Fraud Case: ಆರೋಪಿ ರತೀಶ್ ಗೋವಾಕ್ಕೆ ಪರಾರಿ
Team Udayavani, May 16, 2024, 7:51 PM IST
ಮುಳ್ಳೇರಿಯ: ಕಾರಡ್ಕ ಅಗ್ರಿಕಲ್ಚರಿಸ್ಟ್ ವೆಲ್ಫೇರ್ ಕೋ-ಆಪರೇಟಿವ್ ಸೊಸೈಟಿಯ ಕಾರ್ಯದರ್ಶಿ ಕೆ.ರತೀಶ್ ನಡೆಸಿದ ಹಣಕಾಸು ವಂಚನೆ ಪ್ರಕರಣವನ್ನು ಕಾಸರಗೋಡು ಜಿಲ್ಲಾ ಕ್ರೈಂಬ್ರಾಂಚ್ ತನಿಖೆ ನಡೆಸಲಿದೆ. ಕ್ರೈಂಬ್ರಾಂಚ್ ಡಿವೈಎಸ್‌ಪಿ ಶಿಬು ಪಾಪಚ್ಚನ್ ನೇತೃತ್ವದಲ್ಲಿ ತಂಡಕ್ಕೆ ತನಿಖೆಯ ಹೊಣೆಗಾರಿಕೆ ವಹಿಸಿಕೊಡಲಾಗಿದೆ.
ಸೊಸೈಟಿಯ ಕಾರ್ಯದರ್ಶಿಯೂ, ಸಿಪಿಎಂ ಮುಳ್ಳೇರಿಯ ಲೋಕಲ್ ಸಮಿತಿ ಸದಸ್ಯನಾದ ಕೆ.ರತೀಶ್ ಸದಸ್ಯರಿಗೆ ತಿಳಿಯದೆ 4.76 ಕೋಟಿ ರೂ. ಸಾಲ ತೆಗೆದು ವಂಚಿಸಿದ್ದಾಗಿ ದೂರಲಾಗಿದೆ. ಇದರಂತೆ ಆದೂರು ಪೊಲೀಸರು ಕೇಸು ದಾಖಲಿಸಿ ತನಿಖೆ ನಡೆಸುತ್ತಿದ್ದಂತೆ ರತೀಶ್ ಕರ್ನಾಟಕಕ್ಕೆ ಪರಾರಿಯಾಗಿದ್ದನು. ಅಲ್ಲಿಂದ ಹಾಸನಕ್ಕೆ ತೆರಳಿ ಗೋವಾಕ್ಕೆ ತೆರಳಿದ್ದಾನೆಂದು ಸೂಚನೆಯಿದೆ. ಬೆಂಗಳೂರು ಸೈಬರ್ ಸೆಲ್‌ನ ಸಹಾಯದೊಂದಿಗೆ ನಡೆಸಿದ ತನಿಖೆಯಲ್ಲಿ ರತೀಶ್ ಕರ್ನಾಟಕದಿಂದ ಪರಾರಿಯಾಗಿರುವುದಾಗಿ ತಿಳಿದು ಬಂದಿದೆ. ಆದೂರು ಪೊಲೀಸರು ಕರ್ನಾಟಕ ಸಹಿತ ವಿವಿದೆಡೆ ಶೋಧ ನಡೆಸುತ್ತಿದ್ದಾರೆ.
ನಕಲಿ ದಾಖಲೆಗಳನ್ನು ಸೃಷ್ಟಿಸಿ ಸಹಕಾರಿ ಸಂಘದಿಂದ 4.76 ಕೋಟಿ ರೂ. ರತೀಶ್ ಲಪಟಾಯಿಸಿರುವುದಾಗಿ ಕೇಸು ದಾಖಲಿಸಲಾಗಿದೆ. ಬೆಂಗಳೂರು ಹಾಗು ವಯನಾಡಿನಲ್ಲಿ ರತೀಶ್ ಸ್ಥಳ ಖರೀದಿಸಿರುವುದಾಗಿ ಮಾಹಿತಿ ಲಭಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madikeri: ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ
Madikeri:ರೈಲ್ವೆ ಕಂಬಿ ಬೇಲಿಯನ್ನೇ ಮುರಿದ ಕಾಡಾನೆಗಳು:ನಿತ್ಯ ಉಪಟಳದಿಂದ ಬೇಸತ್ತ ಗ್ರಾಮಸ್ಥರು
Madikeri: ವೀರ ಸೇನಾನಿಗಳಿಗೆ ಅಗೌರವ: ಆರೋಪಿ ಸೆರೆ
Kumbale: ವರ್ಕಾಡಿ ಪ್ಲೈವುಡ್ ಕಾರ್ಖಾನೆಯಲ್ಲಿ ಬೆಂಕಿ ಅನಾಹುತ: ಬೆಂಕಿ: ಕೋಟ್ಯಂತರ ರೂ. ನಷ್ಟ
Kasargod: ಬೆಕ್ಕಿಗಾಗಿ ಬಾವಿಗಿಳಿದ ವಿದ್ಯಾರ್ಥಿಯ ರಕ್ಷಣೆ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Smart meters: ನೀರು ಸಂರಕ್ಷಿಸುವ ವಿಚಾರದಲ್ಲಿ ಕ್ರಾಂತಿ ಮಾಡಿದ ಸ್ಮಾರ್ಟ್ ವಾಟರ್ ಮೀಟರ್
Viral Pics: ಡೇಟಿಂಗ್ ರೂಮರ್ಸ್ ನಡುವೆ ವಿಜಯ್ – ರಶ್ಮಿಕಾ ಸೀಕ್ರೆಟ್ ಲಂಚ್ ಡೇಟ್
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.