ ಸೋಂಕು ದೃಢೀಕರಿಸಲಾಗಿದೆ. 1,304 ಮಂದಿ ಗುಣಮುಖರಾಗಿದ್ದಾರೆ. 1,354 ಮಂದಿಗೆ ಸಂಪರ್ಕದ ಮೂಲಕ ರೋಗ ಬಾಧಿಸಿದೆ.
402 ಮಂದಿ ವಿರುದ್ಧ ಕೇಸು
ಮಾಸ್ಕ್ ಧರಿಸದೇ ಇದ್ದದ್ದಕ್ಕೆ ಜಿಲ್ಲೆಯಲ್ಲಿ 402 ಮಂದಿ ವಿರುದ್ಧ ಕೇಸು ದಾಖಲಿಸಲಾಗಿದೆ.
ಕೊಡಗು: ಓರ್ವ ಸಾವು
ಮಡಿಕೇರಿ: ಜಿಲ್ಲೆಯ ಭಗವತಿ ನಗರದ 58 ವರ್ಷದ ಪುರುಷರೊಬ್ಬರು ಶುಕ್ರವಾರ ಸೋಂಕಿನಿಂದ ಮೃತಪಟ್ಟಿದ್ದಾರೆ. ಮಧುಮೇಹ ಮತ್ತು ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದ ಅವರಿಗೆ ಆ. 9ರಂದು ಜ್ವರವಿತ್ತು. ಎರಡು ದಿನ ಪರೀಕ್ಷೆ ನಡೆಸಿದಾಗ ಪಾಸಿಟಿವ್ ಬಂದಿತ್ತು. ತತ್‌ಕ್ಷಣ ಆಸ್ಪತ್ರೆಗೆ ದಾಖಲಿಸಿ ಐಸಿಯನಲ್ಲಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಮೃತಪಟ್ಟಿದ್ದಾರೆ.
43 ಪ್ರಕರಣ
ಜಿಲ್ಲೆಯಲ್ಲಿ 43 ಹೊಸ ಪಾಸಿಟಿವ್ ಪ್ರಕರಣ ದಾಖಲಾಗಿವೆ. ಇದರಿಂದ ಸೋಂಕಿತರ ಸಂಖ್ಯೆ 922ಕ್ಕೆ ಏರಿಕೆಯಾಗಿದೆ. ಈ ಪೈಕಿ 579 ಮಂದಿ ಗುಣಮುಖರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Kollywood: ಬಹಿರಂಗ ಪತ್ರ ಬರೆದು ಧನುಷ್ ಮೇಲೆ ರೇಗಾಡಿದ ನಟಿ ನಯನತಾರಾ; ಆಗಿರುವುದೇನು?
Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ
Actor Darshan ವಿರುದ್ದ ಸುಪ್ರೀಂನಲ್ಲಿ ಮೇಲ್ಮನವಿ: ಬೆಂಗ್ಳೂರು ಕಮೀಷನರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.