ಬಹುಭಾಷಾ ನಟಿಯ ಅಪಹರಣ ಪ್ರಕರಣ ದಿಲೀಪ್ ವಿರುದ್ಧ ಆರೋಪಪಟ್ಟಿ
Team Udayavani, Aug 6, 2017, 7:00 AM IST
ಕೊಚ್ಚಿ : ಬಹುಭಾಷಾ ನಟಿಯನ್ನು ಅಪಹರಿಸಿ ಆಕೆಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದ ಸಂಚು ರೂಪಿಸಿದ ಆರೋಪದ ಮೇಲೆ ಬಂಧಿತನಾಗಿರುವ ನಟ ದಿಲೀಪ್ ವಿರುದ್ಧ ಪೊಲೀಸರು ಶೀಘ್ರದಲ್ಲಿಯೇ ಆರೋಪಪಟ್ಟಿಯನ್ನು ಸಲ್ಲಿಸುವ ಸಾಧ್ಯತೆ ಇದೆ.
ಫೆ. 17ರಂದು ನಡೆದ ಈ ಪ್ರಕರಣದಲ್ಲಿ ಒಟ್ಟು 13 ಮಂದಿ ಆರೋಪಿಗಳನ್ನು ಹೆಸರಿಸಲಾಗಿದ್ದು ನಟ ದಿಲೀಪ್‌ನನ್ನು ಎರಡನೇ ಆರೋಪಿ ಎಂದು ಪೊಲೀಸರು ಹೆಸರಿಸಿ ದ್ದಾರೆ. ಪ್ರಕರಣದ ಪ್ರಮುಖ ಆರೋಪಿಯಾಗಿರುವ ಪಲ್ಸರ್ ಸುನಿ ವಿರುದ್ಧ ಸಾಮೂಹಿಕ ಅತ್ಯಾಚಾರದ ಸಹಿತ ವಿವಿಧ ಪ್ರಕರಣಗಳನ್ನು ದಾಖಲಿಸಲಾಗಿದ್ದರೆ ನಟ ದಿಲೀಪ್ ವಿರುದ್ಧ ಲೈಂಗಿಕ ಹಲ್ಲೆಯ ಸಂಚು ರೂಪಿಸಿದ ಆರೋಪವನ್ನು ಹೊರಿಸಲಾಗಿದೆ. ಈ ಆರೋಪ ಸಾಬೀತಾದದ್ದೇ ಆದಲ್ಲಿ 20ವರ್ಷಗಳ ಜೈಲು ಶಿಕ್ಷೆಯನ್ನು ದಿಲೀಪ್ ಅನುಭವಿಸುವ ಸಾಧ್ಯತೆಗಳಿವೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸಲ್ಲಿಸಿರುವ ಪ್ರಾಥಮಿಕ ಆರೋಪಪಟ್ಟಿಯಲ್ಲಿ ಪಲ್ಸರ್ ಸುನಿ, ಕಾರು ಚಾಲಕ ಮಾರ್ಟಿನ್ ಆಂಟೋನಿ, ಮಣಿಕಂಠನ್, ವಿಜೇಶ್, ಪ್ರದೀಪ್ ಮತ್ತು ಚಾರ್ಲ್ಸ್ ಆಂಟೋನಿಯನ್ನು ಆರೋಪಿಗಳಾಗಿ ಹೆಸರಿಸಲಾಗಿದ್ದರೆ ಪೂರಕ ಆರೋಪ ಪಟ್ಟಿಯಲ್ಲಿ ಮೇಸಿŒ ಸುನಿಲ್, ವಿಷ್ಣು, ವಿಪಿನ್ ಲಾಲ್ ಮತ್ತು ದಿಲೀಪ್‌ನನ್ನೂ ಆರೋಪಿಗಳನ್ನಾಗಿ ಹೆಸರಿಸುವ ಸಾಧ್ಯತೆಗಳಿವೆ. ಸದ್ಯ ಪೊಲೀಸರು ತನಿಖೆಯ ಅಂತಿಮ ಹಂತಕ್ಕೆ ಬಂದಿದ್ದು ಆರೋಪಿಗಳನ್ನು ಪ್ರಶ್ನಿಸುವ ಮತ್ತು ಅವರಿಂದ ಹೇಳಿಕೆಗಳನ್ನು ದಾಖಲಿಸಿಕೊಳ್ಳುವ ಕಾರ್ಯದಲ್ಲಿ ನಿರತರಾಗಿದ್ದು ತಿಂಗಳ ಒಳಗಾಗಿ ಆರೋಪಪಟ್ಟಿ ಸಲ್ಲಿಸುವ ಸಾಧ್ಯತೆಗಳಿವೆ.
ಇನ್ನೀರ್ವರು ಆರೋಪಿಗಳ ಬಂಧನ ಸಾಧ್ಯತೆ
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮುಂದಿನ ಕೆಲವೇ ದಿನಗಳಲ್ಲಿ ಇನ್ನೀರ್ವರು ಆರೋಪಿಗಳನ್ನು ಬಂಧಿಸುವ ಸಾಧ್ಯತೆಗಳಿವೆ ಎನ್ನಲಾಗಿದೆ. ಆದರೆ ಈ ಈರ್ವರು ಆರೋಪಿಗಳ ಬಗೆಗೆ ಹೆಚ್ಚಿನ ಮಾಹಿತಿಯನ್ನು ನೀಡಲು ಪೊಲೀಸರು ನಿರಾಕರಿಸಿದ್ದಾರೆ.
ಆದರೆ ನಟಿಗೆ ಚಲಿಸುತ್ತಿರುವ ಕಾರಿನಲ್ಲಿ ಲೈಂಗಿಕ ಕಿರುಕುಳ ನೀಡಿದ ದೃಶ್ಯಾವಳಿಗಳನ್ನು ಚಿತ್ರೀಕರಿಸಲಾಗಿದ್ದ ಮೊಬೈಲ್ ಫೋನ್‌ನ್ನು ಪತ್ತೆ ಹಚ್ಚಲು ಪೊಲೀಸರಿಗೆ ಈ ವರೆಗೆ ಸಾಧ್ಯವಾಗಿಲ್ಲ.
ಏತನ್ಮಧ್ಯೆ ನಟ ದಿಲೀಪ್ ಜಾಮೀನು ಕೋರಿ ಸೋಮವಾರದಂದು ಮತ್ತೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.