ಶಬರಿಮಲೆಗೆ ಯುವತಿಯರ ಪ್ರವೇಶ: ಇಂದು ಹರತಾಳ
Team Udayavani, Jan 3, 2019, 5:06 AM IST
ಕಾಸರಗೋಡು: ಯುವತಿಯರಿಬ್ಬರು ಜ. 2ರಂದು ಮುಂಜಾನೆ ಶಬರಿಮಲೆ ಸನ್ನಿಧಾನ ತಲುಪಿ ದೇವರ ದರ್ಶನ ಪಡೆದ ಹಿನ್ನೆಲೆಯಲ್ಲಿ ಕಾಸರಗೋಡು ಜಿಲ್ಲೆಯಾದ್ಯಂತ ಪ್ರತಿಭಟನೆ ನಡೆಯಿತು.
ಘಟನೆ ಬಗ್ಗೆ ವರದಿಯಾಗುತ್ತಿದ್ದಂತೆ ನಗರದಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆ ಹಾಗೂ ಪ್ರತಿಭಟನೆ ಮೆರವಣಿಗೆ ನಡೆಯಿತು. ಶಬರಿಮಲೆ ಕ್ರಿಯಾ ಸಮಿತಿ ಜ. 3ರಂದು ಬೆಳಗ್ಗೆ 6 ಗಂಟೆ ಯಿಂದ ಸಂಜೆ 6ರ ತನಕ ರಾಜ್ಯ ವ್ಯಾಪಿ ಹರತಾಳಕ್ಕೆ ಕರೆ ನೀಡಿದೆ. ಬಿಜೆಪಿ, ಸಂಘ ಪರಿವಾರ ಸಹಿತ 64 ಸಂಘಟನೆಗಳು ಬೆಂಬಲ ಘೋಷಿಸಿವೆ.
ಶಿಷ್ಟಾಚಾರ ಮೀರದಿರಿ: ಪರ್ಯಾಯ ಶ್ರೀ
ಉಡುಪಿ: ರಾಷ್ಟ್ರಪತಿಗಳು, ಸರಕಾರಕ್ಕೆ ಪ್ರೊಟೋಕಾಲ್ ಇರುವಂತೆ ಧಾರ್ಮಿಕ ಸ್ಥಳಗಳಲ್ಲಿಯೂ ಪರಂಪರಾಗತ ಸಂಪ್ರದಾಯಗಳಿರುತ್ತವೆ. ಅವನ್ನು ಮುರಿಯಲಾಗದು ಎಂದು ಪರ್ಯಾಯ ಶ್ರೀಪಾದರು ಪ್ರತಿಕ್ರಿಯಿಸಿದ್ದಾರೆ.
ಮಂಗಳೂರಿನಲ್ಲಿ ಇಂದು ಪ್ರತಿಭಟನೆ
ಮಂಗಳೂರು: ಶಬರಿಮಲೆ ಅಯ್ಯಪ್ಪ ದೇವಸ್ಥಾನಕ್ಕೆ ಮಹಿಳೆಯರ ಬಲಾತ್ಕಾರ ಪ್ರವೇಶವನ್ನು ಮಂಗ ಳೂರಿನ ಅಯ್ಯಪ್ಪ ಭಕ್ತ ವೃಂದ ಖಂಡಿಸಿದೆ. ಇದನ್ನು ವಿರೋಧಿಸಿ ಶಬರಿಮಲೆ ಕ್ಷೇತ್ರ ಸಂರಕ್ಷಣ ಸಮಿತಿ ಜ.3ರಂದು ಕರೆ ನೀಡಿರುವ ಕೇರಳ ಬಂದ್‌ನ್ನು ಬೆಂಬಲಿಸಲಾಗುವುದು ಎಂದು ಗುರುಸ್ವಾಮಿ ವಿಶ್ವನಾಥ ಕಾಯರ್‌ಪಲ್ಕೆ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಹಿಂದೂ ಯುವ ಸೇನೆ ಕೇಂದ್ರೀಯ ಮಂಡಳಿ, ಶ್ರೀರಾಮಸೇನೆ ಕೂಡ ಘಟನೆಯನ್ನು ಖಂಡಿಸಿವೆ.
ಇಂದು ಬೃಹತ್ ಪ್ರತಿಭಟನೆ
ಉಡುಪಿ: ಜಿಲ್ಲಾ ಶಬರಿಮಲೆ ಕ್ಷೇತ್ರ ಸಂರಕ್ಷಣ ಸಮಿತಿಯಿಂದ ಜ. 3ರ ಅಪರಾಹ್ನ 3ಕ್ಕೆ ಅಜ್ಜರಕಾಡು ಭುಜಂಗ ಪಾರ್ಕ್ ಸೈನಿಕರ ಹುತಾತ್ಮರ ಸ್ಮಾರಕದ ಮುಂಭಾಗದಲ್ಲಿ ಪ್ರತಿಭಟನೆ ಆಯೋಜಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Sirsi: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ ಪರಾರಿ; ಆರೋಪಿ ಬಂಧನ
EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್ ಟೀಕೆ
Sirsi: ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾದ ಸಂಸದ ಕಾಗೇರಿ
India: 68 ಮಿಲಿಯನ್ ಟನ್ ಆಹಾರ ಪೋಲು…ದೇಶದ ಅಭಿವೃದ್ಧಿ, ಜನರ ಸಾವು, ಆಹಾರ ಭದ್ರತೆಗೂ ಮಾರಕ
ದೋಟಿಹಾಳ: ಉದ್ಘಾಟನೆ ಕಾಣದೆ ಅಂಗನವಾಡಿ ಕಟ್ಟಡ ಅನಾಥ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.