ವಿಷ್ಣುಪಾದದಲ್ಲಿ ಐಕ್ಯರಾದ ಎಡನೀರು ಕೇಶವಾನಂದ ಭಾರತಿ ಸ್ವಾಮೀಜಿ
Team Udayavani, Sep 6, 2020, 7:44 AM IST
ಕಾಸರಗೋಡು: ಕೇರಳದ ಕಾಸರಗೋಡು ಜಿಲ್ಲೆಯ ಜಗದ್ಗುರು ಶಂಕರಾಚಾರ್ಯ ಸಂಸ್ಥಾನಂ ಎಡನೀರು ಮಠಾಧೀಶರಾದ ಶ್ರೀ ಕೇಶವಾನಂದ ಭಾರತೀ ಸ್ವಾಮೀಜಿಯವರು (79) ರಾತ್ರಿ 12.45ರ ಸುಮಾರಿಗೆ ಕೃಷ್ಣೈಕ್ಯರಾದರು..
ಸೆ.2ರಂದು ಚಾತುರ್ಮಾಸ್ಯವನ್ನು ಪೂರೈಸಿದ್ದ ಶ್ರೀಗಳು ಕಳೆದ ಕೆಲವು ದಿನಗಳಿಂದ ಅಲ್ಪ ಅಸೌಖ್ಯದಲ್ಲಿದ್ದರು. ಶನಿವಾರ ರಾತ್ರಿ ಪೂಜೆ ಮುಗಿಸಿ ಫಲಾಹಾರ ಸ್ವೀಕರಿಸಿದ್ದ ಶ್ರೀಗಳು ಮಧ್ಯರಾತ್ರಿಯ ವೇಳೆ ಅಸ್ತಂಗತರಾಗಿದ್ದಾರೆ.
ಧಾರ್ಮಿಕವಾಗಿ ಸಾಂಸ್ಕೃತಿಕವಾಗಿಯೂ ಸಕ್ರಿಯರಾಗಿದ್ದ ಶ್ರೀಗಳು ಗಡಿನಾಡಿನ ಸಂಸ್ಥಾನದಲ್ಲಿ ಯಕ್ಷಗಾನ, ಸಂಗೀತದ ಕೇಂದ್ರವನ್ನಾಗಿಸಿದ್ದರು. ಯಕ್ಷಗಾನ ಕಲೆಯ ಮೇಲೆ ಅತೀವ ಪ್ರೇಮ ಹೊಂದಿದ್ದ ಸ್ವಾಮೀಜಿ ಮೇಳವನ್ನು ಮುನ್ನಡೆಸುತ್ತಾ ಸ್ವತಃ ಭಾಗವತಿಕೆಯನ್ನೂ ನಡೆಸುತ್ತಿದ್ದರು.
ಮಠದಲ್ಲಿ ಅನೇಕ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸುತ್ತಿದ್ದ ಶ್ರೀಗಳು ಹರಿಕಥೆಯನ್ನೂ ಮಾಡುತ್ತಿದ್ದರು. ಕರಾವಳಿಯ ಪ್ರಸಿದ್ದ ಯಕ್ಷಗಾನದ ಮೇಲೆ ವಿಶೇಷ ಒಲವಿದ್ದ ಶ್ರೀಗಳು, ಪ್ರತೀ ವರ್ಷ ಯಕ್ಷಗಾನ ಸಪ್ತಾಹ, ತಾಳಮದ್ದಳೆ ಕೂಟಗಳನ್ನು ನಡೆಸುತ್ತಿದ್ದರು.
ಭಾರತದ ನ್ಯಾಯಾಂಗ ವ್ಯವಸ್ಥೆಯಲ್ಲಿ ಕೇಶವಾನಂದ ಸ್ವಾಮೀಜಿಯವರ ಹೆಸರು ಚಿರಸ್ಥಾಯಿಯಾಗಿದೆ. ಕೇಶವಾನಂದ ಭಾರತಿ ವರ್ಸಸ್ ಕೇರಳ ಸರ್ಕಾರ ಪ್ರಕರಣ ಭಾರಿ ಪ್ರಸಿದ್ಧಿ ಪಡೆದಿತ್ತು. ದೇಶದಲ್ಲಿ ಸಂಚಲನ ಉಂಟು ಮಾಡಿದ್ದ ಈ ಪ್ರಕರಣದ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಅತೀ ಅಪರೂಪ ಎಂಬಂತೆ 13 ಮಂದಿ ನ್ಯಾಯಾಧೀಶರ ಪೀಠ ರಚಿಸಿ ಕೈಗೊಂಡಿತ್ತು.
ಏನಿದು ಪ್ರಕರಣ
ಕೇಶವಾನಂದ ಭಾರತೀ ಸ್ವಾಮೀಜಿಯವರು 1971ರಲ್ಲಿ ಕೇರಳ ಸರಕಾರದ ಭೂ ಸುಧಾರಣಾ ಕಾಯ್ದೆ ವಿರುದ್ಧ ಸುಪ್ರೀಂಕೋರ್ಟ್‌ನಲ್ಲಿ ದಾವೆ ಹೂಡಿದರು. ಆಸ್ತಿ ಮೂಲಭೂತವಾದುದೋ ಅಥವಾ ಇಲ್ಲವೋ ಎಂಬುದು ಈ ಕೇಸಿನ ಪ್ರಧಾನ ಅಂಶವಾಗಿತ್ತು. ಆ ಕೇಸಿನ ಬಗ್ಗೆ ಸುಪ್ರೀಂಕೋರ್ಟ್ ಸಂವಿಧಾನದ ತಿದ್ದುಪಡಿಗಳು ಸಂವಿಧಾನದ ಮೂಲ ನಿರ್ಮಾಣವನ್ನು ಕಡ್ಡಾಯವಾಗಿ ಗೌರವಿಸಬೇಕೆಂದು ಸಾರಿತು. ನ್ಯಾಯಾಲಯದ ಆದೇಶವು ಸಂವಿಧಾನದ ಕೆಲವು ಮೂಲ ವಿಷಯಗಳನ್ನು ತಿದ್ದುಪಡಿ ಮೂಲಕ ಬಲಾಯಿಸುವುದು ಸಾಧ್ಯವಿಲ್ಲ ಎಂಬುದಾಗಿ ತಿಳಿಸಿತ್ತು. ಅಂದರೆ ಭಾರತದ ಸಂಸತ್ತಿನ ಸಾಂವಿಧಾನಿಕ ತಿದ್ದುಪಡಿಯಾಗಬಹುದು, ಆದರೆ ಅದು ಸಂವಿಧಾನದ ಮೂಲಭೂತ ಸ್ವಭಾವವನ್ನು ಬದಲಾಯಿಸಬಾರದು ಎಂಬ ತೀರ್ಪು ಈ ಕೇಸಿನ ವಿಶೇಷತೆಯಾಗಿತ್ತು.
ಕೇರಳ ಸರಕಾರದ ಭೂಪರಿಷ್ಕರಣೆ ಪ್ರಕಾರ ಕಾಸರಗೋಡು ಸಮೀಪದ ಎಡನೀರು ಮಠದ ಆಸ್ತಿಯನ್ನು ಕೇರಳ ಸರಕಾರ ಸ್ವಾಧೀನಪಡಿಸುವುದಕ್ಕೆ ಸಂಬಂಧಿಸಿದಂತೆ ಪ್ರಕರಣವಾಗಿತ್ತು. ಎಡನೀರು ಮಠಾಧೀಶ ಕೇಶವಾನಂದ ಭಾರತೀ ಸ್ವಾಮೀಜಿ ಇದರ ವಿರುದ್ಧ ಸುಪ್ರೀಂಕೋರ್ಟ್‌ಗೆ ದಾವೆ ಹೂಡಿ ಭೂಪರಿಷ್ಕರಣೆ ಕಾಯ್ದೆ ಮಾನ್ಯತೆಯನ್ನು ಪ್ರಶ್ನಿಸಿದ್ದರು. ಇದರೊಂದಿಗೆ ಧಾರ್ಮಿಕ ಹಕ್ಕು, ಮಠಗಳನ್ನು ನಡೆಸಲು ಇರುವ ಹಕ್ಕು, ಸಮಾನತೆಯ ಹಕ್ಕು, ಆಸ್ತಿ ಹಕ್ಕು ಮುಂತಾದ ಮೂಲಭೂತ ಹಕ್ಕುಗಳನ್ನು ಸಂರಕ್ಷಿಸುವ ಕುರಿತು ಉಲ್ಲೇಖಿಸಲಾಗಿತ್ತು. ಸುಮಾರು 68 ದಿನಗಳ ಕಾಲ ನಡೆದ ವಾದ ಪ್ರತಿವಾದ ನಡೆದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kasaragod: ಕಾರು-ಕೆಎಸ್ಸಾರ್ಟಿಸಿ ಬಸ್ ಡಿಕ್ಕಿ; ಐವರು ವೈದ್ಯ ವಿದ್ಯಾರ್ಥಿಗಳ ಸಾವು
Heavy Rain: ಕಾಸರಗೋಡು ಜಿಲ್ಲಾದ್ಯಂತ ಭಾರೀ ಮಳೆ
Kasaragod: ಮನೆಯಿಂದ 1 ಕೋ.ರೂ. ನಗದು, 300 ಪವನ್ ಚಿನ್ನ ಕಳವು; ನೆರೆಮನೆ ನಿವಾಸಿಯ ಬಂಧನ
Cyclone Fengal Effect: ಕರಾವಳಿ ಸೇರಿ ಹಲವೆಡೆ ಭಾರೀ ಮಳೆ; ನಾಳೆಯೂ ಆರೆಂಜ್ ಅಲರ್ಟ್!
Kasaragodu: ಲಂಡನ್ ಚಾರ್ಲ್ಸ್ ದೊರೆಗೆ ಕಾಸರಗೋಡು ಮೂಲದ ಮಹಿಳೆ ಸೆಕ್ರೆಟರಿ
MUST WATCH
ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಬೃಹತ್ ಪ್ರತಿಭಟನೆ
ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್‌ಗಾಗಿ ಅಡಿಲೇಡ್‌ಗೆ ಆಗಮಿಸಿದ ಟೀಮ್ ಇಂಡಿಯಾ
60 ಅಡಿ ಆಳದ ಬಾವಿಗೆ ಬಿದ್ದ 94 ವರ್ಷದ ಅಜ್ಜಿಯ ರಕ್ಷಣೆ
ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.