ಹಾಡಹಗಲೇ ರಿಯಲ್​ ಎಸ್ಟೇಟ್​ ಉದ್ಯಮಿಯ ಅಪಹರಣ: ಕೆಲವೇ ನಿಮಿಷಗಳೊಳಗೆ ಆರೋಪಿಗಳ ಬಂಧನ

Team Udayavani, May 28, 2022, 6:01 PM IST

ಹಾಡಹಗಲೇ ರಿಯಲ್‌ ಎಸ್ಟೇಟ್‌ ವ್ಯಾಪಾರಿಯ ಅಪಹರಣ: ಕೆಲವೇ ನಿಮಿಷಗಳೊಳಗೆ ಆರೋಪಿಗಳ ಬಂಧನ

ಬದಿಯಡ್ಕ: 80 ಲಕ್ಷ ರೂ. ಆರ್ಥಿಕ ವ್ಯವಹಾರಕ್ಕೆ ಸಂಬಂಧಿಸಿ ತರ್ಕದ ಹಿನ್ನೆಲೆಯಲ್ಲಿ ರಿಯಲ್‌ ಎಸ್ಟೇಟ್‌ ವ್ಯಾಪಾರಿ ಬದಿಯಡ್ಕ ಗೋಳಿಯಡ್ಕದ ಮೊದೀನ್‌ ಕುಂಞಿ (49) ಅವರನ್ನು ಬದಿಯಡ್ಕ ಪೇಟೆಯಿಂದ ಹಾಡಹಗಲೇ ತಂಡವೊಂದು ಅಪಹರಿಸಿದ ಘಟನೆ ನಡೆದಿದೆ.

ವಿಷಯ ತಿಳಿದು ತತ್‌ಕ್ಷಣ ಕಾರ್ಯಾಚರಣೆ ನಡೆಸಿದ ಪೊಲೀಸರು ನಿಮಿಷಗಳೊಳಗೆ ಅಪಹರಣ ಮಾಡಿದ ತಂಡವನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಚೆಂಗಳ ನಾಲ್ಕನೇ ಮೈಲು ನಿವಾಸಿಗಳಾದ ಶರೀಫ್‌, ಅಬ್ದುಲ್‌ ಹಕೀಂ, ಚಟ್ಟಂಚಾಲ್‌ ನಿವಾಸಿ ನಿಜಾಮುದ್ದೀನ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಅಪಹರಣಕ್ಕೆ ಬಳಸಿದ ಕಪ್ಪು ಬಣ್ಣದ ಮಾರುತಿ 800 ಕಾರನ್ನು ಪೊಲೀಸರು ವಶಪಡಿಸಿದ್ದಾರೆ.

ಮೇ 27ರಂದು ಸಂಜೆ 4 ಗಂಟೆಗೆ ಸ್ಕೂಟರ್‌ನಲ್ಲಿ ಬದಿಯಡ್ಕ ಪೇಟೆಗೆ ಬಂದು ಹೊಟೇಲೊಂದರಲ್ಲಿ ಚಹಾ ಸೇವಿಸಿ ಹೊರಗೆ ಬರುತ್ತಿದ್ದ ಮೊದೀನ್‌ ಕುಂಞಿ ಅವರನ್ನು ಹೊರಗೆ ಕಾದು ನಿಂತಿದ್ದ ತಂಡ ಬಲವಂತವಾಗಿ ಹಿಡಿದು ಕಾರಿಗೆ ಹತ್ತಿಸಿ ಅಪಹರಿಸಿದೆ. ಈ ವೇಳೆ ಬೊಬ್ಬೆ ಕೇಳಿ ಸ್ಥಳೀಯರು ಅಲ್ಲಿಗೆ ತಲುಪುವಷ್ಟರಲ್ಲಿ ಕಾರು ವೇಗದಲ್ಲಿ ಪರಾರಿಯಾಗಿತ್ತು.

ವಿಷಯ ತಿಳಿದು ಎಸ್‌ಐ ಪಿ.ಕೆ. ವಿನೋದ್‌ ಕುಮಾರ್‌, ಪೊಲೀಸರಾದ ಇಸ್ಮಾಯಿಲ್‌, ಜಯಪ್ರಕಾಶ್‌, ಮನು ನೇತೃತ್ವದಲ್ಲಿ ತಲುಪಿದ ಪೊಲೀಸರ ತಂಡ ಕಾರನ್ನು ಹಿಂಬಾಲಿಸಿತು. ಮಾನ್ಯ ರಸ್ತೆಗೆ ತಲುಪಿದಾಗ ಪೊಲೀಸ್‌ ಜೀಪನ್ನು ಕಾರಿಗೆ ಅಡ್ಡಿವಿರಿಸಿ ಅಪಹರಣಕಾರರನ್ನು ಬಂಧಿಸಿದರು.

ಕಾರಿನೊಳಗೆ ಮೊದೀನ್‌ ಕುಂಞಿ ಅವರಿಗೆ ಚಾಕುನಿಂದ ಬೆರಳುಗಳಿಗೆ ಇರಿದು ತಂಡ ಗಾಯಗೊಳಿಸಿತ್ತು. ಮೊದೀನ್‌ ಕುಂಞಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಹರಣ ನಡೆಸಿದ ತಂಡದಲ್ಲಿದ್ದ ವ್ಯಕ್ತಿಯೋರ್ವನ ಮಧ್ಯೆ ಸೊತ್ತು ವ್ಯವಹಾರ ನಡೆದಿತ್ತು. ಈ ಸಂಬಂಧ ಮೊದೀನ್‌ ಕುಂಞಿ 80 ಲಕ್ಷ ರೂ. ನೀಡಲು ಇದೆಯೆಂದು ದೂರಲಾಗಿದೆ.

ಈ ವಿಷಯವಾಗಿ ಹಲವು ಬಾರಿ ಚರ್ಚೆ ನಡೆಸಿದ್ದರೂ ಪರಿಹಾರವುಂಟಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಮೊದೀನ್‌ ಕುಂಞಿ ಅವರನ್ನು ಅಪಹರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಟಾಪ್ ನ್ಯೂಸ್

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ

rahul gandhi

Adani ಬಂಧಿಸಿ, ಸೆಬಿ ಮುಖ್ಯಸ್ಥೆ ವಜಾ ಮಾಡಿ: ರಾಹುಲ್‌ ಪಟ್ಟು

ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

Education: ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

1-robo-kidnap

Shanghai: ಎಐ ಆಧಾರಿತ ರೋಬೋಟ್‌ನಿಂದ 12 ರೋಬೋಗಳ ಕಿಡ್ನಾಪ್‌!

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

Suside-Boy

Kasaragodu: ರೈಲಿನಿಂದ ಬಿದ್ದು ವ್ಯಕ್ತಿ ಸಾವು

14

Kasaragod: ಕೇರಳದಿಂದ ಕರ್ನಾಟಕಕ್ಕೆ ಪಲಾಯನಗೊಂಡಿದ್ದ ನಕ್ಸಲರು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ

rahul gandhi

Adani ಬಂಧಿಸಿ, ಸೆಬಿ ಮುಖ್ಯಸ್ಥೆ ವಜಾ ಮಾಡಿ: ರಾಹುಲ್‌ ಪಟ್ಟು

ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

Education: ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.