ತಾಯಿಯ ನೆನಪುಗಳಿರುವ ಮೊಬೈಲ್ ಫೋನ್ ಹುಡುಕಿಕೊಡಿ ಪ್ಲೀಸ್.. : ಜಿಲ್ಲಾಡಳಿತಕ್ಕೆ ಬಾಲಕಿ ಮನವಿ
Team Udayavani, May 23, 2021, 1:52 PM IST
ಮಡಿಕೇರಿ : ಕೋವಿಡ್ ಸೋಂಕಿನಿಂದ ತಾಯಿಯನ್ನು ಕಳೆದುಕೊಂಡು ದುಃಖದಲ್ಲಿರುವ ಮಗಳೊಬ್ಬಳು ಆಸ್ಪತ್ರೆಯಲ್ಲಿ ಕಳೆದು ಹೋಗಿರುವ ತನ್ನ ತಾಯಿಯ ನೆನಪುಗಳಿರುವ ಮೊಬೈಲ್ ಅನ್ನು ಹುಡುಕಿಕೊಡುವಂತೆ ಜಿಲ್ಲಾಡಳಿತ ಹಾಗೂ ಶಾಸಕರಿಗೆ ಪತ್ರ ಬರೆದಿದ್ದಾಳೆ.
ಕೊಡಗು ಜಿಲ್ಲೆಯ ಕುಶಾಲನಗರ ಸಮೀಪದ ಗುಮ್ಮನಕೊಲ್ಲಿಯ ನಿವಾಸಿ ನವೀನ್ ಮತ್ತು ಅವರ ಪತ್ನಿ ಪ್ರಭಾ ಹಾಗೂ ಮಗಳು ಹೃತೀಕ್ಷಾಳಿಗೂ ಕೋವಿಡ್ ಸೋಂಕು ಕಾಣಿಸಿಕೊಂಡಿದ್ದು, ನವೀನ್ ಅವರ ಪತ್ನಿ ಮೇ.16 ರಂದು ಚಿಕಿತ್ಸೆ ಫಲಿಸದೆ ಕೋವಿಡ್ ನಿಂದ ಸಾವನ್ನಪ್ಪುತ್ತಾರೆ. ಆಸ್ಪತ್ರೆ ಸಿಬ್ಬಂದಿ ಪ್ರಭಾ ಅವರ ಮೃತ ದೇಹವನ್ನು ವಾಪಾಸ್ ನೀಡುತ್ತಾರೆ. ಆದರೆ ಈ ವೇಳೆ ಅವರ ಮೊಬೈಲ್ ಪೋನನ್ನು ಹಿಂದಿರುಗಿಸಲಿಲ್ಲ.
ಇದನ್ನೂ ಓದಿ : ಯಾಸ್ ಚಂಡಮಾರುತ : ಪ್ರಧಾನಿ ನೇತೃತ್ವದಲ್ಲಿ ಅಧಿಕಾರಿಗಳ ಪೂರ್ವಭಾವಿ ಸಭೆ
ತಾಯಿಯನ್ನು ಕಳೆದುಕೊಂಡು ಅಪ್ಪನೊಂದಿಗೆ ಹೋಮ್ ಕ್ವಾರಂಟೈನ್ ನಲ್ಲಿರುವ ಮಗಳು ಹೃತೀಕ್ಷಾ ನನ್ನ ತಾಯಿಯ ನೆನಪುಗಳು ಕಳೆದು ಹೋದ ಮೊಬೈಲ್‌ನಲ್ಲಿದ್ದು ಹುಡುಕಿಕೊಡಲು ಮನಕಲಕುವಂತೆ ಪತ್ರ ಬರೆದು, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಮೂಲಕ ತಂದೆ ಮಗಳು ಇಬ್ಬರು ಮನವಿ ಮಾಡಿಕೊಂಡಿದ್ದಾರೆ.
ಸದ್ಯ ಬಾಲಕಿಯ ಮನವಿಗೆ ಜಿಲ್ಲಾಡಳಿತ ಸ್ಪಂದಿಸಿದ್ದು, ಪೊಲೀಸ್ ಹಾಗೂ ಆರೋಗ್ಯ ಇಲಾಖೆಯಿಂದ ಮೊಬೈಲ್ ಹುಡುಕಲು ಪ್ರಯತ್ನಿಸಲಾಗುತ್ತಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.