ಆರು ವರ್ಷದ ಮಗುವನ್ನು ಬಸ್ಸಿನಲ್ಲಿ ಮರೆತು ಹೋದ ಹೆತ್ತಬ್ಬೆ !
Team Udayavani, Dec 12, 2019, 4:14 AM IST
ಕಾಸರಗೋಡು: ಮಹಿಳೆಯೊಬ್ಬರು ತನ್ನ ಆರು ವರ್ಷದ ಮಗುವನ್ನು ಮರೆತು ಬಸ್ಸಿನಲ್ಲೇ ಬಿಟ್ಟು ಹೋದ ಘಟನೆ ನಗರದಲ್ಲಿ ಬುಧವಾರ ನಡೆದಿದೆ.
ಬಸ್ ಹೊಸ ಬಸ್ ನಿಲ್ದಾಣಕ್ಕೆ ಆಗಮಿಸಿದಾಗ ಅಳುತ್ತಿರುವ ಮಗುವನ್ನು ಗಮನಿಸಿದ ಸಿಬಂದಿ ಮಗುವನ್ನು ಪಿಂಕ್ ಪೊಲೀಸರಿಗೆ ಹಸ್ತಾಂತರಿಸಿದರು. ಮಗುವಿನ ಕೈಯಲ್ಲಿದ್ದ ಶಾಲಾ ಬ್ಯಾಗ್‌ನಲ್ಲಿದ್ದ ಡೈರಿಯಲ್ಲಿ ಇದ್ದ ಫೋನ್ ಸಂಖ್ಯೆಗೆ ಕರೆ ಮಾಡಿದಾಗ ಯಾರೂ ಸ್ವೀಕರಿಸಲಿಲ್ಲ. ಬಳಿಕ ಪೊಲೀಸರು ಮಗುವನ್ನು ಶಾಲೆಗೆ ಕರೆದುಕೊಂಡು ಹೋದರು. ಶಾಲೆಯವರ ಮುಖಾಂತರ ಸಂಬಂಧಿಕರನ್ನು ಕರೆಸಿ ಮಗುವನ್ನು ಹಸ್ತಾಂತರಿಸಲಾಯಿತು.
ಮಗುವಿನ ತಾಯಿ ವಿದ್ಯಾನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಂಬಂಧಿಯೊಬ್ಬರನ್ನು ನೋಡಲೆಂದು ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದರು. ವಿದ್ಯಾನಗರದ ಕಾಲೇಜು ಸಮೀಪ ಬಸ್ ನಿಲ್ಲಿಸಿದಾಗ ಮಗುವನ್ನು ಮರೆತು ಇಳಿದಿದ್ದರು.
ತಾಯಿಗೆ ನೆನಪೇ ಇರಲಿಲ್ಲ !
ವಿದ್ಯಾನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವ್ಯಕ್ತಿಯೊಬ್ಬರನ್ನು ನೋಡಲೆಂದು ಅವರ ಸಂಬಂಧಿಕರು ಬಂದಿದ್ದು, ಬಸ್ ವಿದ್ಯಾನಗರ ತಲುಪುತ್ತಿದ್ದಂತೆ ಮಗುವನ್ನು ಮರೆತು ಇಳಿದಿದ್ದರು. ಪೊಲೀಸರು ಮಗುವನ್ನು ವಾರಸುದಾರರಿಗೆ ಒಪ್ಪಿಸಿದ ಬಳಿಕವಷ್ಟೇ ತಾಯಿಗೆ ತನ್ನೊಂದಿಗೆ ಮಗು ಕೂಡ ಬಂದಿತ್ತು ಎಂಬುದು ಜ್ಞಾಪಕವಾಯಿತು!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Sandalwood: ನಿಮ್ಮ ನಿರೀಕ್ಷೆಗೆ ನಾವು ಜವಾಬ್ದಾರರು: ʼನಾ ನಿನ್ನ ಬಿಡಲಾರೆ’ ಇಂದು ತೆರೆಗೆ
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
Pension Fraud: ಕಲ್ಯಾಣ ಪಿಂಚಣಿ ಲಪಟಾವಣೆ; ಸಿಕ್ಕಿ ಬಿದ್ದ 1,458 ಸರಕಾರಿ ಸಿಬಂದಿ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಾಗಮ ಸಂಭವ
Puttur: ಇದು ಅಜಿತರ ಸಾಹಸ : ರಬ್ಬರ್ ತೋಟದಲ್ಲಿ ಕಾಫಿ ಘಮ ಘಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.