ಶಿಕ್ಷಣ ವಲಯಕ್ಕಾಗಿ ನಡೆಸುವ ವೆಚ್ಚ ಮುಂದಿನ ಜನಾಂಗದ ಏಳಿಗೆಗೆ ಮೂಲ ಬಂಡವಾಳ: ಕಂದಾಯ ಸಚಿವ
Team Udayavani, Sep 22, 2020, 7:29 PM IST
ಪ್ರಾಂದರ್ಕಾವ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ನೂತನ ಕಟ್ಟಡ ಮತ್ತು ಸಭಾಂಗಣವನ್ನು ಕಂದಾಯ ಸಚಿವ ಇ.ಚಂದ್ರಶೇಖರನ್ ಉದ್ಘಾಟಿಸಿದರು.
ಕಾಸರಗೋಡು: ಶಿಕ್ಷಣ ವಲಯಕ್ಕಾಗಿ ನಡೆಸುವ ವೆಚ್ಚ ಮುಂದಿನ ಜನಾಂಗದ ಏಳಿಗೆಗೆ ಮೂಲ ಬಂಡವಾಳ ಎಂದು ಕಂದಾಯ ಸಚಿವ ಇ.ಚಂದ್ರಶೇಖರನ್ ಅಭಿಪ್ರಾಯಪಟ್ಟಿದ್ದಾರೆ.
ಪನತ್ತಡಿ ಗ್ರಾಮ ಪಂಚಾಯತ್‌ನ ಪ್ರಾಂದರ್ಕಾವ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗಾಗಿ ರಾಜ್ಯ ಸರಕಾರವು ಸಾರ್ವಜನಿಕ ಶಿಕ್ಷಣ ಯಜ್ಞ ಮೂಲ ಸೌಲಭ್ಯ ನಿಧಿಯಿಂದ ಒಂದು ಕೊಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ ನೂತನ ಕಟ್ಟಡ ಮತ್ತು ಸಭಾಂಗಣವನ್ನು ಉದ್ಘಾಟಿಸಿ ಅವರು ಮಾತನಾಡಿದರು.
5 ವರ್ಷಗಳ ಅವಧಿಯಲ್ಲಿ ಕಾಂಞಂಗಾಡ್ ವಿಧಾನಸಭೆ ವ್ಯಾಪ್ತಿಯಲ್ಲಿ ಶಾಸಕರ ನಿಧಿಯಿಂದ 10 ಕೋಟಿ ರೂ.ವನ್ನು ಶಿಕ್ಷಣ ವಲಯಕ್ಕಾಗಿ ಮಾತ್ರ ವೆಚ್ಚ ಮಾಡಲಾಗಿದೆ. ಜೊತೆಗೆ ಕಿಫ್ ಬಿ ಮುಖಾಂತರ 40 ಕೋಟಿ ರೂ.ನ ಚಟುವಟಿಕೆಗಳು ಇಲ್ಲಿ ನಡೆದಿವೆ. ಇವು ಮುಂದಿನ ಜನಾಂಗದ ಶೈಕ್ಷಣಿಕ ಉನ್ನತಿಗೆ ತಳಹದಿಯಾಗಲಿವೆ ಎಂದರು.
ಪ್ಲಾಸ್ಟಿಕ್ ನಿರ್ಮೂಲನ ಕಾರ್ಯಕ್ರಮದ ಅಂಗವಾಗಿ ಪನತ್ತಡಿ ಗ್ರಾಮ ಪಂಚಾಯತ್ ವತಿಯಿಂದ ತಯಾರಿಸಲಾದ ಬಟ್ಟೆ ಚೀಲ ವಿತರಣೆಯನ್ನು ಸಚಿವ ನಡೆಸಿದರು. ಪಂಚಾಯತ್ ಅಧ್ಯಕ್ಷ ಪಿ.ಜಿ.ಮೋಹನನ್ ಅಧ್ಯಕ್ಷತೆ ವಹಿಸಿದ್ದರು. ಪರಪ್ಪ ಬ್ಲಾಕ್ ಪಂಚಾಯತ್ ಅಧ್ಯಕ್ಷ ಪಿ. ರಾಜನ್, ಜಿಲ್ಲಾ ಪಂಚಾಯತ್ ಸದಸ್ಯರಾದ ಎಂ. ನಾರಾಯಣನ್, ಪದ್ಮಾವತಿ, ಪನತ್ತಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಕೆ. ಹೇಮಾಂಬಿಕಾ, ಸ್ಥಾಯೀ ಸಮಿತಿ ಅಧ್ಯಕ್ಷರು, ಸದಸ್ಯರು, ಶಾಲೆಯ ಶಿಕ್ಷಕರು, ಸಿಬಂದಿ ವೃಂದದವರು ಮೊದಲಾದವರು ಉಪಸ್ಥಿತರಿದ್ದರು. ಸಹಾಯಕ ಕಾರ್ಯಕಾರಿ ಎಂಜಿನಿಯರ್ ಸುನಿಲ್ ಕುಮಾರ್ ವರದಿ ವಾಚಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್
VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್
Dandeli: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ : ಪೋಕ್ಸೋ ಪ್ರಕರಣದಡಿ ಓರ್ವನ ಬಂಧನ
Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು
Naxalites ಶರಣಾಗತಿಯಲ್ಲಿ ಟ್ವಿಸ್ಟ್; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.