“ದೇವಕಾನ ಅವರ ಬದುಕು, ಕಲಾ ಜೀವನ ಮಾದರಿ’

Team Udayavani, Jun 19, 2019, 6:10 AM IST

devakana

ಉಪ್ಪಳ: ಯಕ್ಷಗಾನವನ್ನು ತನ್ನ ಜೀವನದ ಉಸಿರಾಗಿ ಸ್ವೀಕರಿಸಿ, ಪರಂಪರೆ ಮತ್ತು ಶಾಸ್ತ್ರೀಯತೆಗೆ ಆದ್ಯತೆ ನೀಡಿ ಹಲವಾರು ಮಂದಿಗೆ ಆಶ್ರಯದಾತರಾಗಿ ಮುನ್ನಡೆದ ದೇವಕಾನ ಕೃಷ್ಣ ಭಟ್‌ ಅವರ ಅಗಲುವಿಕೆ ತುಂಬಲಾರದ ನಷ್ಟವಾಗಿದೆ. ರಂಗ ಮೀಮಾಂಸಕರಾಗಿ ವಸ್ತುನಿಷ್ಠ ನಿಲುವುಗಳ ಅವರ ಬದುಕು-ಕಲಾ ಜೀವನ ಮಾದರಿಯಾಗಿದ್ದುದು ಎಂದು ಹಿರಿಯ ಯಕ್ಷಗಾನ ಅರ್ಥಧಾರಿ, ಸಂಶೋಧಕ ಡಾ| ಪ್ರಭಾಕರ ಜೋಶಿ ಅವರು ತಿಳಿಸಿದರು.

ಇತ್ತೀಚೆಗೆ ಅಗಲಿದ ಯಕ್ಷಗಾನ ಕಲಾವಿದ, ಪ್ರಸಾಧ‌ನ ತಜ್ಞ ದಿ|ದೇವಕಾನ ಕೃಷ್ಣ ಭಟ್‌ ಅವರ ಸ್ಮರಣಾರ್ಥ ದೇವಕಾನದ ಅವರ ಸ್ವಗೃಹದಲ್ಲಿ ಆಯೋಜಿಸಲಾಗಿದ್ದ ಸಂಸ್ಮರಣ ಕಾರ್ಯಕ್ರಮದಲ್ಲಿ ನುಡಿನಮನ ಸಲ್ಲಿಸಿ ಅವರು ಮಾತನಾಡಿದರು.

ಹಿರಿಯ ಅರ್ಥಧಾರಿ, ಸಂಘಟಕ ಉಜಿರೆ ಅಶೋಕ ಭಟ್‌ ಮಾತನಾಡಿ, ಯುವ ತಲೆಮಾರಿಗೆ ಎಂದಿಗೂ ಮಾರ್ಗದರ್ಶಕರಾಗಿದ್ದ ದೇವಕಾನರ ಸ್ಥಿಗª-ಸರಳ ವ್ಯಕ್ತಿತ್ವ ಅವರನ್ನು ಹೆಚ್ಚು ಆಕರ್ಷಣೀಯಗೊಳಿಸಿತ್ತು. ಯಕ್ಷಗಾನ ಕ್ಷೇತ್ರದ ಸಮಗ್ರ ಜ್ಞಾನ ವಿಸ್ತಾರತೆಯ ಅವರ ತಿಳಿವಳಿಕೆ ಗ್ರಾಂಥಿಕ ದಾಖಲಾತಿಗಿಂತಲೂ ಮಿಗಿಲಾಗಿತ್ತು ಎಂದು ನೆನಪಿಸಿದರು. ಪ್ರಶಸ್ತಿ, ಸಮ್ಮಾನಗಳ ಹಿಂದೆ ಬೀಳದ ಅವರಿಗೆ, ಅಪಾರ ಪ್ರಮಾಣದ ಶಿಷ್ಯರು-ಅಭಿಮಾನಿಗಳ ಸಂಪ್ರಾರ್ಥನೆಗಳು ಸದ್ಗತಿಯನ್ನು ಒದಗಿಸಲಿವೆೆ ಎಂದು ತಿಳಿಸಿದರು.

ವೇದಿಕೆಯಲ್ಲಿ ದೇವಕಾನ ಕೃಷ್ಣ ಭಟ್‌ ಅವರ ಒಡನಾಡಿ ರಾಧಾಕೃಷ್ಣ ಮಾಸ್ತರ್‌, ಹಿರಿಯ ಭಾಗವತರಾದ ತೆಂಕಬೈಲು ತಿರುಮಲೇಶ್ವರ ಶಾಸ್ತ್ರಿ ಉಪಸ್ಥಿತರಿದ್ದರು.

ಯಕ್ಷಗಾನ ಕಲಾವಿದರಾದ ಶ್ರೀಧರ ಭಂಡಾರಿ ಪುತ್ತೂರು, ಕುಂಬಳೆ ಶ್ರೀಧರ ರಾವ್‌, ಪೆರ್ಮುದೆ ಜಯಪ್ರಕಾಶ ಶೆಟ್ಟಿ, ದಿವಾಣ ಶಿವಶಂಕರ ಭಟ್‌, ಪಡ್ರೆ ಚಂದು ಸ್ಮಾರಕ ಯಕ್ಷಗಾನ ತರಬೇತಿ ಕೇಂದ್ರದ ಪ್ರಾಚಾರ್ಯ ಸಬ್ಬಣಕೋಡಿ ರಾಮ ಭಟ್‌, ಕಣಿಪುರ ಯಕ್ಷಗಾನ ಮಾಸಪತ್ರಿಕೆಯ ಸಂಪಾದಕ ಎಂ.ನಾ.ಚಂಬಲ್ತಿಮಾರ್‌, ಧರ್ಮೇಂದ್ರ ಮಾಸ್ತರ್‌ ಬಾಯಾರು , ದಿವಂಗತ ಕೃಷ್ಣ ಮಾಸ್ತರ್‌ ಅವರ ಒಡನಾಟದ ನೆನಪುಗಳನ್ನು ಹಂಚಿಕೊಂಡರು.

ಸಂಘಟಕ ಸಂಕಬೈಲು ಸತೀಶ ಅಡಪ ನಿರೂಪಿಸಿದರು. ಈ ಸಂದರ್ಭ ದೇವಕಾನ ಕೃಷ್ಣ ಭಟ್‌ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಶ್ರದ್ಧಾಂಜಲಿ ಸಲ್ಲಿಸಲಾಯಿತು. ಯಕ್ಷಗಾನ ಕಲಾವಿದರು, ದೇವಕಾನರ ಒಡನಾಡಿಗಳು, ಬಂಧುಗಳು, ಸ್ಥಳೀಯರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Darshan (3)

Renukaswamy ಹ*ತ್ಯೆ ಸ್ಥಳದಲ್ಲಿ ದರ್ಶನ್‌ ಇದ್ದ ಚಿತ್ರ ಲಭ್ಯ: ಪರಂ

ravi-kumar

BJP ಸೋಲಿಗೆ ರಾಜ್ಯಾಧ್ಯಕ್ಷ ಒಬ್ಬರೇ ಹೊಣೆಯಲ್ಲ: ಎನ್‌. ರವಿಕುಮಾರ್‌

1-nikkki

JDS ಕಳೆದುಕೊಂಡಲ್ಲೇ ಹುಡುಕುತ್ತೇನೆ: ನಿಖಿಲ್‌ ಕುಮಾರಸ್ವಾಮಿ

Renukacharya

Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

1-ewew

ಸಂಗೀತ ವಿವಿಯಲ್ಲಿ ಕೋರ್ಸ್‌ ಆರಂಭ: ಕುಲಪತಿ ನಾಗೇಶ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

CT RAVI 2

C T Ravi; ಸನಾತನ ಧರ್ಮ ಉಳಿದರೆ ದೇಶದ ಉಳಿವು

Darshan (3)

Renukaswamy ಹ*ತ್ಯೆ ಸ್ಥಳದಲ್ಲಿ ದರ್ಶನ್‌ ಇದ್ದ ಚಿತ್ರ ಲಭ್ಯ: ಪರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.