ಸಿರಿ ಉತ್ಪನ್ನಗಳ ಮಾರಾಟ ಪ್ರದರ್ಶನ ಮೇಳಕ್ಕೆ ಚಾಲನೆ
Team Udayavani, May 22, 2019, 6:10 AM IST
ಶನಿವಾರಸಂತೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ 24 ಜನಪ್ರಿಯ ಕಾರ್ಯಕ್ರಮಗಳಲ್ಲಿ ಸಿರಿ ಗ್ರಾಮಾಭಿವೃದ್ದಿ ಕಾರ್ಯಕ್ರಮ ಯಶ ಸ್ವಿಯಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸೋಮವಾರಪೇಟೆ ತಾಲೂಕು ಯೋಜನಾಧಿಕಾರಿ ವೈ.ಪ್ರಕಾಶ್ ಅಭಿಪ್ರಾಯ ಪಟ್ಟರು.
ಅವರು ಸ್ಥಳೀಯ ಕಾನ್ವೆಂಟ್ ರಸ್ತೆಯ ಮಳಿಗೆಯಲ್ಲಿ ಮುಂದಿನ ಹತ್ತು ದಿನಗಳ ವರೆಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸಿರಿ ಹಬ್ಬದ ಪ್ರಯುಕ್ತವಾಗಿ ಸಿರಿ ಸಿದ್ದ ಉಡುಪುಗಳ ಮಾರಾಟ ಮತ್ತು ಸಿರಿ ಉತ್ಪನ್ನಗಳ ಮಾರಾಟ ಹಾಗೂ ಪ್ರದರ್ಶನ ಮಳಿಗೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ್ದರು.
ಸಿರಿ ಯೋಜನೆಯು ಮಹಿಳೆಯರು ಆರ್ಥಿಕವಾಗಿ ಸಬಲರಾಗಿ, ಸ್ವಾವಲಂಬನೆ ಜೀವನಕ್ಕೆ ಆಧಾರವಾಗಿದೆ ಎಂದರು.
ಸಿರಿ ಉತ್ಪನ್ನ ಮಳಿಗೆ ಪ್ರಬಂಧಕ ಸಂದೀಪ್ ಪ್ರಸ್ತಾವಿಕವಾಗಿ ಮಾತನಾಡಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಉದ್ದೇಶ ಕೇವಲ ಗ್ರಾಮೀಣ ಪ್ರದೇಶಗಳಲ್ಲಿ ಹಣಕಾಸು ವ್ಯವಹಾರ ವಹಿವಾಟುವನ್ನು ಹೆಚ್ಚಿಸುವ ಉದ್ದೇಶವಾಗದೆ ಉತ್ಪನ್ನಗಳ ತಯಾರಿಕೆ ಮಾಡಿ ಅವುಗಳನ್ನು ಮಾರಾಟ ಮಾಡುವ ಮೂಲಕ ಸಿರಿ ಗ್ರಾಮಾಭಿವೃದ್ಧಿ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಿದೆ ಎಂದರು.
ಕೊಡ್ಲಿಪೇಟೆ ಜನ ಜಾಗೃತಿ ವೇದಿಕೆ ಅಧ್ಯಕ್ಷ ಭಗವಾನ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಧರ್ಮಸ್ಥಳ ಗ್ರಾಮಾಭಿವೃದ್ದಿ ಸಂಸ್ಥೆಯು ಹತ್ತು ಹಲವು ಜನಪ್ರಿಯ ಕಾರ್ಯಕ್ರಮಗಳ ಮೂಲಕ ಸರಕಾರವೂ ಮಾಡಲಾಗದ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಯಶಸ್ವಿಯಾಗಿರುವುದು ಶ್ಲಾಘನಿಯ ಎಂದರು. ಸಿರಿ ಉತ್ಪನ್ನಗಳು ಹಾಗೂ ಸಿರಿ ಸಿದ್ಧಉಡುಪುಗಳು ಉತ್ತಮ ಗುಣಮಟ್ಟದಿಂದ ಕೂಡಿದ್ದು ಇತರೆ ವ್ಯಪಾರ ಉದ್ದಿಮಿಯಲ್ಲಿರುವಂತೆ ಯಾವುದೆ ಕಮಿಶನ್ ವ್ಯವಹಾರ ಇಲ್ಲದೆ ನೇರವಾಗಿ ಗ್ರಾಹಕರಿಗೆ ರಿಯಾಯಿತಿ ದರದಲ್ಲಿ ಮಾರಾಟ ಮಾಡುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ ಎಂದರು.
ಉತ್ಪನ್ನಗಳ ಮಾರಾಟ ಮಳಿಗೆಯನ್ನು ಮಳಿಗೆ ಮಾಲàಕ ಲಿಂಗರಾಜು ಉದ್ಘಾಟಿಸಿ ಮಾತನಾಡಿದರು. ಶನಿವಾರಸಂತೆ ಒಕ್ಕೂಟದ ಅಧ್ಯಕ್ಷೆ ಭುವನೇಶ್ವರಿ ಹರೀಶ್, ಶನಿವಾರಸಂತೆ ಗ್ರಾ.ಪಂ.ಮಾಜಿ ಅಧ್ಯಕ್ಷ ಎಸ್.ಎನ್.ರಘು ಮಾತನಾಡಿದರು. ಕಾರ್ಯಕ್ರಮದಲ್ಲಿ ಸಿರಿ ಉತ್ಪನ್ನ ಪ್ರಬಂಧಕರಾದ ಅಜಿತ್, ನಿತಿನ್, ಸಿರಿ ಧಾನ್ಯ ಮೇಲ್ವಿಚಾರಕ ಸುರೇಶ್, ಕೊಡ್ಲಿಪೇಟೆ ವಲಯದ ನಿಕಟ ಪೂರ್ವ ಮೇಲ್ವಿಚಾರಕ ಸುಬ್ರಮಣಿ, ಕೊಡ್ಲಿಪೇಟೆ ವಲಯ ಮೇಲ್ವಿಚಾರಕ ರಮೇಶ್, ಸೇವಾ ಪ್ರತಿನಿಧಿಗಳಾದ ಎಸ್.ಆರ್.ಶೋಭಾವತಿ, ಪವನ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ
Road Mishap; ದ್ವಿಚಕ್ರ ವಾಹನ-ಲಾರಿ ನಡುವೆ ಅಪಘಾತ: ದಂಪತಿ ಸಾವು
ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ
Madikeri: ಹುಲಿ ದಾಳಿ; ವ್ಯಕ್ತಿಗೆ ಗಂಭೀರ ಗಾಯ
Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.