ವಿದ್ಯಾರ್ಥಿಗಳ ಅಳಲಿಗೆ ಕಿವುಡಾದ ಸರಕಾರ

ಕನ್ನಡ ಶಾಲೆಗಳಿಗೆ ಮತ್ತೆ ಕನ್ನಡ ಅರಿಯದ ಶಿಕ್ಷಕರ ನೇಮಕಕ್ಕೆ ಸನ್ನಾಹ

Team Udayavani, Oct 11, 2019, 5:00 AM IST

kasargod-school

ಕಾಸರಗೋಡು: ಒಂದೆಡೆ “ಭಾಷಾ ಅಲ್ಪಸಂಖ್ಯಾಕರ ಸಾಂವಿಧಾನಿಕ ಹಕು Rಗಳನ್ನು ರಕ್ಷಿಸಲಾಗುವುದು’ ಎಂದು ಮಂಜೇಶ್ವರ ವಿಧಾನಸಭಾ ಉಪಚುನಾ ವಣೆ ಪ್ರಚಾರದಲ್ಲಿ ವಿವಿಧ ಪಕ್ಷಗಳ ಮುಖಂಡರು ಹೇಳಿಕೊಂಡು ಬರುತ್ತಿದ್ದರೆ ಇನ್ನೊಂದೆಡೆ ಕನ್ನಡ ಶಾಲೆಗಳಲ್ಲಿ ಮತ್ತೆ ಕನ್ನಡ ತಿಳಿಯದ ಶಿಕ್ಷಕರನ್ನು ನೇಮಿಸಿ ವಿದ್ಯಾರ್ಥಿಗಳ ಭವಿಷ್ಯವನ್ನು ಕರಾಳ ವಾಗಿಸಲು ರಾಜ್ಯ ಶಿಕ್ಷಣ ಇಲಾಖೆ ಸಿದ್ಧತೆ ನಡೆಸುತ್ತಿದೆ.

ಕನ್ನಡ ಶಾಲೆಗಳಿಗೆ ಕನ್ನಡ ತಿಳಿದವರನ್ನೇ ಶಿಕ್ಷಕರನ್ನಾಗಿ ನೇಮಿಸಬೇಕೆಂಬ ಕನ್ನಡ ವಿದ್ಯಾರ್ಥಿಗಳ ಪೋಷಕರ ಸಂಘಟನೆಗಳ ಹೋರಾಟಕ್ಕೆ ಕಿವುಡಾದ ಸರಕಾರ ಈ ಸಮಸ್ಯೆಗೆ ಯಾವುದೇ ಪರಿಹಾರವನ್ನು ಕೈಗೊಳ್ಳುತ್ತಿಲ್ಲ. ಸರಕಾರದ ಈ ನಿರ್ಲಕ್ಷ್ಯ ಮತ್ತು ನಿಷ್ಕ್ರಿಯಕ್ಕೆ ಕನ್ನಡಿಗರ ವಲಯದಲ್ಲಿ ಭಾರೀ ಆಕ್ರೋಶ ಕಂಡುಬರುತ್ತಿದ್ದು ಇದು ಮಂಜೇಶ್ವರ ಉಪ ಚುನಾವಣೆಯಲ್ಲಿ ಪ್ರತಿಫಲಿಸುವ ಸಾಧ್ಯತೆಯಿದೆ.

ಕನ್ನಡ ಶಾಲೆಗಳಿಗೆ ಕನ್ನಡ ತಿಳಿಯದ ಶಿಕ್ಷಕರನ್ನು ನೇಮಿಸುತ್ತಿರುವುದರಿಂದ ಭಾಷಾ ಅಲ್ಪಸಂಖ್ಯಾಕರಿಗೆ ಮಾತೃ ಭಾಷೆಯಲ್ಲಿ ಕಲಿಯುವ ಸಾಂವಿಧಾನಿಕ ಅವಕಾಶಕ್ಕೆ ಹಾಗೂ ಮಕ್ಕಳ ಶಿಕ್ಷಣದ ಹಕ್ಕಿಗೆ ಧಕ್ಕೆಯಾಗಲಿದೆ. ಸಾರ್ವಜನಿಕ ಶಿಕ್ಷಣ ರಂಗವನ್ನು ಉಳಿಸುತ್ತಿರುವವರೆಂದು ಹೇಳಿ ಕೊಳ್ಳುತ್ತಿರುವ ಸಿ.ಪಿ.ಎಂ. ಪಕ್ಷದ ನೇತೃತ್ವದ ಎಡರಂಗ ಸರಕಾರ ಕಲಿಸುವ ಮಾಧ್ಯಮದ ಭಾಷೆಯನ್ನೇ ತಿಳಿಯದ ಶಿಕ್ಷಕರನ್ನು ನೇಮಿಸುವ ಮೂಲಕ ಆರ್ಥಿಕವಾಗಿ, ಸಾಮಾಜಿಕವಾಗಿ ಹಿಂದುಳಿದ ವಿದ್ಯಾರ್ಥಿಗಳೇ ಹೆಚ್ಚಿನ ಸಂಖ್ಯೆಯಲ್ಲಿ ಕಲಿಯುತ್ತಿರುವ ಸರಕಾರಿ ಶಾಲೆಗಳ ಕನ್ನಡ ಮಾಧ್ಯಮ ವಿಭಾಗವನ್ನು ಮುಚ್ಚಿಸಿ ಖಾಸಗಿ ಶಾಲೆಗಳಿಗೆ ನೆರವಾಗಲು ಹೊರಟಿದೆಯೇ ಎಂಬ ಗುಮಾನಿ ಮೂಡುತ್ತಿದೆ.

ಕನ್ನಡ ತಿಳಿಯದಿದ್ದರೂ ಕೇರಳ ಲೋಕಸೇವಾ ಆಯೋಗದಿಂದ ಅಕ್ರಮವಾಗಿ ಆಯ್ಕೆಯಾದ ಈ ಅನರ್ಹ ಶಿಕ್ಷಕರಿಗೆ ಕನ್ನಡದಲ್ಲಿ ಮೂರು ಗಂಟೆಗಳ ವಿವರಣಾತ್ಮಕ ಲಿಖೀತ ಪರೀಕ್ಷೆ ನಡೆಸಿ ಅದರಲ್ಲಿ ತೇರ್ಗಡೆಯಾದರೆ ಮಾತ್ರ ಕನ್ನಡ ಮಾಧ್ಯಮ ತರಗತಿಗಳಿಗೆ ಪಾಠ ಮಾಡಲು ಅನುಮತಿ ನೀಡಬೇಕೆಂದೂ ಇಲ್ಲವಾದರೆ ಅವರನ್ನು ಮಲಯಾಳ ಮಾಧ್ಯಮಕ್ಕೆ ಅಥವಾ ತತ್ಸಮಾನ ಹುದ್ದೆಗಳಿಗೆ ವರ್ಗಾಯಿಸಿ ಕನ್ನಡ ವಿದ್ಯಾರ್ಥಿಗಳ ಹಿತ ಕಾಪಾಡಬೇಕೆಂಬುದು ಕನ್ನಡಿಗರ ಒತ್ತಾಯವಾಗಿದೆ. ಆದರೆ ಇದಕ್ಕೆ ಕಿವಿಗೊಡದ ಸರಕಾರ ಮತ್ತೆ ಇಬ್ಬರು ಕನ್ನಡ ಬಾರದ ಸಮಾಜ ವಿಜ್ಞಾನ ಅಧ್ಯಾಪಕರ ನೇಮಕಕ್ಕೆ ಸಿದ್ಧತೆ ನಡೆಸಿದೆ. ಬೇಕಲ, ಉದುಮ ಶಾಲೆಗಳಿಗೆ ಇವರಿಗೆ ನೇಮಕಾತಿ ನೀಡಲಾಗಿದೆ.

ಮಕ್ಕಳ ಉಪವಾಸಕ್ಕೂ ಮಣಿಯದ ಸರಕಾರ
ಮಂಗಲ್ಪಾಡಿ, ಪೈವಳಿಕೆ, ಬೇಕೂರು, ಪೆರಡಾಲ, ಬಂದಡ್ಕ ಮೊದಲಾದ ಶಾಲೆಗಳಿಗೆ ಈಗಾಗಲೇ ಕನ್ನಡ ತಿಳಿಯದ ಶಿಕ್ಷಕರನ್ನು ನೇಮಿಸಲಾಗಿತ್ತು. ಇದರ ವಿರುದ್ಧ ಧರಣಿ, ತರಗತಿ ಬಹಿಷ್ಕಾರ, ಉಪವಾಸ ಸತ್ಯಾಗ್ರಹ, ದೂರು ಮನವಿಗಳ ಸಮರ್ಪಣೆ, ನ್ಯಾಯಾಂಗ ಹೋರಾಟ ಮೊದಲಾದ ಎಲ್ಲ ಹೋರಾಟಗಳನ್ನೂ ಕನ್ನಡಿಗ ವಿದ್ಯಾರ್ಥಿಗಳು ಪೋಷಕರು ಕೈಗೊಂಡಿದ್ದರು. ಇದರ ಫಲವಾಗಿ ಇಬ್ಬರು ಶಿಕ್ಷಕರನ್ನು ವೇತನ ಸಹಿತ ರಜೆಯಲ್ಲಿ ಕನ್ನಡ ಕಲಿಯಲು ಮೈಸೂರಿನ ಪ್ರಾದೇಶಿಕ ಭಾಷಾ ಅಧ್ಯಯನ ಕೇಂದ್ರಕ್ಕೆ ಕಳುಹಿಸಿ ಸರಕಾರ ಆದೇಶ ಹೊರಡಿಸಿತ್ತು. ಆದರೆ ಹಿಂದಿನ ಅನುಭವಗಳ ಆಧಾರದಲ್ಲಿ ಇವರು ಕನ್ನಡ ಕಲಿತು ಕನ್ನಡದಲ್ಲಿ ಪಾಠ ಮಾಡಲು ಸಮರ್ಥರಾಗುವರೆಂಬ ವಿಶ್ವಾಸ ಕನ್ನಡಿಗರಿಗಿಲ್ಲ.

ಟಾಪ್ ನ್ಯೂಸ್

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

7

Malpe: ಮನೆ ಮನೆಗಳಲ್ಲಿ ಕ್ಯಾರೋಲ್‌ ಗಾಯನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.